ಬೆಂಗಳೂರು: ರಾಜ್ಯದ ವರ್ತಕರಿಗೆ ಭರ್ಜರಿ ಸಿಹಿಸುದ್ದಿ ಎನ್ನುವಂತೆ ಸಣ್ಣ ವ್ಯಾಪಾರಿಗಳ ಹಳೆಯ ಬಾಕಿ ತೆರಿಗೆಯನ್ನು ಮನ್ನಾ ಮಾಡುವುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಘೋಷಣೆ ಮಾಡಿದ್ದಾರೆ.
ಇಂದು ಗೃಹಕಚೇರಿ ಕೃಷ್ಣಾದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ಹಾಲು, ತರಕಾರಿ, ಮಾಂಸ, ಹಣ್ಣಿನಂತಹ ಅಗತ್ಯ ವಸ್ತುಗಳಿಗೆ ತೆರಿಗೆ ವಿನಾಯಿತಿ ಇದೆ. ಇಂತಹ ವ್ಯಾಪಾರಿಗಳಿಗೆ ನೋಟಿಸ್ ಕೊಟ್ಟರೂ ತೆರಿಗೆ ವಸೂಲಿ ಮಾಡಲ್ಲ. ಆದರೇ ಯಾರು ಕಾಯ್ದೆಯಂತೆ ತೆರಿಗೆ ಕಟ್ಟಬೇಕೋ ಅವರು ಪಾವತಿಸಬೇಕು ಎಂದರು.
ನೋಟಿಸ್ ನೀಡಿರುವ ಹಳೆಯ ತೆರಿಗೆ ಬಾಕಿಯನ್ನು ಮನ್ನಾ ಮಾಡುತ್ತೇವೆ. ವ್ಯಾಪಾರಿಗಳಿಂದ ಹಳೆಯ ತೆರಿಗೆ ಬಾಕಿಯನ್ನು ವಸೂಲಿ ಮಾಡುವುದಿಲ್ಲ. ಆದರೆ ಅವರೆಲ್ಲರೂ ಕಡ್ಡಾಯವಾಗಿ ಜಿಎಸ್ಟಿ ನೋಂದಣಿ ಮಾಡಬೇಕು ಎಂಬುದಾಗಿ ಗೃಹಕಚೇರಿಯಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಸ್ಪಷ್ಟ ಪಡಿಸಿದ್ದಾರೆ.
ಸಣ್ಣ ವ್ಯಾಪಾರಿಗಳಿಗೆ ನೆರವಾಗುವಂತೆ ಸಹಾಯವಾಣಿ ಆರಂಭಿಸಬೇಕು. ಜಿಎಸ್ಟಿ ಕುರಿತು ಸರಿಯಾಗಿ ಮಾಹಿತಿ ಇಲ್ಲದ ಕಾರಣ ಗೊಂದಲ ಉಂಟಾಗಿದೆ. ಜಾಗೃತಿ ಕಾರ್ಯಕ್ರಮ ಕೈಗೊಳ್ಳಬೇಕು. ಒಂದು ಬಾರಿಗೆ ಹಳೆಯ ಬಾಕಿಯನ್ನು ಮನ್ನಾ ಮಾಡಬೇಕು ಎಂದು ಮನವಿ ಸಲ್ಲಿಸಿದರು.
ಯುಪಿಐ ಅಡಿ ರೂ. 40ಲಕ್ಷಕ್ಕೂ ಅಧಿಕ ವಹಿವಾಟು ಮಾಡಿರುವವರಿಗೆ ಮಾತ್ರ ಜಿಎಸ್ಟಿ ನೊಟೀಸ್ ನೀಡಲಾಗಿದೆ. ಆರಂಭದಲ್ಲಿ ಜಿಎಸ್ಟಿ ನೊಂದಣಿ ಮಾಡುವಂತೆ ನೋಟಿಸ್ ನೀಡಲಾಗಿತ್ತು.
ಹಾಲು, ತರಕಾರಿ, ಮಾಂಸ, ಹಣ್ಣಿನಂತಹ ಅಗತ್ಯ ಆಹಾರ ವಸ್ತುಗಳಿಗೆ ತೆರಿಗೆ ವಿನಾಯಿತಿ ಇದ್ದು, ಅಂತಹ ವ್ಯಾಪಾರಿಗಳಿಗೆ ನೊಟೀಸ್ ಕೊಟ್ಟಿದ್ದರೂ, ಅವರಿಂದ ತೆರಿಗೆ ವಸೂಲು ಮಾಡುವುದಿಲ್ಲ. ಆದರೆ ಯಾರು ಕಾಯ್ದೆ ಪ್ರಕಾರ ತೆರಿಗೆ ಕಟ್ಟಬೇಕಾಗಿದೆಯೋ ಅವರು ಕಟ್ಟಬೇಕು.