ಬೆಂಗಳೂರು : ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆಗೆ ರಾಜ್ಯಪಾಲರ ಅಂಕಿತ ದೊರೆತಿದ್ದು, ಇಂದಿನಿಂದ ಜಾರಿಯಾಗಲಿದೆ. ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆಯಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇನ್ನು ಮುಂದೆ ಬೆಂಗಳೂರು – ಗ್ರೇಟರ್ ಬೆಂಗಳೂರು ಆಗಲಿದೆ. ಗ್ರೇಟರ್ ಬೆಂಗಳೂರು ಪ್ರದೇಶದಲ್ಲಿ ಕನಿಷ್ಠ ಮೂರು ಪಾಲಿಕೆ ರಚನೆಯಾಗುವ ಸಾಧ್ಯತೆಯಿದೆ. ರಾಜ್ಯದ ಮುಖ್ಯಮಂತ್ರಿಗಳು ಪ್ರಾಧಿಕಾರದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದು, ಮುಂದಿನ ದಿನಗಳಲ್ಲಿ ಈ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದರು.
ಮಳೆ ಅನಾಹುತಕ್ಕೆ ಸೂಕ್ತ ಪರಿಹಾರ
ರಾಜ್ಯದಲ್ಲಿ ಮಳೆಯಿಂದಾಗಿ ಅನಾಹುತಗಳು ನಡೆಯುತ್ತಿದ್ದು, ಈ ಬಗ್ಗೆ ಸರ್ಕಾರದ ಕ್ರಮದ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ, ಮಳೆಯಿಂದಾಗಿ ಸಂಭವಿಸುವ ಅನಾಹುತಗಳಿಗೆ ಪರಿಹಾರ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಮನೆ ಬದಲಿಸಿದ್ರೆ ಗೃಹಜ್ಯೋತಿ ಸೌಲಭ್ಯ ಹೇಗಪ್ಪಾ ಅಂತ ಚಿಂತೆ ಆಗಿದ್ರೆ, ಇನ್ನು ಯೋಚನೆ ಬಿಡಿ.. ಹೀಗೆ ಮಾಡಿ!