Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬೀದಿ ನಾಯಿಗಳಿಗೆ ಆಹಾರ ನೀಡುವಂತಿಲ್ಲ: ಸುಪ್ರೀಂ ಕೋರ್ಟ್‌ನಿಂದ ಕಟ್ಟುನಿಟ್ಟಿನ ಆದೇಶ | Stray Dogs

22/08/2025 11:46 AM

BREAKING : ಆಕ್ರಮಣಕಾರಿ ನಾಯಿಗಳಿಗೆ ಬೀದಿಗಳಲ್ಲಿ ಆಹಾರ ಕೊಡಬೇಡಿ : ಎಲ್ಲಾ ರಾಜ್ಯಗಳಿಗೆ ಸುಪ್ರೀಂಕೋರ್ಟ್ ನೋಟಿಸ್.!

22/08/2025 11:44 AM

ರಾಜ್ಯದ ಜನತೆಗೆ ಗುಡ್ ನ್ಯೂಸ್: 30X40 ಅಡಿ ನಿವೇಶನದವರೆಗಿನ ಕಟ್ಟಡಗಳಿಗೆ `OC-CC’ ವಿನಾಯಿತಿ

22/08/2025 11:30 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸರ್ಕಾರಿ ಪ್ರಾಥಮಿಕ ‌‍‍ & ಪ್ರೌಢ ಶಾಲೆಗಳ ಹಾಗೂ ಪದವಿ ಪೂರ್ವ ಕಾಲೇಜುಗಳ ಶಿಕ್ಷಕರು/ಉಪನ್ಯಾಸಕರ ನೇಮಕಕ್ಕೆ ಗ್ರೀನ್‌ ಸಿಗ್ನಲ್‌
KARNATAKA

ಸರ್ಕಾರಿ ಪ್ರಾಥಮಿಕ ‌‍‍ & ಪ್ರೌಢ ಶಾಲೆಗಳ ಹಾಗೂ ಪದವಿ ಪೂರ್ವ ಕಾಲೇಜುಗಳ ಶಿಕ್ಷಕರು/ಉಪನ್ಯಾಸಕರ ನೇಮಕಕ್ಕೆ ಗ್ರೀನ್‌ ಸಿಗ್ನಲ್‌

By kannadanewsnow0718/02/2024 2:20 PM

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಶುಕ್ರವಾರ ತಮ್ಮ ಹದಿನೈದನೇ ಬಜೆಟ್‌ ಅನ್ನು ಮಂಡನೆ ಮಾಡಿದ್ದಾರೆ ಈ ನಡುವೆ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಹಾಗೂ ಪದವಿ ಪೂರ್ವ ಕಾಲೇಜುಗಳ ಶಿಕ್ಷಕರು/ಉಪನ್ಯಾಸಕರ ನೇಮಕಕ್ಕೆ ಗ್ರೀನ್‌ ಸಿಗ್ನಲ್‌ ನೀಡಿದ್ದಾರೆ.

ಅವರು ಬಜೆಟ್‌ನಲ್ಲಿ ಉಲ್ಲೇಖ ಮಾಡಿರುವ ಪ್ರಮುಖ ಮಾಹಿತಿಗಳ ವಿವರ ಹೀಗಿದೆ.

96. ಸರ್ಕಾರಿ ಶಾಲೆಗಳಲ್ಲಿ ಗುಣಾತ್ಮಕ ಶಿಕ್ಷಣ ಮತ್ತು ಅಗತ್ಯ ಮೂಲಸೌಕರ್ಯ ಒದಗಿಸಲು ನಮ್ಮ ಸರ್ಕಾರ ವಿಶೇಷ ಆಸಕ್ತಿ ವಹಿಸಿದೆ. ಸರ್ಕಾರಿ ಶಾಲೆಯ ಮಕ್ಕಳೂ ಸ್ಪರ್ಧಾತ್ಮಕ ಜಗತ್ತಿನಲ್ಲಿ ಯಶಸ್ವಿಯಾಗಬೇಕೆಂಬ ಆಶಯದೊಂದಿಗೆ ನಮ್ಮ ಸರ್ಕಾರ ಕಾರ್ಯನಿರ್ವಹಿಸುತ್ತಿದೆ. ಈ ನಿಟ್ಟಿನಲ್ಲಿ ಕೆಳಕಂಡ ಉಪಕ್ರಮಗಳನ್ನು ಕೈಗೊಳ್ಳಲಾಗುವುದು;

ಶಾಲಾ/ಕಾಲೇಜು ಕೊಠಡಿಗಳ ನಿರ್ಮಾಣ ಹಾಗೂ ಶೌಚಾಲಯಗಳಿಗೆ ಕಾಮಗಾರಿಗಾಗಿ ಹಣ ಮೀಸಲಿಡಲಾಗಿದೆ. 850 ಕೋಟಿ

ಶಾಲೆಯ ಮಕ್ಕಳಿಗೆ ನಮ್ಮ ರಾಷ್ಟ್ರಧರ್ಮ ಯಾವುದು ಎಂದು ಕೇಳಿದರೆ, ಭಾವೈಕ್ಯತೆಯೇ, ಸಾಮರಸ್ಯವೇ, ಪ್ರಜಾಪ್ರಭುತ್ವವೇ ನಮ್ಮ ರಾಷ್ಟ್ರಧರ್ಮ ಎಂದು ಹೇಳಿ. ಸಂವಿಧಾನವೇ ರಾಷ್ಟ್ರೀಯ ಗ್ರಂಥ ಎಂದು ನಮ್ಮ ಮಕ್ಕಳಿಗೆ ಹೇಳಿಕೊಡಿ.

95. ರಾಜ್ಯದ ಸರ್ಕಾರಿ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ಮೂಲಭೂತ ಸೌಕರ್ಯಗಳನ್ನು ನೀಡಲು ನಮ್ಮ ಸರ್ಕಾರ
ಹೆಚ್ಚಿನ ಪ್ರಾಮುಖ್ಯತೆ ನೀಡಿದ್ದು, 2023-24ನೇ ಸಾಲಿನಲ್ಲಿ 600 ಕೋಟಿ ರೂ.ಗಳನ್ನು ವೆಚ್ಚ ಮಾಡಲಾಗಿರುತ್ತದೆ. 2024-25ನೇ ಸಾಲಿನಲ್ಲಿ ಶಾಲಾ/ಕಾಲೇಜುಗಳ ಕೊಠಡಿ ನಿರ್ಮಾಣ, ದುರಸ್ತಿ, ಶೌಚಾಲಯ ನಿರ್ಮಾಣದಂತಹ ಕಾಮಗಾರಿಗಳನ್ನು 850 ಕೋಟಿ ರೂ. ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗುವುದು.

96. ಸರ್ಕಾರಿ ಶಾಲೆಗಳಲ್ಲಿ ಗುಣಾತ್ಮಕ ಶಿಕ್ಷಣ ಮತ್ತು ಅಗತ್ಯ ಮೂಲಸೌಕರ್ಯ ಒದಗಿಸಲು ನಮ್ಮ ಸರ್ಕಾರ ವಿಶೇಷ ಆಸಕ್ತಿ ವಹಿಸಿದೆ. ಸರ್ಕಾರಿ ಶಾಲೆಯ ಮಕ್ಕಳೂ ಸ್ಪರ್ಧಾತ್ಮಕ ಜಗತ್ತಿನಲ್ಲಿ ಯಶಸ್ವಿಯಾಗಬೇಕೆಂಬ ಆಶಯದೊಂದಿಗೆ ನಮ್ಮ ಸರ್ಕಾರ ಕಾರ್ಯನಿರ್ವಹಿಸುತ್ತಿದೆ. ಈ ನಿಟ್ಟಿನಲ್ಲಿ ಕೆಳಕಂಡ ಉಪಕ್ರಮಗಳನ್ನು ಕೈಗೊಳ್ಳಲಾಗುವುದು;

• ಪೂರ್ವ ಪ್ರಾಥಮಿಕ ಹಂತದಿಂದ ಪದವಿ ಪೂರ್ವ ತರಗತಿಗಳವರೆಗಿನ ಶಿಕ್ಷಣವನ್ನು ಒಂದೇ ಸೂರಿನಡಿ ನೀಡುವ ಉದ್ದೇಶದಿಂದ ಆಯ್ದ ಶಾಲೆಗಳನ್ನು ಸಿ.ಎಸ್.ಆರ್. ಅನುದಾನದಡಿ ಕರ್ನಾಟಕ ಪಬ್ಲಿಕ್ ಶಾಲೆಗಳನ್ನಾಗಿ ಅಭಿವೃದ್ಧಿಪಡಿಸಲಾಗುವುದು.
• 3 ರಿಂದ 5 ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಗಣಿತ ವಿಷಯದಲ್ಲಿ ಆಸಕ್ತಿ ಮೂಡಿಸಿ ಸಾಮರ್ಥ್ಯ ಹೆಚ್ಚಿಸಲು
J-PAL ಸಂಸ್ಥೆಯ ಸಹಯೋಗದಲ್ಲಿ ಗಣಿತ-ಗಣಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು.
• ಕಲಿಕೆಯಲ್ಲಿ ಹಿಂದುಳಿದ 6 ಮತ್ತು 7 ನೇ ತರಗತಿ ವಿದ್ಯಾರ್ಥಿಗಳಿಗೆ ಕಲಿಕಾ ಸಾಮರ್ಥ್ಯ ಸುಧಾರಿಸಲು 10 ಕೋಟಿ ರೂ. ಅನುದಾನದಲ್ಲಿ ಮರು ಸಿಂಚನ ಕಾರ್ಯಕ್ರಮ ಜಾರಿಗೊಳಿಸಲಾಗುವುದು.
• ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿರುವ ಸರ್ಕಾರಿ ಪ್ರೌಢ ಶಾಲೆಗಳಲ್ಲಿ ವಿಜ್ಞಾನ ಪ್ರಯೋಗಾಲಯ, ಕಂಪ್ಯೂಟರ್ ಲ್ಯಾಬ್, ಇಂಟರ್ನೆಟ್ ಸೌಲಭ್ಯಗಳನ್ನು ಎರಡು ವರ್ಷಗಳ ಪ್ಯಾಕೇಜ್ ಅಡಿಯಲ್ಲಿ ಒದಗಿಸಲು 50 ಕೋಟಿ ರೂ. ಮೀಸಲಿಡಲಾಗುವುದು.
• 2,000 ಸರ್ಕಾರಿ ಪ್ರಾಥಮಿಕ ಶಾಲೆಗಳನ್ನು ದ್ವಿಭಾಷಾ ಮಾಧ್ಯಮ (ಕನ್ನಡ ಮತ್ತು ಇಂಗ್ಲೀಷ್) ಶಾಲೆಗಳಾಗಿ ಪರಿವರ್ತಿಸಲಾಗುವುದು.
97. ಎಲ್ಲಾ ಶಿಕ್ಷಣ ಸಂಸ್ಥೆಗಳನ್ನು ಸಾಮಾಜಿಕ ಸಾಮರಸ್ಯ, ವೈಜ್ಞಾನಿಕ ಮನೋಭಾವ ಮತ್ತು ಸಹಬಾಳ್ವೆಯ ವಿದ್ಯಾ-ಕೇಂದ್ರಗಳನ್ನಾಗಿ ರೂಪಿಸಲು ನಾವು-ಮನುಜರು ಎಂಬ ಹೆಸರಿನಲ್ಲಿ ಎಲ್ಲಾ
ಶಾಲಾ-ಕಾಲೇಜುಗಳಲ್ಲಿ ವಾರಕ್ಕೆ ಎರಡು ಗಂಟೆಗಳ ವಿಚಾರ-ವಿಮರ್ಶೆ ಮತ್ತು ಸಂವಾದ ಚಟುವಟಿಕೆಗಳನ್ನು ಒಳಗೊಂಡ ತರಗತಿಗಳನ್ನು ನಡೆಸಲಾಗುವುದು.
98. ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ ಸಹಯೋಗದೊಂದಿಗೆ ಸರ್ಕಾರಿ ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳನ್ನು ಪ್ರಾರಂಭಿಸಲಾಗುವುದು.
99. ರಾಜ್ಯದಲ್ಲಿರುವ 74 ಆದರ್ಶ ವಿದ್ಯಾಲಯಗಳನ್ನು ವಾಣಿಜ್ಯ ಮತ್ತು ವಿಜ್ಞಾನ ವಿಷಯಗಳಲ್ಲಿ ಪದವಿ ಪೂರ್ವ ಕಾಲೇಜುಗಳನ್ನಾಗಿ ಉನ್ನತೀಕರಿಸಲಾಗುವುದು. ವಿದ್ಯಾರ್ಥಿಗಳ ಸಂಖ್ಯಾಬಲ ಹೆಚ್ಚಿರುವ ಆಯ್ದ 100 ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ
10 ಕೋಟಿ ರೂ. ವೆಚ್ಚದಲ್ಲಿ ಗಣಕ ವಿಜ್ಞಾನ ಸಂಯೋಜನೆಯನ್ನು ಪ್ರಾರಂಭಿಸಲಾಗುವುದು.
100. ವಿಜ್ಞಾನ ವಿಷಯಗಳಲ್ಲಿ 400 ಕ್ಕಿಂತ ಹೆಚ್ಚಿನ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿರುವ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿನ ವಿಜ್ಞಾನ ಪ್ರಯೋಗಾಲಯಗಳನ್ನು ಉನ್ನತೀಕರಿಸಲು ತಲಾ 10 ಲಕ್ಷ ರೂ. ನಂತೆ ಅನುದಾನ ಒದಗಿಸಲಾಗುವುದು.
101. ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿರುವ ಅಂದಾಜು
20,000 ವಿದ್ಯಾರ್ಥಿಗಳಿಗೆ NEET/JEE/CET ತರಬೇತಿ ಕಾರ್ಯಕ್ರಮಗಳನ್ನು 10 ಕೋಟಿ ರೂ.ಗಳ ವೆಚ್ಚದಲ್ಲಿ ಹಮ್ಮಿಕೊಳ್ಳಲಾಗುವುದು.
102. ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ಉಚಿತ ವಿದ್ಯುತ್ ಮತ್ತು ನೀರಿನ ಸೌಲಭ್ಯವನ್ನು ಒದಗಿಸಲು ನಮ್ಮ ಸರ್ಕಾರವು ನಿರ್ಧರಿಸಿದೆ. ಇದರಿಂದ ರಾಜ್ಯದ 46,829 ಸರ್ಕಾರಿ ಶಾಲೆಗಳು ಮತ್ತು 1,234 ಪದವಿ ಪೂರ್ವ ಕಾಲೇಜುಗಳಿಗೆ ಅನುಕೂಲವಾಗಲಿದೆ. ಈ ಉದ್ದೇಶಕ್ಕಾಗಿ
ಒಟ್ಟು 25 ಕೋಟಿ ರೂ. ವೆಚ್ಚವಾಗಲಿದೆ.
103. ರಾಜ್ಯದಲ್ಲಿ ಖಾಲಿ ಇರುವ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಹಾಗೂ ಪದವಿ ಪೂರ್ವ ಕಾಲೇಜುಗಳ ವಿವಿಧ ವಿಷಯಗಳ ಶಿಕ್ಷಕರು/ಉಪನ್ಯಾಸಕರುಗಳನ್ನು ನೇಮಕ ಮಾಡುವ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗುವುದು.

Green signal for appointment of teachers/lecturers in Government Primary & Secondary Schools and Pre-University Colleges ಸರ್ಕಾರಿ ಪ್ರಾಥಮಿಕ ‌‍‍ & ಪ್ರೌಢ ಶಾಲೆಗಳ ಹಾಗೂ ಪದವಿ ಪೂರ್ವ ಕಾಲೇಜುಗಳ ಶಿಕ್ಷಕರು/ಉಪನ್ಯಾಸಕರ ನೇಮಕಕ್ಕೆ ಗ್ರೀನ್‌ ಸಿಗ್ನಲ್‌
Share. Facebook Twitter LinkedIn WhatsApp Email

Related Posts

ರಾಜ್ಯದ ಜನತೆಗೆ ಗುಡ್ ನ್ಯೂಸ್: 30X40 ಅಡಿ ನಿವೇಶನದವರೆಗಿನ ಕಟ್ಟಡಗಳಿಗೆ `OC-CC’ ವಿನಾಯಿತಿ

22/08/2025 11:30 AM1 Min Read

BREAKING : ಕಾಂಗ್ರೆಸ್ ನಾಯಕಿ ಕುಸುಮಾ ನಿವಾಸದ ಮೇಲೆ E.D ದಾಳಿ : ದಾಖಲೆಗಳ ಪರಿಶೀಲನೆ | ED Raid

22/08/2025 11:20 AM1 Min Read

BREAKING : ಕನ್ನಡದ ಖ್ಯಾತ ಆ್ಯಂಕರ್ `ಅನುಶ್ರೀ’ ಮದುವೆಗೆ ಮುಹೂರ್ತ ಫಿಕ್ಸ್ : ಬೆಂಗಳೂರಿನ ರೆಸಾರ್ಟ್ ನಲ್ಲಿ ನಡೆಯಲಿದೆ ಅದ್ಧೂರಿ ಕಲ್ಯಾಣ.!

22/08/2025 11:18 AM1 Min Read
Recent News

ಬೀದಿ ನಾಯಿಗಳಿಗೆ ಆಹಾರ ನೀಡುವಂತಿಲ್ಲ: ಸುಪ್ರೀಂ ಕೋರ್ಟ್‌ನಿಂದ ಕಟ್ಟುನಿಟ್ಟಿನ ಆದೇಶ | Stray Dogs

22/08/2025 11:46 AM

BREAKING : ಆಕ್ರಮಣಕಾರಿ ನಾಯಿಗಳಿಗೆ ಬೀದಿಗಳಲ್ಲಿ ಆಹಾರ ಕೊಡಬೇಡಿ : ಎಲ್ಲಾ ರಾಜ್ಯಗಳಿಗೆ ಸುಪ್ರೀಂಕೋರ್ಟ್ ನೋಟಿಸ್.!

22/08/2025 11:44 AM

ರಾಜ್ಯದ ಜನತೆಗೆ ಗುಡ್ ನ್ಯೂಸ್: 30X40 ಅಡಿ ನಿವೇಶನದವರೆಗಿನ ಕಟ್ಟಡಗಳಿಗೆ `OC-CC’ ವಿನಾಯಿತಿ

22/08/2025 11:30 AM

ಏಷ್ಯಾಕಪ್ ತಂಡ ಪ್ರಕಟ: ಇಬ್ಬರು ರಾಷ್ಟ್ರೀಯ ಆಯ್ಕೆದಾರರನ್ನು ಬದಲಿಸಿದ ಬಿಸಿಸಿಐ | Asia Cup 2025

22/08/2025 11:26 AM
State News
KARNATAKA

ರಾಜ್ಯದ ಜನತೆಗೆ ಗುಡ್ ನ್ಯೂಸ್: 30X40 ಅಡಿ ನಿವೇಶನದವರೆಗಿನ ಕಟ್ಟಡಗಳಿಗೆ `OC-CC’ ವಿನಾಯಿತಿ

By kannadanewsnow5722/08/2025 11:30 AM KARNATAKA 1 Min Read

ಬೆಂಗಳೂರು: ರಾಜ್ಯದ ಜನತೆಗೆ ಸರ್ಕಾರವು ಸಿಹಿಸುದ್ದಿ ನೀಡಿದ್ದು, 30*40 ಅಡಿ ನಿವೇಶನದವರೆಗಿನ ಕಟ್ಟಡಗಳಿಗೆ ಪ್ರಾರಂಭಿಕ ಪ್ರಮಾಣ ಪತ್ರ(ಸಿಸಿ), ಸ್ವಾಧೀನ ಪ್ರಮಾಣ…

BREAKING : ಕಾಂಗ್ರೆಸ್ ನಾಯಕಿ ಕುಸುಮಾ ನಿವಾಸದ ಮೇಲೆ E.D ದಾಳಿ : ದಾಖಲೆಗಳ ಪರಿಶೀಲನೆ | ED Raid

22/08/2025 11:20 AM

BREAKING : ಕನ್ನಡದ ಖ್ಯಾತ ಆ್ಯಂಕರ್ `ಅನುಶ್ರೀ’ ಮದುವೆಗೆ ಮುಹೂರ್ತ ಫಿಕ್ಸ್ : ಬೆಂಗಳೂರಿನ ರೆಸಾರ್ಟ್ ನಲ್ಲಿ ನಡೆಯಲಿದೆ ಅದ್ಧೂರಿ ಕಲ್ಯಾಣ.!

22/08/2025 11:18 AM

ಶರನ್ನವರಾತ್ರಿಯ ಸಮಯದಲ್ಲಿ ಈ ಈ ರೀತಿಯಾದ ಒಂದು ಸಣ್ಣ ಹರಕೆ ಹೇಳಿ ನಿಮ್ಮ ಎಲ್ಲ ಕಷ್ಟಗಳು ದೂರವಾಗುತ್ತವಂತೆ..!

22/08/2025 11:06 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.