ಬೆಂಗಳೂರು : ಕಳಸಾ ಬಂಡೂರಿ ವಿಸ್ತೃತ ಯೋಜನೆಗೆ ಕೇಂದ್ರ ಜಲ ಆಯೋಗ ಒಪ್ಪಿಗೆ ನೀಡಿರುವುದು ಸ್ವಾಗತಾರ್ಹ. ಇದು ಸಮಸ್ತ ಕನ್ನಡಿಗರ ಹೋರಾಟಕ್ಕೆ ದೊರೆತ ಫಲ ಎನ್ನುವುದು ನನ್ನ ಸ್ಪಷ್ಟ ಅಭಿಪ್ರಾಯ. ರಾಜಕೀಯಕ್ಕೆ ಅತೀತವಾಗಿ ರೈತರು, ಕನ್ನಡಪರ ಹೋರಾಟಗಾರರು, ಕಾರ್ಮಿಕರು ಸೇರಿ ಎಲ್ಲರೂ ನಡೆಸಿದ ಸಮಷ್ಠಿ ಹೋರಾಟಕ್ಕೆ ಸಂದ ಜಯವಿದು ಎಂದು ಮಾಜಿ ಸಿಎಂ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.
ನಮ್ಮ ಜೆಡಿಎಸ್ ಪಕ್ಷ ಕನ್ನಡಿಗರ ಜತೆಗೂಡಿ ಹೋರಾಟ ನಡೆಸಿದೆ. ಮಾಜಿ ಪ್ರಧಾನಮಂತ್ರಿಗಳಾದ ದೇವೇಗೌಡರು ಅವರು ಸಂಸತ್ತಿನ ಒಳಗೆ, ಹೊರಗೆ ದೊಡ್ಡ ಸಂಘರ್ಷವನ್ನೇ ನಡೆಸಿದ್ದಾರೆ. ಕೆಲ ದಿನಗಳ ಹಿಂದೆ ಮಾನ್ಯ ಪ್ರದಾನಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಈ ಬಗ್ಗೆ ಮಾತುಕತೆ ನಡೆಸಿದ್ದರು ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.
ಕಳಸಾ ಬಂಡೂರಿ ಯೋಜನೆಗೆ ಸದ್ಯಕ್ಕೆ ಜಲ ಆಯೋಗ ಒಪ್ಪಿಗೆ ನೀಡಿದೆ. ಆದರೆ, ಸರ್ವೋಚ್ಚ ನ್ಯಾಯಾಲಯದಲ್ಲಿ ವ್ಯಾಜ್ಯ ಬಾಕಿ ಇದೆ. ಪರಿಸರ ಇಲಾಖೆಯ ಅನುಮತಿ ಇನ್ನೂ ಸಿಕ್ಕಿಲ್ಲ. ಇದೆಲ್ಲವನ್ನೂ ತ್ವರಿತವಾಗಿ ಮುಗಿಸಿಕೊಂಡು ಕಾಮಗಾರಿ ಆರಂಭ ಮಾಡಬೇಕಿದೆ. ರಾಜ್ಯ ಸರಕಾರ ಇನ್ನು ತಡ ಮಾಡುವುದು ಬೇಡ.3/3#ಕಳಸಾ_ಬಂಡೂರಿ
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) December 29, 2022
ಕಳಸಾ ಬಂಡೂರಿ ವಿಸ್ತೃತ ಯೋಜನೆಗೆ ಕೇಂದ್ರ ಜಲ ಆಯೋಗ ಒಪ್ಪಿಗೆ ನೀಡಿರುವುದು ಸ್ವಾಗತಾರ್ಹ. ಇದು ಸಮಸ್ತ ಕನ್ನಡಿಗರ ಹೋರಾಟಕ್ಕೆ ದೊರೆತ ಫಲ ಎನ್ನುವುದು ನನ್ನ ಸ್ಪಷ್ಟ ಅಭಿಪ್ರಾಯ. ರಾಜಕೀಯಕ್ಕೆ ಅತೀತವಾಗಿ ರೈತರು, ಕನ್ನಡಪರ ಹೋರಾಟಗಾರರು, ಕಾರ್ಮಿಕರು ಸೇರಿ ಎಲ್ಲರೂ ನಡೆಸಿದ ಸಮಷ್ಠಿ ಹೋರಾಟಕ್ಕೆ ಸಂದ ಜಯವಿದು.1/3#ಕಳಸಾ_ಬಂಡೂರಿ
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) December 29, 2022
BIGG NEWS : ‘ಕಳಸಾ ಬಂಡೂರಿ’ ಯೋಜನೆಗೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ : ಸದನದಲ್ಲಿ ಸಚಿವ ಕಾರಜೋಳ ಹರ್ಷ