ಬೆಂಗಳೂರು: ಗೃಹ ಜ್ಯೋತಿ ಯೋಜನೆಯ ಸೌಲಭ್ಯವನ್ನು ಮನೆ ಬದಲಿಸಿದರೂ ಮತ್ತೆ ಪಡೆಯುವಂತ ಅವಕಾಶವನ್ನು ರಾಜ್ಯ ಸರ್ಕಾರ ಕಲ್ಪಿಸಿದೆ. ನೀವು ಮನೆ ಬದಲಿಸಿದ್ದೀರಾ? ಮತ್ತೆ ಗೃಹ ಜ್ಯೋತಿ ಯೋಜನೆ ಪ್ರಯೋಜನ ಪಡೆಯಲು ಹೇಗೆ ಅರ್ಜಿ ಸಲ್ಲಿಸಬೇಕು ಎನ್ನುವ ಬಗ್ಗೆ ಮುಂದೆ ಓದಿ.
ರಾಜ್ಯದ 1.65 ಕೋಟಿ ಜನರು ಗೃಹಜ್ಯೋತಿ ಯೋಜನೆ ಲಾಭ ಪಡೆದಿದ್ದಾರೆ. ವಿಶೇಷವಾಗಿ ಮಧ್ಯಮ ವರ್ಗದ ಜನರಿಗೆ ಹೆಚ್ಚಿನ ಅನುಕೂಲವಾಗಿದ್ದು ಹರ್ಷ ವ್ಯಕ್ತಪಡಿಸಿದ್ದಾರೆ. ವಿದ್ಯುತ್ ಬಿಲ್‌ನ ಹಣವನ್ನು ಮಕ್ಕಳ ಟ್ಯೂಷನ್ ಫೀಸ್, ಹಿರಿಯರ ಔಷಧೋಪಚಾರಕ್ಕೆ ಬಳಸಿರುವುದಾಗಿ ಹೇಳಿಕೊಂಡಿದ್ದಾರೆ.
ನುಡಿದಂತೆ ನಡೆದಿದ್ದೇವೆ ಎಂಬ ಸಾರ್ಥಕ ಭಾವ ನಮ್ಮಲ್ಲಿದೆ. ಜೊತೆಗೆ ಡಿ-ಲಿಂಕ್ ಸೌಲಭ್ಯ ಬೇಕೆಂದು ಜನ ಕೋರಿದ್ದರು. ಈಗ ಈ ಸೌಲಭ್ಯವನ್ನು ಒದಗಿಸಲಾಗಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ತಿಳಿಸಿದ್ದಾರೆ.
ಈ ರೀತಿ ಮತ್ತೆ ಗೃಹ ಜ್ಯೋತಿ ಪ್ರಯೋಜನಕ್ಕೆ ಅರ್ಜಿ ಸಲ್ಲಿಸಿ
ಗ್ರಾಹಕರ https://sevasindhu.karnataka.gov.in/GruhaJyothi_Delink/GetAadhaarData.aspx ಲಿಂಕ್ ಮೂಲಕ ನೋಂದಾಯಿಸಿಕೊಳ್ಳಬಹುದಾಗಿದೆ. ಗೃಹ ಜ್ಯೋತಿ ಪೋರ್ಟಲ್ ಓಪನ್ ಆಗದೇ ಇದ್ದಲ್ಲಿ, Cache Memory Clear ಮಾಡಿ ನಂತರ ಪೋರ್ಟಲ್ ಲಿಂಕ್ ಕ್ಲಿಕ್ ಮಾಡಿ ಸೇವೆಯನ್ನು ಪಡೆಯಬಹುದಾಗಿದೆ.
ಮನೆ ಬದಲಿಸುವ ಸಂದರ್ಭಲ್ಲಿ ಆಧಾರ್ ನಂಬರ್ ಜತೆ ಲಿಂಕ್ ಆಗಿರುವ ಆರ್.ಆರ್. ನಂಬರ್ ವಿವರ ಪರಿಶೀಲಿಸಿ ಡಿ-ಲಿಂಕ್ ಮಾಡಬಹುದು. ಹೊಸ ಮನೆಗೆ ಗೃಹಜ್ಯೋತಿ ಲಾಭ ಪಡೆಯಲು ಸದ್ಯ ಯಾವುದೇ ಆಧಾರ್ ಜತೆ ಲಿಂಕ್ ಆಗಿರದ ಆರ್ .ಆರ್. ನಂಬರ್‌ಗೆ ಲಿಂಕ್ ಮಾಡಬಹುದು. ಅಂದರೆ, ಈ ಹಿಂದೆ ಮನೆಯಲ್ಲಿ ವಾಸವಿದ್ದರೂ ಡಿ-ಲಿಂಕ್ ಮಾಡಿರುವುದನ್ನು ಖಾತ್ರಿ ಪಡಿಸಿಕೊಳ್ಳಿ. ಆ ನಂತ್ರ ಬದಲಾಯಿಸಿದಂತ ಮನೆಗೆ ಗೃಹ ಜ್ಯೋತಿ ಯೋಜನೆಯ ಪ್ರಯೋಜನವನ್ನು ಪಡೆಯಿರಿ.
BREAKING: ‘ನಟ ದರ್ಶನ್’ಗೆ ಮತ್ತೆ ಶಾಕ್: ‘ಮನೆಯೂಟ’ ನೀಡಲು ‘ಜೈಲು ಅಧಿಕಾರಿ’ಗಳು ನಿರಾಕರಣೆ | Actor Darshna
ಆ.22ರಿಂದ ಬೆಂಗಳೂರಲ್ಲಿ ಅತಿದೊಡ್ಡ ಕೃಷಿ ಮತ್ತು ಆಹಾರ ಪ್ರದರ್ಶನ ಮೇಳ | AgriTech India 2024