ಬೆಂಗಳೂರು: ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟವಾಗಿದೆ. ಈ ಪರೀಕ್ಷೆಯಲ್ಲಿ Rank ಪಡೆಯಲು ವಿದ್ಯಾರ್ಥಿನಿಯೊಬ್ಬರಿಗೆ ತನ್ನ ತಾಯಿಗೆ ನೀಡಲಾಗುತ್ತಿದ್ದಂತ ಗೃಹಲಕ್ಷ್ಮೀ ಯೋಜನೆಯೇ ನೆರವಾಗಿರುವುದಾಗಿ ತಿಳಿದು ಬಂದಿದೆ.
ಈ ಕುರಿತು ಸರ್ಕಾರ ಮಾಹಿತಿ ಹಂಚಿಕೊಂಡಿದ್ದು, ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಚಿಕ್ಕೊಪ್ಪ ಕೆ.ಎಂ. ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಪೃಥ್ವಿ ಹೋಳಿ ದ್ವಿತೀಯ ಪಿಯು ಕಲಾ ವಿಭಾಗದಲ್ಲಿ 570 ಅಂಕ ಪಡೆದು ಕಾಲೇಜಿಗೆ ಪ್ರಥಮ ಸ್ಥಾನ ಗಳಿಸಿದ್ದು, ಇತಿಹಾಸ ವಿಷಯದಲ್ಲಿ 100ಕ್ಕೆ 100 ಅಂಕ ಪಡೆದಿದ್ದಾರೆ ಎಂದಿದೆ.
ತಂದೆ ಇಲ್ಲದ ಪೃಥ್ವಿಯ ತಾಯಿ ಶ್ಯಾಮಲಾ ಹೋಳಿ ಕೂಲಿ ಕೆಲಸಕ್ಕೆ ಹೋಗುತ್ತಾರೆ. ಅವರಿಗೆ ಬರುವ ಗೃಹಲಕ್ಷ್ಮಿ ಹಣವು ಪೃಥ್ವಿಯ ವಿದ್ಯಾಭ್ಯಾಸಕ್ಕೆ ನೆರವಾಗಿದೆ. ಪ್ರತಿದಿನವೂ ಪರಿಪೂರ್ಣ ಶಿಕ್ಷಣಕ್ಕೆ ಹಂಬಲಿಸಿದ ಹೆಣ್ಣು ಮಗಳ ಕನಸು ಈ ಯೋಜನೆಯ ಮೂಲಕ ಸಾಕಾರಗೊಂಡಿದೆ ಎಂದು ಹೇಳಿದೆ.
ಬಡತನ ನಾಡಿನ ಮಕ್ಕಳ ಕಲಿಕಾ ಸಾಧನೆಗೆ ಅಡ್ಡಿಯಾಗಬಾರದು, ಅಂತಹ ವ್ಯವಸ್ಥೆಯೊಂದನ್ನು ನಿರ್ಮಾಣ ಮಾಡಬೇಕು ಎಂಬುದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕನಸಾಗಿತ್ತು. ಗೃಹಲಕ್ಷ್ಮಿ ಯೋಜನೆಯು ಆ ಕನಸನ್ನು ಸಾಕಾರಗೊಳಿಸುತ್ತಿದೆ ಎಂದು ತಿಳಿಸಿದೆ.
ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಚಿಕ್ಕೊಪ್ಪ ಕೆ.ಎಂ. ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಪೃಥ್ವಿ ಹೋಳಿ ದ್ವಿತೀಯ ಪಿಯು ಕಲಾ ವಿಭಾಗದಲ್ಲಿ 570 ಅಂಕ ಪಡೆದು ಕಾಲೇಜಿಗೆ ಪ್ರಥಮ ಸ್ಥಾನ ಗಳಿಸಿದ್ದು, ಇತಿಹಾಸ ವಿಷಯದಲ್ಲಿ 100ಕ್ಕೆ 100 ಅಂಕ ಪಡೆದಿದ್ದಾರೆ.
ತಂದೆ ಇಲ್ಲದ ಪೃಥ್ವಿಯ ತಾಯಿ ಶ್ಯಾಮಲಾ ಹೋಳಿ ಕೂಲಿ ಕೆಲಸಕ್ಕೆ… pic.twitter.com/8EEu26ZpHH
— DIPR Karnataka (@KarnatakaVarthe) April 9, 2025
ALERT : ತಲೆಯ ಬಳಿ `ಮೊಬೈಲ್’ ಇಟ್ಟುಕೊಂಡು ಮಲಗುವವರೇ ತಪ್ಪದೇ ಇದನ್ನೊಮ್ಮೆ ಓದಿ.!
ಕನ್ನಡ ಪುಸ್ತಕ ಪ್ರಾಧಿಕಾರದಿಂದ ಕನ್ನಡ ಪುಸ್ತಕ ಸೊಗಸು, ಮುದ್ರಣ ಸೊಗಸು ಬಹುಮಾನ ಪ್ರಕಟ