ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವಂತ ಗ್ಯಾರಂಟಿ ಯೋಜನೆಗಳಲ್ಲಿ ಗೃಹಲಕ್ಷ್ಮಿ ಯೋಜನೆಯೂ ಒಂದಾಗಿದೆ. ಪ್ರತಿ ತಿಂಗಳು ರೂ.2000 ಯಜಮಾನಿ ಮಹಿಳೆಯರ ಖಾತೆಗೆ ಸರ್ಕಾರದಿಂದ ಜಮಾ ಮಾಡಲಾಗುತ್ತಿದೆ. ಬರೋಬ್ಬರಿ ಒಂದು ವರ್ಷ ಪೂರೈಸಿರುವಂತ ಗೃಹಲಕ್ಷ್ಮಿ ಯೋಜನೆ ಆರಂಭದ ಬಳಿಕ, ಯಜಮಾನಿಯರಿಗೆ ನೆರವಾಗಿದ್ದು ಮಾತ್ರ ವಿವಿಧ ರೀತಿಯಲ್ಲಿ ಆಗಿದೆ. ಹಾಗಾದ್ರೇ ಆ ಯಶೋಗಾಥೆ ಓದಿ, ನೀವೇ ಅಚ್ಚರಿ ಪಡ್ತೀರಿ.
ವಿದ್ಯಾಭ್ಯಾಸಕ್ಕೆ ನೆರವಾದ ಗೃಹಲಕ್ಷ್ಮಿ
ದ್ವಿತೀಯ ಪಿಯುಸಿಯ ಕಲಾ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ವೇದಾಂತ್ ಕುಟುಂಬಕ್ಕೆ ನೆರವಾಗಿದ್ದು ಗೃಹಲಕ್ಷ್ಮಿ ಯೋಜನೆಯ ಹಣವಾಗಿದೆ. ಗೃಹ ಲಕ್ಷ್ಮೀ ಯೋಜನೆಯ ಹಣ ಆಸರೆಯಾಗಿ, ಶಿಕ್ಷಣ ಪಡೆಯಲು ನೆರವಾಗಿದ್ದು, ಈ ಯೋಜನೆಯ ಸಾರ್ಥಕತೆಗೆ ಮತ್ತೊಂದು ಸಾಕ್ಷಿಯಾಗಿದೆ.
ತಂದೆಯನ್ನು ಕಳೆದುಕೊಂಡ ಕುಟುಂಬಕ್ಕೆ ತಾಯಿಯೇ ಆಸರೆಯಾಗಿದ್ದರು. ಅವರಿಗೆ ಬರುತ್ತಿದ್ದ ಗೃಹಲಕ್ಷ್ಮಿ ಹಣವು ವೇದಾಂತ್ ಅವರ ಅಧ್ಯಯನ ಮತ್ತು ಹಾಸ್ಟೆಲ್ ವಾಸ್ತವ್ಯ ಹಾಗೂ ಇತರೆ ಖರ್ಚುಗಳಿಗೆ ಸಹಕಾರಿಯಾಗಿದೆ.
ಒಟ್ಟಾರೆಯಾಗಿ ಬಡತನ ನಾಡಿನ ಮಕ್ಕಳ ಕಲಿಕಾ ಸಾಧನೆಗೆ ಅಡ್ಡಿಯಾಗಬಾರದು. ಅಂತಹ ವ್ಯವಸ್ಥೆಯೊಂದನ್ನು ನಿರ್ಮಾಣ ಮಾಡಬೇಕು ಎಂಬ ಸಿಎಂ ಸಿದ್ಧರಾಮಯ್ಯ ಕನಸು, ಗೃಹ ಲಕ್ಷ್ಮಿ ಯೋಜನೆಯ ಮೂಲಕ ಸಾಕಾರಗೊಂಡಿದೆ ಎನ್ನಬಹುದು.
ನಾಡಿನ ಪ್ರತಿಯೊಬ್ಬ ಮಹಿಳೆಯೂ ಕೂಡ ಆರ್ಥಿಕ ಸಂಕಷ್ಟಗಳಿಂದ ಹೊರಬಂದು ಸುಖ ಸಂತೋಷದಿಂದ ಜೀನವ ಸಾಗಿಸುವಂತಾಗಬೇಕು ಎಂಬ ರಾಜ್ಯ ಸರ್ಕಾರದ ಉದ್ದೇಶವನ್ನು ಗೃಹಲಕ್ಷ್ಮಿ ಯೋಜನೆಯು ಈಡೇರಿಸುತ್ತಿದೆ.
ದ್ವಿತೀಯ ಪಿಯುಸಿಯ ಕಲಾ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ವೇದಾಂತ್ ಕುಟುಂಬಕ್ಕೆ ಗೃಹಲಕ್ಷ್ಮಿ ಯೋಜನೆಯ ಹಣ ಆಸರೆಯಾಗಿ ಶಿಕ್ಷಣ ಪಡೆಯಲು… pic.twitter.com/oa21JaXr3d
— DIPR Karnataka (@KarnatakaVarthe) August 31, 2024
ಗೃಹಲಕ್ಷ್ಮೀ ಹಣದಿಂದ ಮೊಬೈಲ್ ಖರೀದಿಸಿ, ಸಿಎಂ ಪೋಟೋ ವಾಲ್ ಪೇಪರ್ ಹಾಕಿ ಸಂಭ್ರಮಿಸಿದ ಮಹಿಳೆ
ಹಾವೇರಿ ಜಿಲ್ಲೆಯ ನಿವಾಸಿಯೊಬ್ಬರು ಗೃಹಲಕ್ಷ್ಮಿ ಯೋಜನೆಯಿಂದ ಬಂದಂತ ಪ್ರತಿ ತಿಂಗಳ ಹಣವನ್ನು ಕೂಡಿಟ್ಟು, ತಮ್ಮ ಇಷ್ಟದ ಮೊಬೈಲ್ ಖರೀದಿಸಿದ್ದಾರೆ. ಇದಷ್ಟೇ ಅಲ್ಲದೇ ಇದಕ್ಕೆ ಕಾರಣವಾದಂತ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಪೋಟೋವನ್ನು ವಾಲ್ ಪೇಪರ್ ಗೆ ಹಾಕಿ ಸಂಭ್ರಮಿಸಿದ್ದು ನಡೆದಿದೆ.
ಏಪ್ರಿಲ್ ನಲ್ಲಿ ಹಾವೇರಿಯಲ್ಲಿ ನಡೆದ ಸಮಾವೇಶದಲ್ಲಿ ಈ ಮಹಿಳೆಯು ಗೃಹಲಕ್ಷ್ಮಿ ಹಣದಿಂದ ಖರೀದಿಸಿದ ಹೊಸ ಮೊಬೈಲ್ ನೊಂದಿಗೆ ಬಂದಾಗ ಅವರ ಖುಷಿ ಕ್ಯಾಮರಾದಲ್ಲಿ ಸೆರೆಯಾಗಿತ್ತು. ನಾಡಿನ ಬಡ ಮಹಿಳೆಯರು ಕೂಡ ಆರ್ಥಿಕ ಸಂಕಷ್ಟಗಳಿಂದ ಹೊರಬಂದು ಸುಖ ಸಂತೋಷದಿಂದ ಜೀವನ ಸಾಗಿಸುವಂತಾಗಬೇಕು ಎಂಬ ರಾಜ್ಯ ಸರ್ಕಾರದ ಉದ್ದೇಶ ಗೃಹಲಕ್ಷ್ಮಿ ಯೋಜನೆಯು ಈಡೇರಿಸುತ್ತಿದೆ.
ನಾಡಿನ ಪ್ರತಿಯೊಬ್ಬ ಮಹಿಳೆಯೂ ಕೂಡ ಆರ್ಥಿಕ ಸಂಕಷ್ಟಗಳಿಂದ ಹೊರಬಂದು ಸುಖ ಸಂತೋಷದಿಂದ ಜೀನವ ಸಾಗಿಸುವಂತಾಗಬೇಕು ಎಂಬ ರಾಜ್ಯ ಸರ್ಕಾರದ ಉದ್ದೇಶವನ್ನು ಗೃಹಲಕ್ಷ್ಮಿ ಯೋಜನೆಯು ಈಡೇರಿಸುತ್ತಿದೆ.
ಹಾವೇರಿ ಜಿಲ್ಲೆಯ ನಿವಾಸಿ, ಗೃಹಲಕ್ಷ್ಮಿ ಯೋಜನೆಯ ಫಲಾನುಭವಿ ಮಹಿಳೆಯೊಬ್ಬರು ಪ್ರತಿ ತಿಂಗಳ ಹಣವನ್ನು ಕೂಡಿಟ್ಟು ತಮ್ಮ ಇಷ್ಟದ ಮೊಬೈಲ್ ಖರೀದಿಸಿ,… pic.twitter.com/WZdUal3m0Q
— DIPR Karnataka (@KarnatakaVarthe) August 31, 2024
ಗೃಹಲಕ್ಷ್ಮಿ ಹಣದಿಂದ ಊರಿಗೆ ಹೋಳಿಗೆ ಊಟ ಹಾಕಿ ಸಂಭ್ರಮಿಸಿದ ಅಜ್ಜಿ
ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಸುಟ್ಟಟ್ಟಿ ಗ್ರಾಮದ ಹಿರಿಯ ಮಹಿಳೆ ಅಕ್ಕತಾಯಿ ಲಂಗೋಟಿ ಅವರು ಗೃಹ ಲಕ್ಷ್ಮಿ ಯೋಜನೆಯಿಂದ ಬಂದ ಹಣದಲ್ಲಿ 25 ಸುಮಂಗಲಿಯರಿಗೆ ಮಡಿಲು ತುಂಬಿ, ಇಡೀ ಊರಿಗೆ ಊಟ ಹಾಕಿ ಸಂಭ್ರಮಿಸಿದ್ದಾರೆ.
ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಬಗ್ಗೆ ಅಪಾರ ಮೆಚ್ಚುಗೆ ವ್ಯಕ್ತಪಡಿಸಿದ ಅವರು, ಗೃಹ ಲಕ್ಷ್ಮಿ ಹಣದಿಂದ ನಮಗೆಲ್ಲ ಬಹಳ ಅನುಕೂಲವಾಗುತ್ತಿದೆ. ಸಿದ್ಧರಾಮಯ್ಯ ಅವರ ರಾಜಕೀಯ ಜೀವನದಲ್ಲಿ ಮತ್ತಷ್ಟು ಎತ್ತರಕ್ಕೆ ಬೆಳೆಯಬೇಕು ಎಂಬುದಾಗಿ ಮನದುಂಬಿ ಹರಸಿದ್ದಾರೆ.
ತನಗೆ ಸಿಕ್ಕಿದ್ದನ್ನು ಇತರರಿಗೆ ಹಂಚಿ ತಿನ್ನುವ ಸ್ವಭಾವದ ಸ್ವಚ್ಛಂದ ಮನಸ್ಸುಗಳಿಗೆ ಈ ಹಣವು ತಲುಪುತ್ತಿರುವುದು ಗೃಹಲಕ್ಷ್ಮಿ ಯೋಜನೆಯ ಯಶಸ್ಸಿಗೆ ನಿದರ್ಶನವಾಗಿದೆ.
ನಾಡಿನ ಪ್ರತಿಯೊಬ್ಬ ಮಹಿಳೆಯೂ ಕೂಡ ಆರ್ಥಿಕ ಸಂಕಷ್ಟಗಳಿಂದ ಹೊರಬಂದು ಸುಖ ಸಂತೋಷದಿಂದ ಜೀನವ ಸಾಗಿಸುವಂತಾಗಬೇಕು ಎಂಬ ರಾಜ್ಯ ಸರ್ಕಾರದ ಉದ್ದೇಶವನ್ನು ಗೃಹಲಕ್ಷ್ಮಿ ಯೋಜನೆಯು ಈಡೇರಿಸುತ್ತಿದೆ.
ಇತ್ತೀಚೆಗೆ ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಸುಟ್ಟಟ್ಟಿ ಗ್ರಾಮದ ಹಿರಿಯ ಮಹಿಳೆ ಅಕ್ಕಾತಾಯಿ ಲಂಗೋಟಿ ಅವರು ಗೃಹಲಕ್ಷ್ಮಿ ಯೋಜನೆಯಿಂದ ಬಂದ ಹಣದಲ್ಲಿ… pic.twitter.com/YUDf6vFZsL
— DIPR Karnataka (@KarnatakaVarthe) August 31, 2024
ಸೊಸೆಗೆ ಬದುಕು ಕಟ್ಟಿಕೊಡಲು ಅತ್ತೆಗೆ ಆಸರೆಯಾದ ಗೃಹಲಕ್ಷ್ಮಿ
ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ನೀರಲಗಿ ಗ್ರಾಮದ ದಾಕ್ಷಾಯಿಣಿ ಪಾಟೀಲ ಎಂಬುವರು ಗೃಹಲಕ್ಷ್ಮಿ ಯೋಜನೆಯಡಿ ಬಂದಿದ್ದ ಹಣವನ್ನು ಕೂಡಿಟ್ಟು, ಸೊಸೆಗಾಗಿ ಫ್ಯಾನ್ಸಿ ಮಳಿಗೆ ತೆರೆದು ವ್ಯಾಪಾರಕ್ಕೆ ಅನುಕೂಲ ಮಾಡಿಕೊಟ್ಟಿದ್ದಾರೆ.
ಗೃಹಲಕ್ಷ್ಮಿ ಯೋಜನೆಯಡಿ 10 ಕಂತಿನಲ್ಲಿ ಬಂದಿದ್ದ 20 ಸಾವಿರ ಹಣವನ್ನು ದಾಕ್ಷಾಯಿಣಿ ಅವರು ಬ್ಯಾಂಕ್ ಖಾತೆಯಲ್ಲಿಯೇ ಕೂಡಿಟ್ಟಿದ್ದರು. ಸ್ವಂತ ಉದ್ಯೋಗ ಆರಂಭಿಸಲು ಯೋಚಿಸಿದ್ದ ಸೊಸೆ ಕುಮಾರಿಗೆ ಅದೇ ಹಣದಲ್ಲಿ ಫ್ಯಾನ್ಸಿ ಮಳಿಗೆಯನ್ನು ತೆರೆದು ಕೊಟ್ಟಿದ್ದಾರೆ.
ಮಹಿಳೆಯರು ಸ್ವಾವಲಂಬಿಯಾಗಿ ಬದುಕಬೇಕು ಎಂಬ ಉದ್ದೇಶದಿಂದಲೇ ರಾಜ್ಯ ಸರ್ಕಾರವು ಗೃಹಲಕ್ಷ್ಮಿ ಯೋಜನೆಯನ್ನು ಜಾರಿ ಮಾಡಿದ್ದು, ಇಂತಹ ಘಟನೆಗಳು ಯೋಜನೆಯ ಯಶಸ್ಸಿಗೆ ಕೈಗನ್ನಡಿಯಾಗಿವೆ.
ನಾಡಿನ ಪ್ರತಿಯೊಬ್ಬ ಮಹಿಳೆಯೂ ಕೂಡ ಆರ್ಥಿಕ ಸಂಕಷ್ಟಗಳಿಂದ ಹೊರಬಂದು ಸುಖ ಸಂತೋಷದಿಂದ ಜೀನವ ಸಾಗಿಸುವಂತಾಗಬೇಕು ಎಂಬ ರಾಜ್ಯ ಸರ್ಕಾರದ ಉದ್ದೇಶವನ್ನು ಗೃಹಲಕ್ಷ್ಮಿ ಯೋಜನೆಯು ಈಡೇರಿಸುತ್ತಿದೆ.
ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ನೀರಲಗಿ ಗ್ರಾಮದ ದಾಕ್ಷಾಯಿಣಿ ಪಾಟೀಲ ಎಂಬವರು ಗೃಹಲಕ್ಷ್ಮಿ ಗ್ಯಾರಂಟಿ ಯೋಜನೆಯಡಿ ಬಂದಿದ್ದ ಹಣವನ್ನು ಕೂಡಿಟ್ಟು… pic.twitter.com/hGHFQw5dZJ
— DIPR Karnataka (@KarnatakaVarthe) August 31, 2024
ಅ. 1ರಂದು ಮೋದಿ ಅಂಡ್ ಕಂಪನಿಗೆ ಜಮ್ಮು-ಕಾಶ್ಮೀರದ ಯುವಕರು ನಿರ್ಗಮನ ದ್ವಾರ ತೋರಿಸಲಿದ್ದಾರೆ: ಖರ್ಗೆ