Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಕರ್ನಾಟಕದ 4 ಸ್ಥಾನ ಸೇರಿ ರಾಜ್ಯಸಭೆಯ 24 ಸ್ಥಾನಗಳ ಚುನಾವಣೆಗೆ ಮುಹೂರ್ತ ಫಿಕ್ಸ್ : ಕೇಂದ್ರ ಚುನಾವಣಾ ಆಯೋಗದಿಂದ ದಿನಾಂಕ ಘೋಷಣೆ | Rajya Sabha elections

ಕಲಬುರ್ಗಿಯಲ್ಲಿ ಘೋರ ಘಟನೆ : ಗಂಡನ ಕಿರುಕುಳಕ್ಕೆ ಬೇಸತ್ತು 4 ತಿಂಗಳ ಗರ್ಭಿಣಿ ಆತ್ಮಹತ್ಯೆ!

GOOD NEWS : ರಾಜ್ಯದ ಸರ್ಕಾರಿ ಪಿಯು ಕಾಲೇಜುಗಳಿಗೆ 6,086 ಅತಿಥಿ ಉಪನ್ಯಾಸಕರ ನೇಮಕಾತಿಗೆ ಸರ್ಕಾರ ಅಸ್ತು

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕಲಬುರ್ಗಿಯಲ್ಲಿ ಘೋರ ಘಟನೆ : ಗಂಡನ ಕಿರುಕುಳಕ್ಕೆ ಬೇಸತ್ತು 4 ತಿಂಗಳ ಗರ್ಭಿಣಿ ಆತ್ಮಹತ್ಯೆ!
KARNATAKA

ಕಲಬುರ್ಗಿಯಲ್ಲಿ ಘೋರ ಘಟನೆ : ಗಂಡನ ಕಿರುಕುಳಕ್ಕೆ ಬೇಸತ್ತು 4 ತಿಂಗಳ ಗರ್ಭಿಣಿ ಆತ್ಮಹತ್ಯೆ!

By ಸುರೇಶ್‌

ಕಲಬುರಗಿ: ಪ್ರೀತಿಸಿ ಕೈಹಿಡಿದ ಪತಿಯೇ ನಿರಂತರವಾಗಿ ನೀಡುತ್ತಿದ್ದ ದೈಹಿಕ ಮತ್ತು ಮಾನಸಿಕ ಕಿರುಕುಳಕ್ಕೆ ಬೇಸತ್ತು, ನಾಲ್ಕು ತಿಂಗಳ ಗರ್ಭಿಣಿಯೊಬ್ಬರು ತವರು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಅತ್ಯಂತ ಕರುಣಾಜನಕ ಘಟನೆ ಕಲಬುರಗಿ ತಾಲ್ಲೂಕಿನ ಔರಾದ್ (ಬಿ) ಗ್ರಾಮದಲ್ಲಿ ಸಂಭವಿಸಿದೆ. ಹೊಟ್ಟೆಯಲ್ಲಿದ್ದ ಕಂದಮ್ಮನೊಂದಿಗೆ ಗೃಹಿಣಿ ಪ್ರಾಣ ಕಳೆದುಕೊಂಡಿರುವುದು ಇಡೀ ಗ್ರಾಮದಲ್ಲಿ ತೀವ್ರ ಶೋಕದ ವಾತಾವರಣವನ್ನು ಸೃಷ್ಟಿಸಿದೆ.

ಔರಾದ್ (ಬಿ) ಗ್ರಾಮದ ನಿವಾಸಿಯಾದ ಶೃತಿ (೨೨) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ ಎಂದು ಗುರುತಿಸಲಾಗಿದೆ. ಮೃತ ಶೃತಿ ಅವರು ಸುಮಾರು ಎರಡು ವರ್ಷಗಳ ಹಿಂದೆ ಗೋಪಾಲ್ ಎಂಬಾತನನ್ನು ಪ್ರೀತಿಸಿ, ಆತನ ಗುಣನಡತೆಗಳನ್ನು ನಂಬಿ ವಿವಾಹವಾಗಿದ್ದರು. ಮದುವೆಯ ಆರಂಭದ ದಿನಗಳಲ್ಲಿ ಎಲ್ಲವೂ ಚೆನ್ನಾಗಿಯೇ ಇತ್ತಾದರೂ, ದಿನ ಕಳೆದಂತೆ ಪತಿ ಗೋಪಾಲ್‌ನ ಅಸಲಿ ಮುಖವಾಡ ಕಳಚಿ ಬಿದ್ದಿತ್ತು.

ವಿವಾಹದ ನಂತರ ಗೋಪಾಲ್ ಕುಡಿತ, ಜೂಜಾಟ ಸೇರಿದಂತೆ ಹಲವು ಕೆಟ್ಟ ದುಶ್ಚಟಗಳಿಗೆ ದಾಸನಾಗಿದ್ದ ಎನ್ನಲಾಗಿದೆ. ಇದರಿಂದಾಗಿ ಆತ ಸಾಲದ ಸುಳಿಗೆ ಸಿಲುಕಿದ್ದು, ತನಗಿದ್ದ ಸಾಲವನ್ನು ತೀರಿಸುವ ಸಲುವಾಗಿ ಇದ್ದ ಮನೆಯನ್ನೇ ಮಾರಾಟ ಮಾಡಲು ಮುಂದಾಗಿದ್ದ. ಆದರೆ, ಪತಿಯ ಈ ನಿರ್ಧಾರಕ್ಕೆ ಶೃತಿ ತೀವ್ರ ವಿರೋಧ ವ್ಯಕ್ತಪಡಿಸಿ, ಮನೆ ಮಾರಾಟದ ಪತ್ರಕ್ಕೆ ಸಹಿ ಹಾಕಲು ನಿರಾಕರಿಸಿದ್ದರು. ಇದರಿಂದ ಆಕ್ರೋಶಗೊಂಡ ಗೋಪಾಲ್, ಶೃತಿಗೆ ಮನಬಂದಂತೆ ಥಳಿಸಿ, ಆಕೆಯ ಕೊರಳಲ್ಲಿದ್ದ ಮಂಗಲಸೂತ್ರವನ್ನು (ತಾಳಿ) ಬಲವಂತವಾಗಿ ಕಿತ್ತುಕೊಂಡು ಕ್ರೂರವಾಗಿ ದೌರ್ಜನ್ಯ ಎಸಗಿದ್ದ.

ಪತಿಯ ನಿರಂತರ ದೈಹಿಕ ಮತ್ತು ಮಾನಸಿಕ ಕಾಟವನ್ನು ತಾಳಲಾರದೆ ಶೃತಿ ಅವರು ಕೇವಲ ೧೫ ದಿನಗಳ ಹಿಂದೆಯಷ್ಟೇ ರಕ್ಷಣೆ ಅರಸಿ ತಮ್ಮ ತವರು ಮನೆಗೆ ಬಂದು ಆಶ್ರಯ ಪಡೆದಿದ್ದರು. ಆದರೆ, ಇಲ್ಲೂ ಆಕೆಗೆ ನೆಮ್ಮದಿ ಸಿಗಲಿಲ್ಲ. ನಿನ್ನೆ ಶೃತಿಯ ತವರು ಮನೆಗೂ ನುಗ್ಗಿದ ಗೋಪಾಲ್, ಮತ್ತೆ ದೊಡ್ಡದಾಗಿ ಗಲಾಟೆ ಮಾಡಿ ಆಕೆಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ವಿಕೃತಿ ಮೆರೆದಿದ್ದಾನೆ. ಇದರಿಂದ ತೀವ್ರವಾಗಿ ಮನನೊಂದ ಶೃತಿ, ಪತಿಯ ಕಾಟಕ್ಕೆ ಮುಕ್ತಿ ಸಿಗುವುದಿಲ್ಲ ಎಂದು ಭಾವಿಸಿ ತವರು ಮನೆಯಲ್ಲಿಯೇ ನೇಣಿಗೆ ಶರಣಾಗಿದ್ದಾರೆ.

ನಾಲ್ಕು ತಿಂಗಳ ಗರ್ಭಿಣಿಯಾಗಿದ್ದ ಶೃತಿ, ತನ್ನ ಹೊಟ್ಟೆಯಲ್ಲಿದ್ದ ಕಂದಮ್ಮನೊಂದಿಗೆ ಆತ್ಮಹತ್ಯೆ ಮಾಡಿಕೊಂಡಿರುವುದು ಹೆತ್ತವರಿಗೆ ಹಾಗೂ ಗ್ರಾಮಸ್ಥರಿಗೆ ನುಂಗಲಾರದ ತುತ್ತಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಸದ್ಯ ಕಲಬುರಗಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಪತಿಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ.

Share. Facebook Twitter LinkedIn WhatsApp Email

Related Posts

BREAKING : ಕರ್ನಾಟಕದ 4 ಸ್ಥಾನ ಸೇರಿ ರಾಜ್ಯಸಭೆಯ 24 ಸ್ಥಾನಗಳ ಚುನಾವಣೆಗೆ ಮುಹೂರ್ತ ಫಿಕ್ಸ್ : ಕೇಂದ್ರ ಚುನಾವಣಾ ಆಯೋಗದಿಂದ ದಿನಾಂಕ ಘೋಷಣೆ | Rajya Sabha elections

1 Min Read

GOOD NEWS : ರಾಜ್ಯದ ಸರ್ಕಾರಿ ಪಿಯು ಕಾಲೇಜುಗಳಿಗೆ 6,086 ಅತಿಥಿ ಉಪನ್ಯಾಸಕರ ನೇಮಕಾತಿಗೆ ಸರ್ಕಾರ ಅಸ್ತು

2 Mins Read

BIG NEWS : ರಾಜ್ಯದಲ್ಲಿ ಮೇ 29 ರಿಂದ ಶೈಕ್ಷಣಿಕ ವರ್ಷ ಆರಂಭ: 1 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ‘ಸೇತುಬಂಧ’ ಕಡ್ಡಾಯ

2 Mins Read
Recent News

BREAKING : ಕರ್ನಾಟಕದ 4 ಸ್ಥಾನ ಸೇರಿ ರಾಜ್ಯಸಭೆಯ 24 ಸ್ಥಾನಗಳ ಚುನಾವಣೆಗೆ ಮುಹೂರ್ತ ಫಿಕ್ಸ್ : ಕೇಂದ್ರ ಚುನಾವಣಾ ಆಯೋಗದಿಂದ ದಿನಾಂಕ ಘೋಷಣೆ | Rajya Sabha elections

ಕಲಬುರ್ಗಿಯಲ್ಲಿ ಘೋರ ಘಟನೆ : ಗಂಡನ ಕಿರುಕುಳಕ್ಕೆ ಬೇಸತ್ತು 4 ತಿಂಗಳ ಗರ್ಭಿಣಿ ಆತ್ಮಹತ್ಯೆ!

GOOD NEWS : ರಾಜ್ಯದ ಸರ್ಕಾರಿ ಪಿಯು ಕಾಲೇಜುಗಳಿಗೆ 6,086 ಅತಿಥಿ ಉಪನ್ಯಾಸಕರ ನೇಮಕಾತಿಗೆ ಸರ್ಕಾರ ಅಸ್ತು

BREAKING : ಜೂನ್ 18 ರಂದು 24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ : ಕೇಂದ್ರ ಚುನಾವಣಾ ಆಯೋಗ ಘೋಷಣೆ | Rajya Sabha elections

State News
KARNATAKA

BREAKING : ಕರ್ನಾಟಕದ 4 ಸ್ಥಾನ ಸೇರಿ ರಾಜ್ಯಸಭೆಯ 24 ಸ್ಥಾನಗಳ ಚುನಾವಣೆಗೆ ಮುಹೂರ್ತ ಫಿಕ್ಸ್ : ಕೇಂದ್ರ ಚುನಾವಣಾ ಆಯೋಗದಿಂದ ದಿನಾಂಕ ಘೋಷಣೆ | Rajya Sabha elections

By kannadanewsnow57 KARNATAKA 1 Min Read

ನವದೆಹಲಿ: ದೇಶದ 10 ರಾಜ್ಯಗಳ ಒಟ್ಟು 24 ರಾಜ್ಯಸಭಾ ಸ್ಥಾನಗಳಿಗೆ ಜೂನ್ 18 ರಂದು ಚುನಾವಣೆ ನಡೆಯಲಿದೆ ಎಂದು ಕೇಂದ್ರ…

ಕಲಬುರ್ಗಿಯಲ್ಲಿ ಘೋರ ಘಟನೆ : ಗಂಡನ ಕಿರುಕುಳಕ್ಕೆ ಬೇಸತ್ತು 4 ತಿಂಗಳ ಗರ್ಭಿಣಿ ಆತ್ಮಹತ್ಯೆ!

GOOD NEWS : ರಾಜ್ಯದ ಸರ್ಕಾರಿ ಪಿಯು ಕಾಲೇಜುಗಳಿಗೆ 6,086 ಅತಿಥಿ ಉಪನ್ಯಾಸಕರ ನೇಮಕಾತಿಗೆ ಸರ್ಕಾರ ಅಸ್ತು

BIG NEWS : ರಾಜ್ಯದಲ್ಲಿ ಮೇ 29 ರಿಂದ ಶೈಕ್ಷಣಿಕ ವರ್ಷ ಆರಂಭ: 1 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ‘ಸೇತುಬಂಧ’ ಕಡ್ಡಾಯ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.