ಬೆಳಗಾವಿ : ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯಿಂದಾಗಿ ತಮ್ಮ ಗಂಡನ ಕಣ್ಣಿನ ಆಪರೇಷನ್ ಮಾಡಿಸಿದ ಮಹಿಳೆಯೊಬ್ಬರು ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ತಿಳಿಸಿದ್ದಾರೆ.
ಬೆಳಗಾವಿ ಜಿಲ್ಲೆಯ ಆನಗೋಳ ಗ್ರಾಮದಲ್ಲಿ ತಮ್ಮ ಗಂಡನಿಗೆ ಗೃಹಲಕ್ಷ್ಮೀ ಹಣದಿಂದ ಕಣ್ಣಿನ ಆಪರೇಷನ್ ಮಾಡಿದ ಮಹಿಳೆಯೊಬ್ಬರು ವಿಡಿಯೋ ಮಾಡಿ ಸಿಎಂ ಸಿದ್ದರಾಮಯ್ಯ ಹಾಗೂ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗೆ ಧನ್ಯವಾದ ತಿಳಿಸಿದ್ದಾರೆ.
ಆನಗೋಳ ಗ್ರಾಮದ ಚಂದ್ರಶೇಖರ್ ಬಡಿಗೇರ್ ಎಂಬುವರಿಗೆ ಅವರ ಪತ್ನಿ ಅನಿತಾ ಬಡಿಗೇರ್ ಗೃಹಲಕ್ಷ್ಮಿ ಯೋಜನೆಯಿಂದ ಬಂದ ಹಣವನ್ನು ಅನಿತಾ ಕೂಡಿಟ್ಟಿದ್ದರು. ಗೃಹಲಕ್ಷ್ಮಿಯಿಂದ ಬಂದ 18 ಸಾವಿರ ರೂ. ಮತ್ತು ತನ್ನ ಬಳಿ ಇದ್ದ 10 ಸಾವಿರ ಹಣ ಸೇರಿಸಿ ಪತಿ ಚಂದ್ರಶೇಖರ್ ಅವರ ಕಣ್ಣಿನ ಆಪರೇಷನ್ ಮಾಡಿಸಿದ್ದಾರೆ.
ಗೃಹಲಕ್ಷ್ಮಿ ಹಣದಿಂದ ಕಣ್ಣಿನ ಆಪರೇಷನ್ ಮಾಡಿಸಿದ್ದು, ವಿಡಿಯೋ ಮಾಡಿ ಸಂತಸ ಹಂಚಿಕೊಂಡಿದ್ದಾರೆ. ಗೃಹಲಕ್ಷ್ಮಿ ಹಣದಿಂದ ನನ್ನ ಗಂಡನ ಕಣ್ಣಿನ ಆಪರೇಷನ್ ಮಾಡಿಸಿದ್ದೇನೆ. ಈ ಯೋಜನೆ ಜಾರಿಗೆ ತಂದ ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಅಂತ ಹೇಳಿದ್ದಾರೆ.