Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಬೆಂಗಳೂರು ಕಾಲ್ತುಳಿತ ದುರಂತ: ಸಿಎಂ, ಡಿಸಿಎಂ, ಗೃಹ ಸಚಿವರ ವಿರುದ್ಧ ಬಿಜೆಪಿ ದೂರು

06/06/2025 5:58 PM

ಇಸ್ರೇಲ್- ಹಮಾಸ್ ಯುದ್ಧದ ಎಫೆಕ್ಟ್ ; ₹5 ಮೌಲ್ಯದ ‘ಪಾರ್ಲೆ ಜಿ ಬಿಸ್ಕತ್ತು’ ಗಾಜಾದಲ್ಲಿ ₹2,300ಕ್ಕೆ ಮಾರಾಟ

06/06/2025 5:52 PM

ಪೊಲೀಸರು ಅನುಮತಿ ನಿರಾಕರಿಸಿದರೂ, ಸರ್ಕಾರದಲ್ಲಿರುವ ಕಾಂಗ್ರೆಸ್‌ ನಾಯಕರು ಒತ್ತಡ: ಆರ್.ಅಶೋಕ್ ಗಂಭೀರ ಆರೋಪ

06/06/2025 5:50 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನಮ್ಮ ಸರ್ಕಾರ ಇರುವವರೆಗೂ `ಗೃಹಲಕ್ಷ್ಮಿ’ ಯೋಜನೆ ನಿಲ್ಲಲ್ಲ : CM ಸಿದ್ದರಾಮಯ್ಯ ಸ್ಪಷ್ಟನೆ
KARNATAKA

ನಮ್ಮ ಸರ್ಕಾರ ಇರುವವರೆಗೂ `ಗೃಹಲಕ್ಷ್ಮಿ’ ಯೋಜನೆ ನಿಲ್ಲಲ್ಲ : CM ಸಿದ್ದರಾಮಯ್ಯ ಸ್ಪಷ್ಟನೆ

By kannadanewsnow5727/08/2024 7:02 AM

ಬೆಂಗಳೂರು : ಗೃಹಲಕ್ಷ್ಮಿ ಯೋಜನೆ ಇಂದು ಬಹಳಷ್ಟು ಕುಟುಂಬಗಳ ಪಾಲಿಗೆ ಅಕ್ಷರಶಃ ವರದನವಾಗಿದೆ. ನಮ್ಮ ಸರ್ಕಾರ ಇರುವ ತನಕ ಈ ಯೋಜನೆ ನಿಲ್ಲಿಸುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

ಈ ಕುರಿತು ವಿಡಿಯೋ ಬಿಡುಗಡೆ ಮಾಡಿರುವ ಸಿಎಂ ಸಿದ್ದರಾಮಯ್ಯ, ಗೃಹಲಕ್ಷ್ಮಿಯರಿಗೆ ಬೆಲೆಯೇರಿಕೆಯ ಬಿಸಿ ತಟ್ಟದಿರಲಿ ಎಂಬ ಸದುದ್ದೇಶದಿಂದ ನಾವು ಜಾರಿಗೊಳಿಸಿರುವ ಗೃಹಲಕ್ಷ್ಮಿ ಯೋಜನೆ ಇಂದು ಬಹಳಷ್ಟು ಕುಟುಂಬಗಳ ಪಾಲಿಗೆ ಅಕ್ಷರಶಃ ವರದಾನವಾಗಿದೆ. ಗೃಹಲಕ್ಷ್ಮಿಯ ಹಣ ಮಕ್ಕಳ ವಿದ್ಯಾಭ್ಯಾಸ, ಮನೆಗೆ ದಿನಸಿ, ಹಬ್ಬಕ್ಕೆ ಬಟ್ಟೆ, ಆಸ್ಪತ್ರೆ ಖರ್ಚು ವೆಚ್ಚ ಭರಿಸಲು ಬಳಕೆಯಾದ ಬಹಳಷ್ಟು ಸುದ್ದಿಗಳನ್ನು ಮಾಧ್ಯಮಗಳಲ್ಲಿ ಕಂಡಿದ್ದೆ. ಅವೆಲ್ಲವೂ ಯೋಜನೆಯ ಯಶಸ್ಸಿಗೆ ಹಿಡಿದ ಕನ್ನಡಿಯಂತಿದ್ದವು.

ಗೃಹಲಕ್ಷ್ಮಿಯರಿಗೆ ಬೆಲೆಯೇರಿಕೆಯ ಬಿಸಿ ತಟ್ಟದಿರಲಿ ಎಂಬ ಸದುದ್ದೇಶದಿಂದ ನಾವು ಜಾರಿಗೊಳಿಸಿರುವ ಗೃಹಲಕ್ಷ್ಮಿ ಯೋಜನೆ ಇಂದು ಬಹಳಷ್ಟು ಕುಟುಂಬಗಳ ಪಾಲಿಗೆ ಅಕ್ಷರಶಃ ವರದಾನವಾಗಿದೆ. ಗೃಹಲಕ್ಷ್ಮಿಯ ಹಣ ಮಕ್ಕಳ ವಿದ್ಯಾಭ್ಯಾಸ, ಮನೆಗೆ ದಿನಸಿ, ಹಬ್ಬಕ್ಕೆ ಬಟ್ಟೆ, ಆಸ್ಪತ್ರೆ ಖರ್ಚು ವೆಚ್ಚ ಭರಿಸಲು ಬಳಕೆಯಾದ ಬಹಳಷ್ಟು ಸುದ್ದಿಗಳನ್ನು ಮಾಧ್ಯಮಗಳಲ್ಲಿ… pic.twitter.com/Gf527sMzlW

— Siddaramaiah (@siddaramaiah) August 26, 2024

ಆದರೆ  ಬೆಳಗಾವಿ‌ ಜಿಲ್ಲೆಯ ರಾಯಬಾಗ್ ತಾಲೂಕಿನ ಸುಟ್ಟಟ್ಟಿ ಗ್ರಾಮದ ಅಕ್ಕಾತಾಯಿ ಲಂಗೂಟಿ ಎಂಬ ಹಿರಿಯ ಜೀವವೊಂದು ತನಗೆ ಬಂದ ಗೃಹಲಕ್ಷ್ಮಿಯ ಹಣದಲ್ಲಿ ಊರಿನ ಜನಕ್ಕೆಲ್ಲ ಹೋಳಿಗೆ ಊಟ ಹಾಕಿ, ಮುತ್ತೈದೆಯರಿಗೆ ಮಡಿಲು ತುಂಬಿರುವ ವೀಡಿಯೋವನ್ನು ನೋಡಿದೆ, ಆ ತಾಯಿ ಸಿದ್ದರಾಮಯ್ಯನಿಗೆ ಒಳಿತಾಗಲೆಂದು ಇದನ್ನು ಮಾಡುತ್ತಿದ್ದೇನೆಂದು ಹೇಳಿದ್ದು ಕೇಳಿ ಮನಸ್ಸು ತುಂಬಿಬಂತು. ಇಂತಹ ಲಕ್ಷಾಂತರ ತಾಯಂದಿರ, ಅಕ್ಕ ತಂಗಿಯರ ಆಶೀರ್ವಾದ, ಹಾರೈಕೆ ನನ್ನ ಜೊತೆಗಿದೆ. ಈ ಪ್ರೀತಿ, ಅಕ್ಕರೆಗಳೇ ನನ್ನ ಬಲ.

ಗೃಹಲಕ್ಷ್ಮಿ ಯೋಜನೆ ನಿಲ್ಲಬಾರದು, ಇದು ಇನ್ನಷ್ಟು ಬಡವರ ಹೊಟ್ಟೆತುಂಬಿಸಲಿ ಎಂದು ಅಕ್ಕಾತಾಯಿ ಲಂಗೂಟಿ ಅವರು ಮನವಿ ಮಾಡಿದ್ದಾರೆ, ಯಾವುದೇ ಕಾರಣಕ್ಕೂ ಗೃಹಲಕ್ಷ್ಮಿ ಯೋಜನೆ ಸ್ಥಗಿತ ಮಾಡಲ್ಲ, ನಮ್ಮ ಸರ್ಕಾರ ಇರುವವರೆಗೆ ಗೃಹಲಕ್ಷ್ಮಿಯ ಹಣ ಬಡವರ ಮನೆ ಸೇರುತ್ತದೆ ಎಂಬುದನ್ನು ಈ ಮೂಲಕ ಆ ಹಿರಿಯ ಜೀವಕ್ಕೆ ಮಾತ್ರವಲ್ಲ ನಾಡಿನ ಪ್ರತಿಯೊಬ್ಬರಿಗೂ ಖಾತ್ರಿಪಡಿಸುತ್ತಿದ್ದೇನೆ.

ನಮ್ಮ ಮಣ್ಣಿನ ಗುಣವೇ ಹಾಗೆ, ತನಗೆ ಸಿಕ್ಕಿದ್ದನ್ನು ಹಂಚಿ ತಿನ್ನುವ ಔದಾರ್ಯ, ಇನ್ನೊಬ್ಬರ ಒಳಿತು ಬಯಸುವ ನಿಸ್ವಾರ್ಥ ಭಾವವಿದೆ. ಇಂತಹವರ ಸೇವೆ ಮಾಡುವ ಅವಕಾಶ ಸಿಕ್ಕಿರುವುದು ನನ್ನ ಭಾಗ್ಯವೇ ಸರಿ. ಹೀಗಿದ್ದರೂ ಅಕ್ಕಾತಾಯಿ ಲಗೋಟಿ ಅವರಲ್ಲಿ ಒಂದು ಸವಿನಯ ವಿನಂತಿ ಇದೆ. “ಊರಿಗೆ ಹೋಳಿಗೆ ಊಟ ಹಾಕುವುದು ಒಳ್ಳೆಯ ಗುಣವೇ ಸರಿ. ಆದರೆ ಗೃಹಲಕ್ಷ್ಮಿ ಯೋಜನೆಯ ಹಣದ ಮೇಲಿನ ಮೊದಲ ಹಕ್ಕು ಸ್ವಂತ ಕುಟುಂಬದ್ದಾಗಿದೆ. ಅಕ್ಕಾತಾಯಿಯಂತಹ ಒಳ್ಳೆಯ ಮನಸ್ಸಿನ ಸೋದರಿಯರು ಈ ಹಣವನ್ನು ಮೊದಲು ತಮ್ಮ ಕುಟುಂಬದ ಸದಸ್ಯರಿಗೆ ಆರೋಗ್ಯಕರವಾದ ಊಟ-ತಿಂಡಿ ಮತ್ತು ಮಕ್ಕಳ ಶಿಕ್ಷಣ ನೀಡಲು ಬಳಸಿದಾಗ ಮಾತ್ರ ಯೋಜನೆಯ ಉದ್ದೇಶ ಈಡೇರಿದಂತಾಗುತ್ತದೆ ಎಂದಿದ್ದಾರೆ.

`Gruhalakshmi' scheme will not stop till our government exists: CM Siddaramaiah clarifies ನಮ್ಮ ಸರ್ಕಾರ ಇರುವವರೆಗೂ `ಗೃಹಲಕ್ಷ್ಮಿ' ಯೋಜನೆ ನಿಲ್ಲಲ್ಲ : CM ಸಿದ್ದರಾಮಯ್ಯ ಸ್ಪಷ್ಟನೆ
Share. Facebook Twitter LinkedIn WhatsApp Email

Related Posts

BREAKING: ಬೆಂಗಳೂರು ಕಾಲ್ತುಳಿತ ದುರಂತ: ಸಿಎಂ, ಡಿಸಿಎಂ, ಗೃಹ ಸಚಿವರ ವಿರುದ್ಧ ಬಿಜೆಪಿ ದೂರು

06/06/2025 5:58 PM1 Min Read

ಪೊಲೀಸರು ಅನುಮತಿ ನಿರಾಕರಿಸಿದರೂ, ಸರ್ಕಾರದಲ್ಲಿರುವ ಕಾಂಗ್ರೆಸ್‌ ನಾಯಕರು ಒತ್ತಡ: ಆರ್.ಅಶೋಕ್ ಗಂಭೀರ ಆರೋಪ

06/06/2025 5:50 PM2 Mins Read

ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಹೋಗಿದ್ದು ಏನ್ ತಪ್ಪಿದೆ?: ಡಿಸಿಎಂ ಡಿ.ಕೆ ಶಿವಕುಮಾರ್ ಪ್ರಶ್ನೆ

06/06/2025 5:44 PM1 Min Read
Recent News

BREAKING: ಬೆಂಗಳೂರು ಕಾಲ್ತುಳಿತ ದುರಂತ: ಸಿಎಂ, ಡಿಸಿಎಂ, ಗೃಹ ಸಚಿವರ ವಿರುದ್ಧ ಬಿಜೆಪಿ ದೂರು

06/06/2025 5:58 PM

ಇಸ್ರೇಲ್- ಹಮಾಸ್ ಯುದ್ಧದ ಎಫೆಕ್ಟ್ ; ₹5 ಮೌಲ್ಯದ ‘ಪಾರ್ಲೆ ಜಿ ಬಿಸ್ಕತ್ತು’ ಗಾಜಾದಲ್ಲಿ ₹2,300ಕ್ಕೆ ಮಾರಾಟ

06/06/2025 5:52 PM

ಪೊಲೀಸರು ಅನುಮತಿ ನಿರಾಕರಿಸಿದರೂ, ಸರ್ಕಾರದಲ್ಲಿರುವ ಕಾಂಗ್ರೆಸ್‌ ನಾಯಕರು ಒತ್ತಡ: ಆರ್.ಅಶೋಕ್ ಗಂಭೀರ ಆರೋಪ

06/06/2025 5:50 PM

ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಹೋಗಿದ್ದು ಏನ್ ತಪ್ಪಿದೆ?: ಡಿಸಿಎಂ ಡಿ.ಕೆ ಶಿವಕುಮಾರ್ ಪ್ರಶ್ನೆ

06/06/2025 5:44 PM
State News
KARNATAKA

BREAKING: ಬೆಂಗಳೂರು ಕಾಲ್ತುಳಿತ ದುರಂತ: ಸಿಎಂ, ಡಿಸಿಎಂ, ಗೃಹ ಸಚಿವರ ವಿರುದ್ಧ ಬಿಜೆಪಿ ದೂರು

By kannadanewsnow0906/06/2025 5:58 PM KARNATAKA 1 Min Read

ಬೆಂಗಳೂರು: ನಗರದ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿಯಲ್ಲಿ ಉಂಟಾದಂತ ಕಾಲ್ತುಳಿತ ದುರಂತದಲ್ಲಿ 11 ಮಂದಿ ಆರ್ ಸಿ ಬಿ ಅಭಿಮಾನಿಗಳು ಸಾವನ್ನಪ್ಪಿದ್ದರು.…

ಪೊಲೀಸರು ಅನುಮತಿ ನಿರಾಕರಿಸಿದರೂ, ಸರ್ಕಾರದಲ್ಲಿರುವ ಕಾಂಗ್ರೆಸ್‌ ನಾಯಕರು ಒತ್ತಡ: ಆರ್.ಅಶೋಕ್ ಗಂಭೀರ ಆರೋಪ

06/06/2025 5:50 PM

ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಹೋಗಿದ್ದು ಏನ್ ತಪ್ಪಿದೆ?: ಡಿಸಿಎಂ ಡಿ.ಕೆ ಶಿವಕುಮಾರ್ ಪ್ರಶ್ನೆ

06/06/2025 5:44 PM

ಬೆಂಗಳೂರು ಕಾಲ್ತುಳಿತ ದುರಂತ ಕೇಸ್: ಸಿಎಂ, ಡಿಸಿಎಂ ರಾಜೀನಾಮೆಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಆಗ್ರಹ

06/06/2025 5:36 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.