ಬೆಂಗಳೂರು : ಕಳೆದ ಮೂರು ತಿಂಗಳಿನಿಂದ ಜಿಎಸ್ಟಿ ಸಂಗ್ರಹವು 10 ಸಾವಿರ ಕೋಟಿ ರು. ದಾಟಿದ್ದು, ಇದು ರಾಜ್ಯಕ್ಕೆ ಉತ್ತಮ ಬೆಳವಣಿಗೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಬೊಮ್ಮಾಯಿ ಕರ್ನಾಟಕದ ಮಾಸಿಕ ಜಿಎಸ್ಟಿ ಸಂಗ್ರಹವು ಸತತ 3 ತಿಂಗಳುಗಳಿಂದ 10 ಸಾವಿರ ಕೋಟಿ ರೂ.ಗಳನ್ನು ದಾಟಿದೆ, ಇದು ಮಹಾರಾಷ್ಟ್ರದ ನಂತರದ ಸ್ಥಾನದಲ್ಲಿ ಕರ್ನಾಟಕ ಇದೆ. ಇದು ಸಕಾರಾತ್ಮಕ ಬೆಳವಣಿಗೆಯಾಗಿದೆ. ನಾವು ಉತ್ತಮ ಬೆಳವಣಿಗೆಯ ಪಥದಲ್ಲಿದ್ದೇವೆ. ಕೋವಿಡ್ ನಿಂದ ಯಾವುದೇ ಪರಿಣಾಮ ಬೀರಿಲ್ಲ, ರಾಷ್ಟ್ರೀಯ ಆರ್ಥಿಕತೆಯನ್ನು ಉತ್ತೇಜಿಸಲು ಹೆಮ್ಮೆಪಡುತ್ತೇನೆ ಎಂದು ತಿಳಿಸಿದ್ದಾರೆ.
ಡಿಸೆಂಬರ್ನಲ್ಲಿ ದೇಶಾದ್ಯಂತ ಒಟ್ಟು 1.49 ಲಕ್ಷ ಕೋಟಿ ಜಿಎಸ್ಟಿ ಸಂಗ್ರಹವಾಗಿದ್ದು, ಕರ್ನಾಟಕ 10,061 ಕೋಟಿ ರೂ ಕಲೆಕ್ಷನ್ ಮಾಡಿದೆ. ಮೊದಲ ಸ್ಥಾನದಲ್ಲಿರುವ ಮಹಾರಾಷ್ಟ್ರ 23,598 ಕೋಟಿ ರು. ಜಿಎಸ್ಟಿ ಸಂಗ್ರಹ ಮಾಡಿದೆ ಎಂದು ತಿಳಿದು ಬಂದಿದೆ.
BIGG NEWS : ಓಲಾ, ಊಬರ್ ಆಟೋ ಸೇವೆಗೆ ಶೇ.5ರಷ್ಟು ಸೇವಾಶುಲ್ಕ: ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆ