ನವದೆಹಲಿ : ಮಾರ್ಚ್ 2024ರಲ್ಲಿ ಒಟ್ಟು ಜಿಎಸ್ ಟಿ ಸಂಗ್ರಹವು ವರ್ಷದಿಂದ ವರ್ಷಕ್ಕೆ ಶೇಕಡಾ 11.5ರಷ್ಟು ಏರಿಕೆಯಾಗಿ 1,78 ಲಕ್ಷ ಕೋಟಿ ರೂ.ಗೆ ತಲುಪಿದೆ ಎಂದು ಸೋಮವಾರ ಬಿಡುಗಡೆಯಾದ ಅಧಿಕೃತ ಹೇಳಿಕೆಯಲ್ಲಿ ತಿಳಿಸಲಾಗಿದೆ. ಇದು ಮಾರ್ಚ್ನಲ್ಲಿ 1.78 ಲಕ್ಷ ಕೋಟಿ ರೂ.ಗಳ ಎರಡನೇ ಅತಿ ಹೆಚ್ಚು ಮಾಸಿಕ ಒಟ್ಟು ಜಿಎಸ್ಟಿ ಆದಾಯ ಸಂಗ್ರಹವಾಗಿದೆ.
2024ರ ಮಾರ್ಚ್ ತಿಂಗಳಲ್ಲಿ ಕರ್ನಾಟಕದಲ್ಲಿ ಒಟ್ಟಾರೆ 11392 ಕೋಟಿ ಜಿಎಸ್ಟಿ ಸಂಗ್ರಹವಾಗಿದೆ. ಈ ಮೂಲಕ ಕರ್ನಾಟಕ ದೇಶ ದಲ್ಲೇ 2ನೇ ಸ್ಥಾನದಲ್ಲಿ ಮುಂದುವರೆದಿದೆ. ಮಹಾರಾಷ್ಟ್ರ 27688 ಕೋಟಿ ರು.ನೊಂದಿಗೆ ಮೊದಲ ಸ್ಥಾನದಲ್ಲಿದೆ. ಆದರೆ ಕಳೆದ ಒಂದು ವರ್ಷದಲ್ಲಿ ಗಣನೀಯ ಪ್ರಗತಿ ಸಾಧಿಸಿದ ಪ್ರಮುಖ ರಾಜ್ಯಗಳ ಪೈಕಿ ಕರ್ನಾಟಕ ಮೊದಲ ಸ್ಥಾನ ಪಡೆದಿದೆ. 2023ರ ಮಾರ್ಚ್‌ನಲ್ಲಿ ಕರ್ನಾಟಕ 10360 ಕೋಟಿ ರು. ಜಿಎಸ್ಟಿ ಸಂಗ್ರಹಿಸಿದ್ದರೆ ಕಳೆದ ತಿಂಗಳು 13014 ಕೋಟಿ ರು. ಸಂಗ್ರಹಿಸಿದೆ. ಅಂದರೆ ಶೇ.26ರಷ್ಟು ಹೆಚ್ಚಳವಾಗಿದೆ.
ಮಾರ್ಚ್ 2024 ರಲ್ಲಿ ಒಟ್ಟು ಸರಕು ಮತ್ತು ಸೇವಾ ತೆರಿಗೆ (GST) ಆದಾಯವು 1.78 ಲಕ್ಷ ಕೋಟಿ ರೂ.ಗಳ ಎರಡನೇ ಅತಿ ಹೆಚ್ಚು ಸಂಗ್ರಹಕ್ಕೆ ಸಾಕ್ಷಿಯಾಗಿದೆ, ಇದು ವರ್ಷದಿಂದ ವರ್ಷಕ್ಕೆ ಶೇಕಡಾ 11.5 ರಷ್ಟು ಬೆಳವಣಿಗೆಯಾಗಿದೆ. ದೇಶೀಯ ವಹಿವಾಟುಗಳಿಂದ ಜಿಎಸ್ಟಿ ಸಂಗ್ರಹದಲ್ಲಿ ಶೇಕಡಾ 17.6 ರಷ್ಟು ಗಮನಾರ್ಹ ಏರಿಕೆ ಕಂಡುಬಂದಿದೆ. ಮಾರ್ಚ್ 2024 ರಲ್ಲಿ ಮರುಪಾವತಿಯ ಜಿಎಸ್ಟಿ ಆದಾಯ ನಿವ್ವಳವು 1.65 ಲಕ್ಷ ಕೋಟಿ ರೂ.ಗಳಾಗಿದ್ದು, ಇದು ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ಶೇಕಡಾ 18.4 ರಷ್ಟು ಬೆಳವಣಿಗೆಯಾಗಿದೆ ಎಂದು ಹಣಕಾಸು ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.