Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸೇನಾ ಕ್ಯಾಪ್ಟನ್ ಪ್ರೇಯಸಿಗೆ ಮಾಡಿದ ಪ್ರಪೋಸ್ ಪುಲ್ ವೈರಲ್; ನೆಟ್ಟಿಗರ ಕಾಮೆಂಟ್ ಸುರಿಮಳೆ

​ನಾರ್ವೆ ಚೆಸ್: ಗುಕೇಶ್ ವಿರುದ್ಧ ರೋಚಕ ಜಯ ಸಾಧಿಸಿದ ಪ್ರಜ್ಞಾನಂದ; ಪ್ರಶಸ್ತಿ ರೇಸ್‌ನಲ್ಲಿ ಮುನ್ನಡೆ!

BREAKING: ಕಲಬುರ್ಗಿಯಲ್ಲಿ ಪ್ರೀತಿ ನಿರಾಕರಣೆಯ ಭೀತಿಯಲ್ಲಿ ರೈಲಿಗೆ ತಲೆಕೊಟ್ಟು ಪ್ರೇಮಿಗಳು ಆತ್ಮಹತ್ಯೆ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » GST ಕಡಿತ ದಸರಾ ಹಬ್ಬದ ಕೊಡುಗೆ: ಪ್ರಧಾನಿ ಮೋದಿಗೆ ಸಂಸದ ಬೊಮ್ಮಾಯಿ ಅಭಿನಂದನೆ
KARNATAKA

GST ಕಡಿತ ದಸರಾ ಹಬ್ಬದ ಕೊಡುಗೆ: ಪ್ರಧಾನಿ ಮೋದಿಗೆ ಸಂಸದ ಬೊಮ್ಮಾಯಿ ಅಭಿನಂದನೆ

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ಜನ ಸಾಮಾನ್ಯರ ತೆರಿಗೆ ಭಾರವನ್ನು ಅತ್ಯಂತ ಕಡಿಮೆ ಮಾಡಿ ದಸರಾ ಹಬ್ಬದ ಕೊಡುಗೆ ನೀಡಿರುವ ಪ್ರಧಾನಿ ನರೇಂದ್ರ ಮೊದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೃದಯಪೂರ್ವಕ ಅಭಿನಂದನೆ ಸಲ್ಲಿಸಿದ್ದಾರೆ. ಅಲ್ಲದೇ ರಾಜ್ಯ ಸರ್ಕಾರ ಜನರ ಮೇಲೆ ಹಾಕಿರುವ ತೆರಿಗೆ ಇಳಿಸುವುದೇ ಎಂದು ಜನಸಾಮಾನ್ಯರು ಕೇಳುತ್ತಿದ್ದಾರೆ ಎಂದು ಹೇಳಿದ್ದಾರೆ.

ಈ ಕುರಿತು ಎಕ್ಸ್ ಮಾಡಿರುವ ಅವರು 2017 ರಲ್ಲಿ ಪ್ರಾರಂಭವಾಗಿರುವ ಜಿಎಸ್ ಟಿ ದಿಟ್ಟ ನಿರ್ಧಾರ. ಕೊವಿಡ್ ಸಂದರ್ಭದಲ್ಲಿಯೂ ಯಾವ ರಾಜ್ಯಕ್ಕೂ ತೊಂದರೆ ಆದಗಂತೆ ನೋಡಿಕೊಂಡಿರುವ ಶ್ರೇಯಸ್ಸು ಪ್ರಧಾನಿ ನರೇಂದ್ರ ಮೋದಿಯವರಿಗೆ ಸಲ್ಲುತ್ತದೆ. ಈಗ ಆರ್ಥಿಕ ಸುಭದ್ರತೆಯ ಹಿನ್ನೆಲೆಯಲ್ಲಿ ಬಹಳಷ್ಟು ವಸ್ತುಗಳಿಗೆ ತೆರಿಗೆ ವಿನಾಯತಿ ಮಾಡಿದ್ದಾರೆ. ಶೇ. 90 ರಷ್ಟು ವಸ್ತುಗಳ ಮೇಲಿನ ತೆರಿಗೆಯನ್ನು ಶೇ ೫% ಕ್ಕೆ ಇಳಿಸಿದ್ದಾರೆ. ಕೆಲವು ವಸ್ತುಗಳಿಗೆ ಶೇ 18% ರಷ್ಟು ತೆರಿಗೆ ಮಾಡಿ ಕೇವಲ ಎರಡೇ ಸ್ಲ್ಯಾಬ್ ಮಾಡಿ ತೆರಿಗೆ ಸರಳೀಕರಣ ಮಾಡಿರುವ ಶ್ರೇಯಸ್ಸು ಪ್ರಧಾನಿ ಮೋದಿಯವರಿಗೆ ಸಲ್ಲುತ್ತದೆ. ಇದರಿಂದ ರೈತರು ಬಳಕೆ ಮಾಡುವ ಟ್ರ್ಯಾಕ್ಟರ್, ಟೈಲರ್ ಮತ್ತು ಇತರ ಕೃಷಿ ಸಲಕರಣೆಗಳು, ಗೊಬ್ಬರ ಮೇಲಿನ ತೆರಿಗೆ ಕಡಿಮೆಯಾಗಿದೆ ಎಂದು ತಿಳಿಸಿದ್ದಾರೆ.

ಜನ ಸಾಮಾನ್ಯರು ಬಳಕೆ ಮಾಡುವ ಮೊಸರು, ಹಾಲು, ತುಪ್ಪ ಸೇರಿದಂತೆ ಬಹುತೇಕ ಎಲ್ಲ ವಸ್ತುಗಳ ಬೆಲೆ ಕಡಿಮೆಯಾಗುತ್ತದೆ. ಇದು ನಿಜವಾಗಲೂ ಬಡವರ ಪರ ಸರ್ಕಾರ ಎನ್ನುವುದನ್ನು ತೋರಿಸಿದ್ದಾರೆ. ಇದಲ್ಲದೇ ಆರ್ಥಿಕತೆಗೆ ಎಲ್ಲ ರೀತಿಯ ಪ್ರೋತ್ಸಾಹ ಸಿಗುತ್ತದೆ ಎನ್ನುವ ವಿಶ್ವಾಸದೊಂದಿಗೆ. ಭಾರತ ಅತ್ಯಂತ ವೇಗದಲ್ಲಿ ಐದು ಟ್ರಿಲಿಯನ್ ಡಾಲರ್ ಆರ್ಥಿಕತೆ ಆಗಲು ಇದು ಬಹಳ ದೊಡ್ಡ ಸಹಾಯ ಆಗಲಿದೆ. ಅಲ್ಲದೇ 2 ಲಕ್ಷ ಕೋಟಿ ರೂ. ಜನರ ಬಳಿ ತೆರಿಗೆ ಹಣ ಉಳಿಯಲಿದೆ. ತೆರಿಗೆ ಸರಳೀಕರಣ ಮಾಡಿ ಇನ್ವರ್ಟೆಡ್ ಡ್ಯೂಟಿ ಸ್ಟ್ರಕ್ಚರ್ ತೆಗೆದು ಹಾಕಿದ್ದಾರೆ. ನೇರವಾಗಿ ಎಲ್ಲ ಲಾಭವು ವಿಶೆಷವಾಗಿ ಸಣ್ಣ ಕೈಗಾರಿಕೆಗೆ ಸಿಗಲಿದೆ ಎಂದು ಹೇಳಿದ್ದಾರೆ.

ಇದೇ ಸಂದರ್ಭ ಪ್ರಧಾನಿ ನರೇಂದ್ರ ಮೋದಿಯವರ ಸ್ವಾಭಿಮಾನದ ಸ್ವಾವಲಂಬನೆಯ ಭಾರತ ನಿರ್ಮಾಣಕ್ಕೆ ಬಹಳ ದೊಡ್ಡ ಶಕ್ತಿಯಾಗಿದೆ. ಎಲ್ಲರೂ ಕೂಡ ಆ ಕರೆಗೆ ಸಂಪೂರ್ಣವಾಗಿ ಸಹಕರಿಸಬೇಕು ಎಂದು ಕೋರಿದ್ದಾರೆ.

ಸಿಎಂ ತೆರಿಗೆ ಇಳಿಸುವರೇ?

ಪ್ರಧಾನಿ ನರೇಂದ್ರ ಮೋದಿಯವರು ಜಿಎಸ್ ಟಿ ತೆರಿಗೆ ಇಳಿಸಿ ಜನ ಸಾಮಾನ್ಯರಿಗೆ ಬಹಳ ದೊಡ್ಡ ಹಬ್ಬದ ಕೊಡುಗೆ ಕೊಟ್ಟ ಈ ಸಂದರ್ಭದಲ್ಲಿ ಕರ್ನಾಟಕ ಸರ್ಕಾರ ಕಳೆದ ಎರಡು ವರ್ಷದಲ್ಲಿ ಒಂದು ಲಕ್ಷ. ಕೋಟಿ ಹೊಸ ತೆರಿಗೆಯನ್ನು ಜನರ ಮೇಲೆ ಹಾಕಿರುವ ಅಪಖ್ಯಾತಿ ಕರ್ನಾಟಕ ಕಾಂಗ್ರೆಸ್ ಸಿದ್ದರಾಮಯ್ಯ ಸರ್ಕಾರದ ಮೇಲಿದೆ. ಇವರು ಬಂದ ತಕ್ಷಣವೇ ಪೆಟ್ರೊಲ್, ಮೊಟರ್ ವೆಹಿಕಲ್ ತೆರಿಗೆ, ಸ್ಟ್ಯಾಂಪ್ ಡ್ಯೂಟಿ, ಅಬಕಾರಿಗೆ ಅತಿ ಹೆಚ್ಚು ತೆರಿಗೆ ಹಾಕಿದ್ದು, ಇದರಿಂದ ಹಾಲು, ನೀರು ಜನಸಾಮಾನ್ಯರು ಬಳಕೆ ಮಾಡುವ ವಸ್ತುಗಳು ದುಬಾರಿಯಾಗಿವೆ. ಇವರು ನೀರೀನ ಮೇಲೂ, ಗಾಳಿಯ ಮೇಲೂ ತೆರಿಗೆ ಹಾಕಿದ್ದಾರೆ‌. ಅಷ್ಟೆಯಲ್ಲ ಬೆಂಗಳೂರಿನಲ್ಲಿ ಕಸದ ಮೇಲೂ ವಿಶೇಷ ತೆರಿಗೆ ಹಾಕಿದ್ದಾರೆ. ಇದೊಂದು ತೆರಿಗೆ ಭಾರ ಹಾಕಿರುವ ಜನ ವಿರೋಧಿ ಸರ್ಕಾರ ಎನ್ನುವುದು ಸ್ಪಷ್ಟವಾಗಿದೆ. ಈ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಅವರು ತಾವು ಹಾಕಿರುವ ತೆರಿಗೆಗಳನ್ನು ಕಡಿಮೆ ಮಾಡುತ್ತಾರೆಯೇ ಎಂಬ ಪ್ರಶ್ನೆಯನ್ನು ಜನ ಸಾಮಾನ್ಯರು ಕೇಳುತ್ತಿದ್ದಾರೆ ಎಂದು ತಿಳಿಸಿದ್ದಾರೆ.

Share. Facebook Twitter LinkedIn WhatsApp Email

Related Posts

BREAKING: ಕಲಬುರ್ಗಿಯಲ್ಲಿ ಪ್ರೀತಿ ನಿರಾಕರಣೆಯ ಭೀತಿಯಲ್ಲಿ ರೈಲಿಗೆ ತಲೆಕೊಟ್ಟು ಪ್ರೇಮಿಗಳು ಆತ್ಮಹತ್ಯೆ!

1 Min Read

BREAKING: ವಿಧಾನ ಪರಿಷತ್ ಚುನಾವಣೆಗೆ 5ನೇ ಅಭ್ಯರ್ಥಿ ಕಣಕ್ಕೆ ಇಳಿಸಿದ ಕಾಂಗ್ರೆಸ್

1 Min Read

BREAKING: ಧಾರವಾಡ ವಿವಿಯಲ್ಲಿ ಸಂಶೋಧನಾ ವಿದ್ಯಾರ್ಥಿಗೆ ಪ್ರಾಧ್ಯಾಪಕನಿಂದಲೇ ಕಿರುಕುಳ!

2 Mins Read
Recent News

ಸೇನಾ ಕ್ಯಾಪ್ಟನ್ ಪ್ರೇಯಸಿಗೆ ಮಾಡಿದ ಪ್ರಪೋಸ್ ಪುಲ್ ವೈರಲ್; ನೆಟ್ಟಿಗರ ಕಾಮೆಂಟ್ ಸುರಿಮಳೆ

​ನಾರ್ವೆ ಚೆಸ್: ಗುಕೇಶ್ ವಿರುದ್ಧ ರೋಚಕ ಜಯ ಸಾಧಿಸಿದ ಪ್ರಜ್ಞಾನಂದ; ಪ್ರಶಸ್ತಿ ರೇಸ್‌ನಲ್ಲಿ ಮುನ್ನಡೆ!

BREAKING: ಕಲಬುರ್ಗಿಯಲ್ಲಿ ಪ್ರೀತಿ ನಿರಾಕರಣೆಯ ಭೀತಿಯಲ್ಲಿ ರೈಲಿಗೆ ತಲೆಕೊಟ್ಟು ಪ್ರೇಮಿಗಳು ಆತ್ಮಹತ್ಯೆ!

BREAKING: ವಿಧಾನ ಪರಿಷತ್ ಚುನಾವಣೆಗೆ 5ನೇ ಅಭ್ಯರ್ಥಿ ಕಣಕ್ಕೆ ಇಳಿಸಿದ ಕಾಂಗ್ರೆಸ್

State News
KARNATAKA

BREAKING: ಕಲಬುರ್ಗಿಯಲ್ಲಿ ಪ್ರೀತಿ ನಿರಾಕರಣೆಯ ಭೀತಿಯಲ್ಲಿ ರೈಲಿಗೆ ತಲೆಕೊಟ್ಟು ಪ್ರೇಮಿಗಳು ಆತ್ಮಹತ್ಯೆ!

By ವಸಂತ ಬಿ ಈಶ್ವರಗೆರೆ KARNATAKA 1 Min Read

ಕಲಬುರ್ಗಿ: ಮನೆಯವರು ತಮ್ಮ ಪ್ರೀತಿಯನ್ನು ಒಪ್ಪುವುದಿಲ್ಲ ಹಾಗೂ ಮದುವೆಗೆ ವಿರೋಧ ಮಾಡುತ್ತಾರೆ ಎಂಬ ಆತಂಕಕ್ಕೆ ಹೆದರಿದ ಪ್ರೇಮಿಗಳಿಬ್ಬರು ರೈಲಿಗೆ ತಲೆಕೊಟ್ಟು…

BREAKING: ವಿಧಾನ ಪರಿಷತ್ ಚುನಾವಣೆಗೆ 5ನೇ ಅಭ್ಯರ್ಥಿ ಕಣಕ್ಕೆ ಇಳಿಸಿದ ಕಾಂಗ್ರೆಸ್

BREAKING: ಧಾರವಾಡ ವಿವಿಯಲ್ಲಿ ಸಂಶೋಧನಾ ವಿದ್ಯಾರ್ಥಿಗೆ ಪ್ರಾಧ್ಯಾಪಕನಿಂದಲೇ ಕಿರುಕುಳ!

ಕೆಂಪೇಗೌಡ ಜಯಂತಿಯಂದು ಬಿಡಿಎ ವತಿಯಿಂದ 15 ಲಕ್ಷ ಸಸಿ ನೆಡುವ ಕಾರ್ಯಕ್ರಮ: ಸಿಎಂ ಡಿ.ಕೆ.ಶಿವಕುಮಾರ್

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.