ಮೈಸೂರು: ಲೋಕಸಭಾ ಚುನಾವಣೆ ವೇಳೆಯಲ್ಲಿ ಹಲವು ರಾಜಕೀಯ ನಾಯಕರುಗಳು ಪರಸ್ಪರ ಆರೋಪ, ಕಿಚಾಯಿಸುವುದು ಮಾಡುತ್ತಿರುವುದನ್ನು ನಾವು ಕಾಣುತ್ತಿದ್ದೇವೆ.
ಈ ನಡುವೆ ತಮ್ಮ ಕಾರ್ಯಸಾಧನೆ ಬಗ್ಗೆ ಪ್ರಶ್ನೆ ಮಾಡಿದ್ದ ಸಿಎಂ ಸಿದ್ದರಾಮಯ್ಯ ಅವರಿಗೆ ಚಾಮುಂಡೇಶ್ವರಿ ಜೆಡಿಎಸ್ ಶಾಸಕ ಜೆ.ಟಿ ದೇವೇಗೌಡ ಅವರು ಕಿಡಿಕಾರಿದ್ದಾರೆ.
ಅವರು ಇಂದು ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡುತ್ತ, ನಾನು ಚಾಮುಂಡೇಶ್ವರಿ ಕ್ಷೇತ್ರಕ್ಕೆ ರಾಜೀನಾಮೆ ಕೊಡ್ತೀನಿ. ಬನ್ನಿ ಇಬ್ಬರು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಚುನಾವಣೆ ಗೆ ನಿಲ್ಲೋಣ. ಯಾರು ಗೆಲುತ್ತಾರೆ ನೋಡೋಣ? ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ಸವಾಲು ಹಾಕಿದ್ದಾರೆ. ಚಾಮುಂಡೇಶ್ವರಿ ಕ್ಷೇತ್ರದಲ್ಲಿನ ಬಿಇಒ, ತಹಸೀಲ್ದಾರರು ಎಲ್ಲಾ ಸಿಎಂ ಬಂಧುಗಳು. ಎಷ್ಟು ದಿನ ಸಿಎಂ ಆಗಿ ಇರ್ತಿರಿ? ಎಷ್ಟು ದಿನ ಅಧಿಕಾರದಲ್ಲಿ ಇರ್ತಿರಾ ನೀವು? ನೋಡೋಣ. ಎಷ್ಟು ನೋವು ಕೊಡ್ತಾ ಇದ್ದೀರಿ ನೀವು ನನಗೆ, ಪದೇ ಪದೇ ಬಂದು ಯಾಕೆ ರೀತಿ ಚುಚ್ಚಿ ಮಾತಾಡ್ತೀರಿ? ಅಂಥ ಅವರು ಹೇಳಿದರು. ಇನ್ನೂ ಜಿಟಿಡಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಏನು ಕಡಿದು ಕಟ್ಟೆ ಹಾಕಿದ್ದಾರೆ ಎಂಬ ಸಿಎಂ ಸಿದ್ದರಾಮಯ್ಯ ಮಾತಿಗೆ ತಿರುಗೇಟು ನೀಡಿದ್ದಾರೆ.