ಗುಜರಾತ್ ಟೈಟಾನ್ಸ್ ತಂಡದ ಆಲ್ರೌಂಡರ್ ಗ್ಲೆನ್ ಫಿಲಿಪ್ಸ್ ಐಪಿಎಲ್ 2025ರ ಉಳಿದ ಪಂದ್ಯಗಳಿಂದ ಹೊರಗುಳಿದಿದ್ದಾರೆ. ಈ ತಿಂಗಳ ಆರಂಭದಲ್ಲಿ ಎಸ್ಆರ್ಹೆಚ್ ವಿರುದ್ಧದ ಪಂದ್ಯದಲ್ಲಿ ಫೀಲ್ಡಿಂಗ್ ಮಾಡುವಾಗ ಕಿವೀಸ್ ಸ್ಟಾರ್ ಗಾಯಕ್ಕೆ ಒಳಗಾಗಿದ್ದರು.
ಫಿಲಿಪ್ಸ್ ಮನೆಗೆ ಮರಳಿದ್ದಾರೆ ಮತ್ತು ಇನ್ನು ಮುಂದೆ ಪಂದ್ಯಾವಳಿಯಲ್ಲಿ ಭಾಗವಹಿಸುವುದಿಲ್ಲ ಎಂದು ಮೂಲಗಳು ತಿಳಿಸಿವೆ.
“ಏಪ್ರಿಲ್ 6 ರಂದು ಸನ್ರೈಸರ್ಸ್ ಹೈದರಾಬಾದ್ (ಎಸ್ಆರ್ಹೆಚ್) ವಿರುದ್ಧದ ಪಂದ್ಯದ ವೇಳೆ ತೊಡೆಯ ಗಾಯಕ್ಕೆ ಒಳಗಾಗಿದ್ದ ಗುಜರಾತ್ ಟೈಟಾನ್ಸ್ ಆಲ್ರೌಂಡರ್ ಗ್ಲೆನ್ ಫಿಲಿಪ್ಸ್ ನ್ಯೂಜಿಲೆಂಡ್ಗೆ ಮರಳಿದ್ದಾರೆ” ಎಂದು ಜಿಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.