ಕಲಬುರ್ಗಿ : ವಿಧಾನಸಭಾ ಚುನಾವಣೆಯಲ್ಲಿ 135 ಸ್ಥಾನಗಳನ್ನು ಗೆದ್ದು ಅಧಿಕಾರಕ್ಕೆ ಬಂದ ನಂತರ 5 ಪ್ರಮುಖ ಗ್ಯಾರಂಟಿ ಯೋಜನೆಗಳನ್ನು ಕಾಂಗ್ರೆಸ್ ಜಾರಿ ಮಾಡಿತು. ಈ ಗ್ಯಾರಂಟಿ ಯೋಜನೆಗಳ ವಿಚಾರಕ್ಕೆ ಸಂಬಂಧಿಸಿದಂತೆ, ಬಾಳೆಹೊನ್ನೂರಿನ ರಂಭಾಪುರಿ ಪೀಠದ ಜಗದ್ಗುರುಗಳು ಪ್ರತಿಕ್ರಿಯೆ ನೀಡಿದ್ದು, ಗ್ಯಾರಂಟಿ ಯೋಜನೆಗಳು ಜನರನ್ನು ಸೋಮಾರಿಗಳಾಗಿ ಮಾಡುತ್ತಿವೆ. ಗ್ಯಾರಂಟಿ ಬಗ್ಗೆ ಪುನರ್ ಪರಿಶೀಲಿಸಲಿ ಎಂದು ಬಾಳೆಹೊನ್ನೂರಿನ ರಂಭಾಪುರಿ ಪೀಠದ ಜಗದ್ಗುರು ಹೇಳಿಕೆ ನೀಡಿದ್ದಾರೆ.

ಕಲಬುರ್ಗಿಯಲ್ಲಿ ಮಾತನಾಡಿದ ಅವರು, ರಾಜ್ಯ ರಾಜಕೀಯದಲ್ಲಿ ದಿನಕ್ಕೊಂದು ಹೊಸ ವಿಚಾರಗಳು ಕೇಳಿ ಬರುತ್ತಿವೆ. ಕೆಲ ಸ್ವಾಮೀಜಿಗಳು ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ. ಆದರೆ ಬಾಳೆಹೊನ್ನೂರಿನ ರಂಭಾಪುರಿ ಪೀಠಕ್ಕೆ ಜವಾಬ್ದಾರಿ ಇದೆ.ಆದರೆ ಅನಿವಾರ್ಯವಾಗಿ ಮಾತನಾಡಬೇಕಿದೆ ಎಂದರು.

ಕಾಂಗ್ರೆಸ್ ಪಕ್ಷ 135 ಸ್ಥಾನಗಳನ್ನು ಗೆದ್ದು ಪ್ರಬಲವಾಗಿ ಹೊರಹೊಮ್ಮಿದೆ. ಚೆನ್ನಾಗಿ ಆಡಳಿತ ನಡೆಸಬೇಕಿತ್ತು ಆದರೆ ಅವರಲ್ಲೇ ಕಿತ್ತಾಟ ಶುರುವಾಗಿದೆ. ಡಿಸಿಎಂ ಸ್ಥಾನಕ್ಕೆ ಕೆಲವರು ಬೇಡಿಕೆ ಇಡುತ್ತಿದ್ದಾರೆ.ಅದನ್ನು ಸರಿಪಡಿಸಲು ಸರ್ಕಾರದ ಹಗರಣಗಳು ಹೊರಬರುತ್ತಿವೆ. ತೈಲ ಹಾಲಿನ ದರ ಏರಿಕೆ ಆಗಿದೆ. ರಾಜ್ಯ ಸರ್ಕಾರ ಗಟ್ಟಿ ನಿರ್ಧಾರ ತೆಗೆದುಕೊಳ್ಳಬೇಕು ಎಂದರು.

ಸಿಎಂ ಕೆಲವೇ ಕೆಲವು ಸಮುದಾಯಗಳ ತುಷ್ಟಿಕರಣ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳಿಂದ ಅದ್ವಾನದ ಪರಿಸ್ಥಿತಿ ಆಗುತ್ತಿದೆ. ಜನರನ್ನು ಸೋಮಾರಿಗಳಾಗಿ ಮಾಡುತ್ತಿದೆ. ಗ್ಯಾರಂಟಿ ಯೋಜನೆಗಳ ಬಗ್ಗೆ ಪುನರ್ ಪರಿಶೀಲನೆ ನಡೆಸಬೇಕು ಎಂದು ಕಲಬುರ್ಗಿಯಲ್ಲಿ ಬಾಳೆಹೊನ್ನೂರಿನ ರಂಭಾಪುರಿ ಪೀಠದ ಜಗದ್ಗುರು ಹೇಳಿಕೆ ನೀಡಿದರು.

Share.
Exit mobile version