ಚಿಕ್ಕಬಳ್ಳಾಪುರ : ಇತ್ತೀಚಿಗೆ ಮಾಗಡಿ ಶಾಸಕ ಬಾಲಕೃಷ್ಣ ಅವರು ಕಾರ್ಯಕ್ರಮ ಒಂದರಲ್ಲಿ ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಮತ ಹಾಕದಿದ್ದರೆ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲಾಗುತ್ತೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು.ಇದೀಗ ಚಿಕ್ಕಬಳ್ಳಾಪುರದಲ್ಲಿ ಶಾಸಕ ಪ್ರದೀಪ ಈಶ್ವರ ಕೂಡ ಬಿಜೆಪಿ ಅಭ್ಯರ್ಥಿಗೆ ಮತ ಹಾಕಿದರೆ ಗ್ಯಾರಂಟಿ ಯೋಜನೆ ನಿಲ್ಲಿಸಲಾಗುತ್ತದೆ ಎಂದು ಹೇಳಿದರು.
ಚಿಕ್ಕಬಳ್ಳಾಪುರ ಜಿಲ್ಲೆಯ ಜಿಲ್ಲೆ ಬಾಗೇಪಲ್ಲಿಯಲ್ಲಿ ಪ್ರದೀಪ್ ಈಶ್ವರ ಮಾತನಾಡಿದ ಅವರು, ಯಾವುದೇ ಕಾರಣಕ್ಕೂ ಬಿಜೆಪಿ ಅಭ್ಯರ್ಥಿಗೆ ಮತ ಹಾಕಬೇಡಿ ಒಂದು ವೇಳೆ ಬಿಜೆಪಿ ಅಭ್ಯರ್ಥಿಗೆ ಮತ ಹಾಕಿದರೆ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುತ್ತಾರೆ ಎಂದು ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿಯಲ್ಲಿ ಶಾಸಕ ಪ್ರದೀಪ ಈಶ್ವರ ಸ್ಫೋಟಕ ವಾದಂತಹ ಹೇಳಿಕೆ ನೀಡಿದರು.
ಕೆಲವು ತಿಂಗಳ ಹಿಂದೆ ಮಾಗಡಿ ಶಾಸಕ ಬಾಲಕೃಷ್ಣ ಅವರು ಕೂಡ ಇದೇ ರೀತಿ ಹೇಳಿಕೆ ನೀಡಿದರು ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಮತ ಹಾಕದಿದ್ದರೆ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲಾಗುತ್ತದೆ ಎಂದು ಹೇಳಿಕೆ ನೀಡಿದ್ದರು. ಇದೀಗ ಶಾಸಕ ಪ್ರದೀಪ್ ಈಶ್ವರ್ ಕೂಡ ಅದೇ ರೀತಿ ಹೇಳಿಕೆಯನ್ನು ನೀಡಿದ್ದು, ರಾಜ್ಯದಲ್ಲಿ ಸಂಚಲನ ಸೃಷ್ಟಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಶಾಸಕ ಬಾಲಕೃಷ್ಣ ಹೇಳಿದ್ದೇನು?
ಜನವರಿಯಲ್ಲಿ ಮಾಗಡಿ ತಾಲೂಕು ಕುದೂರು ಹೋಬಳಿಯ ಶ್ರೀಗಿರಿಪುರದಲ್ಲಿ ನಡೆದ ಜನಸಂಪರ್ಕ ಸಭೆಯಲ್ಲಿ ಮಾತನಾಡಿದ್ದ ಬಾಲಕೃಷ್ಣ, ಬಿಜೆಪಿಯವರು ಮಂದಿರದ ಹೆಸರಿನಲ್ಲಿ ಅಕ್ಷತೆ ನೀಡಿ ಮತ ಕೇಳುತ್ತಿದ್ದಾರೆ. ನಾವು ಐದು ಉಚಿತ ಗ್ಯಾರಂಟಿಗಳನ್ನು ನೀಡಿ ಮತ ಕೇಳುತ್ತಿದ್ದೇವೆ. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಹೆಚ್ಚು ಸ್ಥಾನ ದೊರೆಯುವಂತೆ ಮಾಡದಿದ್ದರೆ ಗ್ಯಾರಂಟಿಗಳ ಬಗ್ಗೆ ಜನರಿಗೆ ಒಲವಿಲ್ಲ ಎಂಬ ಸಂದೇಶ ರವಾನೆಯಾಗುತ್ತದೆ. ಈ ಕುರಿತು ಸಿಎಂ ಸಿದ್ದರಾಮಯ್ಯ ಅವರ ಜತೆಗೂ ಮಾತುಕತೆ ನಡೆಸಿದ್ದೇನೆ ಎಂದು ಹೇಳಿದ್ದರು.
ಅಲ್ಲದೆ, ಒಂದು ವೇಳೆ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲನುಭವಿಸಿದರೆ ಗ್ಯಾರಂಟಿ ಯೋಜನೆಗಳು ರದ್ದಾಗಬಹುದು ಎಂದೂ ಅವರು ಹೇಳಿದ್ದರು. ಇದೀಗ ಚಿಕ್ಕಬಳ್ಳಾಪುರದಲ್ಲಿ ಶಾಸಕ ಪ್ರದೀಪ್ ಈಶ್ವರರವರು ಬಿಜೆಪಿ ಅಭ್ಯರ್ಥಿಗೆ ಮತ ಹಾಕಿದರೆ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುತ್ತಾರೆ ಎಂದು ಸ್ಪೋಟಕ ಹೇಳಿಕೆಯನ್ನು ನೀಡಿದ್ದು ರಾಜ್ಯ ರಾಜಕೀಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.