ಹಾಸನ : ಗ್ಯಾರಂಟಿ ಯೋಜನೆಗಳಿಂದ ಜನರು ನೆಮ್ಮದಿಯಾಗಿದ್ದಾರೆ ಎಂದು ಸರ್ಕಾರ ಹೇಳುತ್ತಿದೆ.ಆದರೆ ಜನ ಕೆಲಸ ಇಲ್ಲದೆ ಒಂದೋತ್ತಿನ ಊಟಕ್ಕೆ ಪರದಾಡುವಂತಾಗಿದೆ. ಗ್ಯಾರಂಟಿ ಯೋಜನೆಗಳಿಂದ ಕೆಲ ಕುಟುಂಬಗಳು ಬೀದಿ ಪಾಲಾಗುತ್ತಿವೆ ಎಂದು ಮಾಜಿ ಸಿಎಂ HD ಕುಮಾರಸ್ವಾಮಿ ತಿಳಿಸಿದರು.
ಹಾಸನ ಜಿಲ್ಲೆಯ ಚೆನ್ನಂಗಿಹಳ್ಳಿಯಲ್ಲಿ ಈಶ್ವರ ದೇಗುಲ ದೇವಸ್ಥಾನದ ಪುನರ್ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಭಾಗಿಯಾಗಿದ್ದಾರೆ. ಬಜೆಟ್ ಅಧಿವೇಶನ ಆರಂಭಕ್ಕೂ ಮುನ್ನ ಎಚ್ ಡಿ ಕುಮಾರಸ್ವಾಮಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಅವರಿಗೆ ಶಾಸಕ ಸ್ವರೂಪ ಪ್ರಕಾಶ್ ಮಾಜಿ ಶಾಸಕ ಎಚ್ ಕೆ ಕುಮಾರಸ್ವಾಮಿ ಸಾಥ್ ನೀಡಿದರು.
ಉತ್ತರ ಕರ್ನಾಟಕದ ಯುವಕ ಬಡತನದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಗ್ಯಾರಂಟಿ ಯೋಜನೆಗಳಿಂದ ಕೆಲ ಕುಟುಂಬಗಳು ಬೀದಿ ಪಾಲಾಗುತ್ತಿವೆ ಎಂದು ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಯನ್ನು ಹೆಚ್ ಡಿ ಕುಮಾರಸ್ವಾಮಿ ಇದೆ ವೇಳೆ ಉಲ್ಲೇಖಿಸಿದ್ದಾರೆ.