ರಾಮನಗರ: ಸರ್ಕಾರದ ಐದು ಗ್ಯಾರಂಟಿ ಯೋಜನೆಗಳು ಆರ್ಥಿಕವಾಗಿ ಹಿಂದುಳಿದ ಜನರನ್ನು ಸಬಲರನ್ನಾಗಿಸಿದೆ ಎಂದು ಉಪ ಮುಖ್ಯಮಂತ್ರಿಗಳು, ಜಲ ಸಂಪನ್ಮೂಲ ಸಚಿವರು ಹಾಗೂ ಬೆಂಗಳೂರು ನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.
ಅವರು ಮಾ. 2ರ ಶನಿವಾರ ಚನ್ನಪಟ್ಟಣ ಟೌನಿನ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಮೈದಾನದಲ್ಲಿ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.
ಗ್ಯಾರಂಟಿ ಯೋಜನೆಗಳು ಇಡೀ ದೇಶಕ್ಕೆ ಮಾದರಿಯಾಗಿದ್ದು, ರಾಜ್ಯದಲ್ಲಿನ ಪ್ರತೀ ಕುಟುಂಬವು ಇದರ ಪ್ರಯೋಜನ ಪಡೆಯುತ್ತಿದೆ. ಜಿಲ್ಲೆಯಲ್ಲಿನ ರೈತರಿಗೆ ಉಚಿತ ವಿದ್ಯುತ್ ನೀಡಿ, ವಿದ್ಯುತ್ ಸಮಸ್ಯೆಯನ್ನು ಪರಿಹರಿಸಲಾಗಿದೆ. ಈಗಾಗಲೇ 40 ಸ್ಟೇಷನ್ ಸ್ಥಾಪಿಸಲಾಗಿದೆ. ಉಳುವವನೇ ಭೂ ಒಡೆಯ ಎಂಬುದನ್ನು ತಂದಿದ್ದು ನಮ್ಮ ಸರ್ಕಾರ, ಜಿಲ್ಲೆಯ ಜನರಿಗೆ ಮಂಚನಬೆಲೆ ಹಾಗೂ ವೈ.ಜಿ ಗುಡ್ಡೆಯಿಂದ ಕುಡಿಯುವ ನೀರನ್ನು ಸರಬರಾಜು ಮಾಡಲು ಕ್ರಮ ವಹಿಸಲಾಗಿದೆ ಎಂದರು.
BIG UPDATE: ರಾಮೇಶ್ವರಂ ‘ಕೆಫೆ ಬಾಂಬ್ ಬ್ಲಾಸ್ಟ್’ ಪ್ರಕರಣ: ‘FSL ತನಿಖೆ’ಯಲ್ಲಿ ಮತ್ತೊಂದು ‘ಸ್ಪೋಟಕ ಮಾಹಿತಿ’ ಲಭ್ಯ
ರಾಮನಗರ ಜಿಲ್ಲೆಗೆ 100 ಬಸ್ಸುಗಳನ್ನು ಹೆಚ್ಚುವರಿಯಾಗಿ ನೀಡಲಾಗಿದೆ. ಇದರಿಂದ ಜಿಲ್ಲೆಯ ಜನರು ಇದರ ಪ್ರಯೋಜನ ಪಡೆಯುತ್ತಿದ್ದಾರೆ. ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಈ ಸರ್ಕಾರವು ಶಕ್ತಿಯನ್ನು ತುಂಬಿದೆ. ಚನ್ನಪಟ್ಟಣ ಅಭಿವೃದ್ದಿಗೆ 90 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಗೃಹಲಕ್ಷಿö್ಮ ಯೋಜನೆ ಫಲಾನುಭವಿಗಳಿಗೆ, ಯುವನಿಧಿ ಯೋಜನೆಯ ಫಲಾನಭವಿಗಳಿಗೆ ಚೆಕ್ ವಿತರಿಸಿದರು ಹಾಗೂ 5 ಜನ ಫಲಾನುಭವಿಗಳಿಗೆ ಇ-ಸ್ವತ್ತು ಪತ್ರವನ್ನು ವಿತರಿಸಿದರು.
BREAKING: ರಾಜ್ಯ ಸರ್ಕಾರದಿಂದ ‘ಹಾವು ಕಡಿತ’ಕ್ಕೆ ಚಿಕಿತ್ಸೆ ನೀಡಲು ‘ಮಾರ್ಗಸೂಚಿ’ ಪ್ರಕಟ: ಈ ‘ನಿಯಮ ಪಾಲನೆ’ ಕಡ್ಡಾಯ
IPL-2024ಕ್ಕೂ ಮುನ್ನ ಹೈದರಾಬಾದ್ ತಂಡದ ನೂತನ ನಾಯಕನಾಗಿ ‘ಪ್ಯಾಟ್ ಕಮಿನ್ಸ್’ ನೇಮಕ
ಸಾರಿಗೆ ಮತ್ತು ಮುಜರಾಯಿ ಹಾಗೂ ರಾಮನಗರ ಜಿಲ್ಲಾ ಉಸ್ತುವಾರಿ ಸಚಿವರಾದ ರಾಮಲಿಂಗಾರೆಡ್ಡಿ, ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದ ಸಂಸದರಾದ ಡಿ.ಕೆ. ಸುರೇಶ್, ಮಾಗಡಿ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷರಾದ ಎಚ್.ಸಿ. ಬಾಲಕೃಷ್ಣ, ವಿಧಾನ ಪರಿಷತ್ ಸದಸ್ಯರಾದ ಪುಟ್ಟಣ್ಣ, ಸುಧಾಮದಾಸ್, ಜಿಲ್ಲಾಧಿಕಾರಿ ಡಾ. ಅವಿನಾಶ್ ಮೆನನ್ ರಾಜೇಂದ್ರನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ದಿಗ್ವಿಜಯ್ ಬೋಡ್ಕೆ, ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್ ರೆಡ್ಡಿ ಮತ್ತು ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.