ಬಳ್ಳಾರಿ : ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲದೆ ಹೋದಲ್ಲಿ ಗ್ಯಾರಂಟಿ ಯೋಜನೆಗಳು ರದ್ದಾಗಲಿವೆ ಎಂದು ಹಲವು ಕಾಂಗ್ರೆಸ್ ನಾಯಕರು ಹೇಳಿಕೆ ನೀಡಿದರು ಇದಕ್ಕೆ ಸಚಿವ ಸಂತೋಷ್ ಲಾಡ್ ಪ್ರತಿಕ್ರಿಯೆ ನೀಡಿದ್ದು, ಇದೆಲ್ಲಾ ಸುಳ್ಳು ಮುಂದಿನ ಐದು ವರ್ಷದವರೆಗೆ ಗ್ಯಾರಂಟಿ ಯೋಜನೆಗಳು ಮುಂದುವರಿಯಲಿವೆ ಎಂದು ಸ್ಪಷ್ಟ ಪಡಿಸಿದರು.
ಬಳ್ಳಾರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತೆರಿಗೆ ವಿಚಾರವಾಗಿ ಸಂಸದ ಡಿಕೆ ಸುರೇಶ್ ಮಾತನಾಡಿದ್ದಾರೆ. ಈ ಬಗ್ಗೆ ಎಐಸಿಸಿ ಅಧ್ಯಕ್ಷ ಖರ್ಗೆ ಕೂಡ ಸ್ಪಷ್ಟನೆ ನೀಡಿದ್ದಾರೆ. ನಟಿ ಕಂಗನಾ ಭಿಕ್ಷೆಯಿಂದ ಸ್ವಾತಂತ್ರ್ಯ ಬಂದಿದೆ ಅಂತ ಹೇಳಿದ್ದಾರೆ. ಈ ಬಗ್ಗೆ ಚರ್ಚೆ ಆಗಲೇ ಇಲ್ಲ ಎಂದ ಸಚಿವ ಸಂತೋಷ್ ಲಾಡ್ ತಿಳಿಸಿದರು.
ಈಶ್ವರಪ್ಪ ಏನು ಬೇಕಾದರೂ ಮಾತನಾಡುತ್ತಾರೆ ಚರ್ಚೆಯಾಗುವುದಿಲ್ಲ.ಜೋಶಿ ರಾಜ್ಯ ಸರ್ಕಾರವನ್ನು ತಾಲಿಬಾನಿಗೆ ಹೋಲಿಸಿದ್ದಾರೆ. ಆದರೆ ನಾವು ಮಾತನಾಡುವುದು ಮಾತ್ರ ಚರ್ಚೆ ಆಗುತ್ತೆ. ನಮ್ಮ ತೆರಿಗೆ ಹಣದ ಬಗ್ಗೆ ನಾವು ಹೋರಾಟ ಮಾಡುತ್ತಿದ್ದೇವೆ ಎಂದರು.
ಈ ಬಾರಿಯ ಲೋಕಸಭಾ ಚುನಾವಣೆ ಬಳಿಕ ಗ್ಯಾರಂಟಿ ರದ್ದಾಗುತ್ತೆ ಎಂಬುವುದು ಸುಳ್ಳು. ಐದು ವರ್ಷವೂ ಕೂಡ ಗ್ಯಾರಂಟಿ ಯೋಜನೆಗಳು ಮುಂದುವರೆಯುತ್ತವೆ ಎಂದು ಬಳ್ಳಾರಿಯಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಸ್ಪಷ್ಟಪಡಿಸಿದರು.