ಉಡುಪಿ: ಕರ್ನಾಟಕ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳನ್ನು ಕೇವಲ ಪ್ರಚಾರಕ್ಕಾಗಿ ಜಾರಿಗೆ ತಂದಿಲ್ಲ. ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಹೇಳಿದ್ದಾರೆ.
ಸಮಯಕ್ಕೆ ಸರಿಯಾಗಿ ‘ಚುನಾವಣಾ ಬಾಂಡ್’ಗಳ ಕುರಿತ ಎಲ್ಲಾ ವಿವರ ಆಯೋಗ ಬಹಿರಂಗ ಪಡಿಸಲಿದೆ : ಸಿಇಸಿ ರಾಜೀವ್ ಕುಮಾರ್
ದೇವೇಗೌಡರು ಹೇಳಿದ್ದೇನು, ಮಾಡಿದ್ದೇನು? ದೇವೇಗೌಡರ ಮಾತಲ್ಲೇ ವಿವರಿಸಿದ ಸಿ.ಎಂ.ಸಿದ್ದರಾಮಯ್ಯ
BIG NEWS: ಸದ್ದಿಲ್ಲದೇ ಗ್ರಾಮೀಣ ಪ್ರದೇಶದ ಕಂದಾಯ ಮೂರು ಪಟ್ಟು ಹೆಚ್ಚಳ: ಜನರಿಂದ ಹೆಚ್ಚುವರಿ ತೆರಿಗೆ ವಸೂಲಿ
ಅವರು ಉಡುಪಿಯ ಕುಂಜಿಬೆಟ್ಟುವಿನ ಲಕ್ಷ್ಮೀ ನಾರಾಯಣ ರಾವ್ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಗ್ಯಾರಂಟಿ ಯೋಜನೆಗಳ ಸಮಾವೇಶ ಹಾಗೂ ಜಿಲ್ಲೆಯ ವಿವಿಧ ಕಾಮಗಾರಿಗಳ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು. ಇದೇ ವೇಳೆ ಅವರು ಮಾತನಾಡುತ್ತ, ಐದು ಗ್ಯಾರಂಟಿ ಯೋಜನೆಗಳು ರಾಜ್ಯದ ಜನತೆಯ ಸಂಜೀವಿನಿಯಾಗಿವೆ. ಚುನಾವಣೆ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ, ಐದಕ್ಕೆ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿ, ನಮ್ಮ ಸರ್ಕಾರವು ನುಡಿದಂತೆ ನಡೆದಿದೆ ಎಂದು ಹೇಳಿದರು.