ಬೆಂಗಳೂರು : ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚಿನ ಸೀಟು ಗೆಲ್ಲಿಸಲಿಲ್ಲ ಅಂದರೆ ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕಾಗುತ್ತದೆ ಎಂದು ಗುಬ್ಬಿ ಶಾಸಕ ಶ್ರೀನಿವಾಸ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು ಯಾವ ಅರ್ಥದಲ್ಲಿ ಹೇಳಿದ್ದಾರೆ ಗೊತ್ತಿಲ್ಲ ಎಂದು ತಿಳಿಸಿದರು.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಸಿಎಂ ಬದಲಾವಣೆ ಬಗ್ಗೆ ಗುಬ್ಬಿ ಶಾಸಕ ಶ್ರೀನಿವಾಸ್ ಹೇಳಿಕೆ ವಿಚಾರವಾಗಿ ಶ್ರೀನಿವಾಸ ಯಾವ ಅರ್ಥದಲ್ಲಿ ಹೇಳಿದ್ದಾರೆ ಗೊತ್ತಿಲ್ಲ.ಆ ಬಗ್ಗೆ ತಿಳಿದುಕೊಂಡು ನಾನು ಮಾತನಾಡುತ್ತೇನೆ ಎಂದು ಅವರು ತಿಳಿಸಿದರು.
ನಾಲ್ಕು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ ವಿಚಾರವಾಗಿ ಮಾತನಾಡಿದ ಸಿದ್ದರಾಮಯ್ಯ ಹೈಕಮಾಂಡ್ಗೆ ನಮ್ಮ ಅಭಿಪ್ರಾಯವನ್ನು ಹೇಳಿದ್ದೇವೆ. ಹೆಚ್ಚು ಕಡಿಮೆ ಬಳ್ಳಾರಿ ಕ್ಷೇತ್ರ ಕ್ಲಿಯರ್ ಆಗಿದೆ. ಬಾಕಿ ಇರುವ ಮೂರೂ ಕ್ಷೇತ್ರದ ಬಗ್ಗೆ ನಮ್ಮ ಅಭಿಪ್ರಾಯವನ್ನು ತಿಳಿಸಿದ್ದೇವೆಎಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
‘ಸಿಂಧೂರ’ ಧರಿಸುವುದು ಹಿಂದೂ ಮಹಿಳೆಯ ‘ಧಾರ್ಮಿಕ ಕರ್ತವ್ಯ’ವಾಗಿದೆ : ಕೋರ್ಟ್ ಮಹತ್ವದ ಅಭಿಪ್ರಾಯ
ಶಾಸಕ ಶ್ರೀನಿವಾಸ್ ಹೇಳಿದ್ದೇನು?
ರಾಜ್ಯದಲ್ಲಿ ಇವತ್ತು ನಮ್ಮ ಸರ್ಕಾರ ಇದೆ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚಿನ ಸೀಟು ಗೆಲ್ಲಿಸಲಿಲ್ಲ ಅಂದರೆ ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕಾಗುತ್ತದೆ ಅಂತ ಗುಬ್ಬಿ ಶಾಸಕ ಶ್ರೀನಿವಾಸ್ ಹೇಳಿರುವುದು ಈಗ ರಾಜ್ಯ ರಾಜಕೀಯದಲ್ಲಿ ಹೊಸ ಅಲೆಯನ್ನು ಹುಟ್ಟುಹಾಕಿದೆ.
ಅವರು ತಿಪಟೂರಿನಲ್ಲಿ ನಡೆದ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಈ ಬಗ್ಗೆ ಮಾತನಾಡುತ್ತ ಹೇಳಿದರು. ಇದೇ ವೇಳೇ ಅವರು ಮಾತನಾಡಿ, ಬಡವರ ಪರ ಕೆಲಸ ಮಾಡುವ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನ ಉಳಿಸುವ ಕೆಲಸ ನಾವೆಲ್ಲ ಮಾಡಬೇಕು. ಎಲ್ಲಾ ಕಾರ್ಯಕರ್ತರು ಸಿದ್ದರಾಮಯ್ಯರನ್ನ ಉಳಿಸಿಕೊಳ್ಳುವ ಪ್ರಯತ್ನ ಮಾಡಬೇಕು ಅಂಥ ಅವರುಹೇಳಿದರು.
BREAKING : ‘BRS’ ನಾಯಕಿ ಕೆ ಕವಿತಾರನ್ನ ಮತ್ತೆ ಮೂರು ದಿನಗಳ ಕಾಲ ‘ED’ ಕಸ್ಟಡಿಗೆ ನೀಡಿದ ದೆಹಲಿ ಕೋರ್ಟ್