ಬೆಂಗಳೂರು: ಕೋಲ್ಕತ್ತಾದಲ್ಲಿ ವೈದ್ಯೆಯ ಮೇಲೆ ಅತ್ಯಾಚಾರ ಕೊಲೆ ಪ್ರಕರಣ ಬೆನ್ನಲ್ಲೇ, ರಾಜ್ಯದಲ್ಲಿ ಮುನ್ನೆಚ್ಚರಿಕೆಯ ನಡೆಯನ್ನು ಸರ್ಕಾರ ಅನುಸರಿಸುತ್ತಿದೆ. ಈ ಹಿನ್ನಲೆಯಲ್ಲಿ ರಾಜ್ಯದಲ್ಲಿನ ಮೆಡಿಕಲ್ ಕಾಲೇಜುಗಳಿಗೆ ಶೀಘ್ರವೇ ಮಾರ್ಗಸೂಚಿ ಪ್ರಕಟಿಸುವುದಾಗಿ ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್ ಹೇಳಿದ್ದಾರೆ.
ಶುಕ್ರವಾರ ವಿಕಾಸಸೌಧದಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆ ಮಂಕಿಫಾಕ್ಸ್ ಬಗ್ಗೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಭೆ ನಡೆಸಿ ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು.
ಎಲ್ಲಾ ವೈದ್ಯಕೀಯ ಕಾಲೇಜುಗಳ ನಿರ್ದೇಶಕರಿಗೆ ಶೀಘ್ರವೇ ಹೊಸ ಮಾರ್ಗಸೂಚಿ ಪ್ರಕಟ ಮಾಡುವ ಕುರಿತಂತೆ ಮಾಹಿತಿ ನೀಡಲಾಗುತ್ತದೆ. ಮೆಡಿಕಲ್ ಕಾಲೇಜುಗಳ ಅಸೋಸಿಯೇಷನ್ ಜೊತೆಗೆ ಸಭೆ ನಡೆಸಿ, ತೆಗೆದುಕೊಳ್ಳಬಹುದಾದಂತ ಕ್ರಮಗಳ ಬಗ್ಗೆಯೂ ವರದಿಯನ್ನು ನೀಡುವಂತೆ ಸೂಚಿಸಲಾಗುವುದು ಎಂದರು.
ಈ ಸಭೆಯ ಬಳಿಕ ಮೆಟಿಕಲ್ ಕಾಲೇಜುಗಳಿಂದ ನೀಡುವಂತ ಸೂಚನೆಗಳನ್ನು, ರಾಜ್ಯ ಸರ್ಕಾರದಿಂದ ಉನ್ನತ ಅಧಿಕಾರಿಗಳ ಮಟ್ಟದಲ್ಲಿ ಸಭೆ ನಡೆಸಿ, ಚರ್ಚಿಸಿ, ಸರ್ಕಾರವು ಖಾಸಗಿ ಮೆಡಿಕಲ್ ಕಾಲೇಜುಗಳಿಗೂ ಅನ್ವಯವಾಗುವಂತೆ ಮಾರ್ಗಸೂಚಿಯನ್ನು ಶೀಘ್ರವೇ ಹೊರಡಿಸಲಾಗುತ್ತದೆ ಎಂದು ಹೇಳಿದರು.
ಮಂಕಿಪಾಕ್ಸ್ ಕಾಯಿಲೆ ಮುಂಜಾಗ್ರತ ಕ್ರಮವಾಗಿ ವಿಕ್ಟೋರಿಯಾದಲ್ಲಿ 50 ಬೆಡ್ ಮೀಸಲು: ಶರಣ ಪ್ರಕಾಶ್ ಪಾಟೀಲ್
ಬೆಂಗಳೂರು ಜನತೆ ಗಮನಕ್ಕೆ: ಆ.25ರಂದು ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut
‘ಬಿಜೆಪಿ’ಯವರ ಮಾತು ಕೇಳಿ ’15 ಬಿಲ್’ಗಳನ್ನು ರಾಜ್ಯಪಾಲರು ವಾಪಾಸ್ ಕಳುಹಿಸಿದ್ದಾರೆ: ಡಿ.ಕೆ ಶಿವಕುಮಾರ್ ಕಿಡಿ