ಶೀಘ್ರವೇ ಮೆಡಿಕಲ್ ಕಾಲೇಜುಗಳಿಗೆ ಮಾರ್ಗಸೂಚಿ ಪ್ರಕಟ: ಸಚಿವ ಶರಣ ಪ್ರಕಾಶ್ ಪಾಟೀಲ್

ಬೆಂಗಳೂರು: ಕೋಲ್ಕತ್ತಾದಲ್ಲಿ ವೈದ್ಯೆಯ ಮೇಲೆ ಅತ್ಯಾಚಾರ ಕೊಲೆ ಪ್ರಕರಣ ಬೆನ್ನಲ್ಲೇ, ರಾಜ್ಯದಲ್ಲಿ ಮುನ್ನೆಚ್ಚರಿಕೆಯ ನಡೆಯನ್ನು ಸರ್ಕಾರ ಅನುಸರಿಸುತ್ತಿದೆ. ಈ ಹಿನ್ನಲೆಯಲ್ಲಿ ರಾಜ್ಯದಲ್ಲಿನ ಮೆಡಿಕಲ್ ಕಾಲೇಜುಗಳಿಗೆ ಶೀಘ್ರವೇ ಮಾರ್ಗಸೂಚಿ ಪ್ರಕಟಿಸುವುದಾಗಿ ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್ ಹೇಳಿದ್ದಾರೆ. ಶುಕ್ರವಾರ ವಿಕಾಸಸೌಧದಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆ ಮಂಕಿಫಾಕ್ಸ್ ಬಗ್ಗೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಭೆ ನಡೆಸಿ ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು. ಎಲ್ಲಾ ವೈದ್ಯಕೀಯ ಕಾಲೇಜುಗಳ ನಿರ್ದೇಶಕರಿಗೆ ಶೀಘ್ರವೇ ಹೊಸ ಮಾರ್ಗಸೂಚಿ ಪ್ರಕಟ ಮಾಡುವ … Continue reading ಶೀಘ್ರವೇ ಮೆಡಿಕಲ್ ಕಾಲೇಜುಗಳಿಗೆ ಮಾರ್ಗಸೂಚಿ ಪ್ರಕಟ: ಸಚಿವ ಶರಣ ಪ್ರಕಾಶ್ ಪಾಟೀಲ್