ಬೆಂಗಳೂರು: ರಾಜ್ಯದಲ್ಲಿ ಚಳಿಗಾಲದ ಸಂದರ್ಭದಲ್ಲಿಯೇ ಚಂಡಮಾರುತ ಉಂಟಾಗಿರುವ ಪರಿಣಾಮ, ಚಳಿಯಿಂದಾಗಿ ಜನತೆ ತತ್ತರಿಸಿ ಹೋಗಿದ್ದಾರೆ. ಅದರಲ್ಲೂ ಮಕ್ಕಳು, ವೃದ್ಧರಲ್ಲಿ ಶ್ವಾಸಕೋಶ ಸಂಬಂಧಿ ಸಮಸ್ಯೆಗಳು, ತೊಂದರೆಗಳು ಹೆಚ್ಚಾಗಿದ್ದಾವೆ. ಹೀಗಾಗಿ ಶೀಘ್ರವೇ ಮಕ್ಕಳ ಆರೋಗ್ಯ ರಕ್ಷಣೆ ಕುರಿತಂತೆ ಮಾರ್ಗಸೂಚಿ ಪ್ರಕಟಿಸಲಾಗುತ್ತದೆ ಎಂದು ಆರೋಗ್ಯ ಇಲಾಖೆ ಸಚಿವ ಡಾ.ಕೆ ಸುಧಾಕರ್ ( Minister Dr K Sudhakar ) ಹೇಳಿದ್ದಾರೆ.
ಇಂದು ಸಾಂಕ್ರಾಮಿಕ ರೋಗ ನಿಯಂತ್ರಣ ( Epidemic Disease Control ) ಕುರಿತಂತೆ ತಮ್ಮ ಅಧ್ಯಕ್ಷತೆಯಲ್ಲಿ ನಡೆದಂತ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಚಳಿಗಾಲದಲ್ಲಿಯೇ ಚಂಡಮಾರುತದ ಎಫೆಕ್ಟ್ ಎದುರಾಗಿದೆ. ಹೀಗಾಗಿ ಮಕ್ಕಳು ಮತ್ತು ವೃದ್ಧರಲ್ಲಿ ಸೋಂಕು ಕಾಣಿಸಿಕೊಳ್ಳುತ್ತಿದೆ. ಶ್ವಾಸಕೋಶದ ಸಮಸ್ಯೆ ಹಾಗೂ ಮಕ್ಕಳಲ್ಲಿ ಸೋಂಕು ಕಾಣಿಸಿಕೊಳ್ಳುತ್ತಿದೆ ಎಂದರು.
ಚಳಿಗಾಲದ ವೇಳೆಯಲ್ಲಿ ಮಕ್ಕಳಲ್ಲಿ ಉಂಟಾಗುತ್ತಿರುವಂತ ಸಾಂಕ್ರಾಮಿಕ ರೋಗಗಳ ನಿಯಂತ್ರಣ ಕುರಿತು ಮಾರ್ಗಸೂಚಿ ಬಿಡುಗಡೆ ಮಾಡಲಾಗುತ್ತದೆ. ಎಲ್ಲಾ ಜಿಲ್ಲೆಗಳ ಜಿಲ್ಲಾ ಆರೋಗ್ಯಾಧಿಕಾರಿಗಳ ದೃಷ್ಠಿಯಿಂದ ಗೈಡ್ ಲೈನ್ ಬಿಡುಗಡೆ ಮಾಡಲಾಗುತ್ತದೆ ಎಂದು ಹೇಳಿದರು.
BIGG NEWS: ಮೈಸೂರಿನಲ್ಲಿ ಬಸ್ ಡಿಪೋ ಬಳಿ ಅಧಿಕಾರಿ ಮೇಲೆ ಹಲ್ಲೆ ನಡೆಸಲು ಮಚ್ಚು ಹಿಡಿದ ಮಹಿಳೆ
ಈಗಾಗಲೇ ಚಂಡಮಾರುತದ ಕಾರಣ ಎರಡು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ನಾಳೆ ಮಾಂಡೌಸ್ ಚಂಡಮಾರುತ ಸಹಜ ಸ್ಥಿತಿ ಬರುವ ಸಾಧ್ಯತೆ ಇದೆ. ಹೀಗಾಗಿ ಇಂದು ನಾಳೆ ಎಚ್ಚರಿಕೆಯಿಂದ ಇರುವಂತೆ ಜನತೆಯಲ್ಲಿ ಮನವಿ ಮಾಡಿದರು.