ನವದೆಹಲಿ: ಗುಜರಾತ್ ವಿಧಾನಸಭೆ ಚುನಾವಣೆಗೆ (Gujarat Assembly Election) ಇಂದು ಕೇಂದ್ರ ಚುನಾವಣಾ ಆಯೋಗ (Election Commission) ದಿನಾಂಕ ಘೋಷಣೆ ಮಾಡಿದ್ದು, ಎರಡು ಹಂತಗಳಲ್ಲಿ ಮತದಾನ ನಡೆಯಲಿದ್ದು, ಡಿಸೆಂಬರ್ 8 ಕ್ಕೆ ಫಲಿತಾಂಶ ಪ್ರಕಟವಾಗಲಿದೆ.
ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್ ಚುನಾವಣಾ ದಿನಾಂಕ ಘೋಷಣೆ ಮಾಡಿದ್ದು, ಗುಜರಾತ್ ವಿಧಾನಸಭೆ ಚುನಾವಣೆಗೆ , ಎರಡು ಹಂತಗಳಲ್ಲಿ ಮತದಾನ ನಡೆಯಲಿದ್ದು, ಡಿಸೆಂಬರ್ 8 ಕ್ಕೆ ಫಲಿತಾಂಶ ಪ್ರಕಟವಾಗಲಿದೆ.
ಗುಜರಾತ್ ವಿಧಾನಸಭೆಯ ಅವಧಿ ಮುಂದಿನ ವರ್ಷ ಫೆಬ್ರವರಿ 18ಕ್ಕೆ ಕೊನೆಗೊಳ್ಳಲಿದೆ. ಈ ಮಧ್ಯೆ ಗುಜರಾತ್ ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಗುಜರಾತ್ ವಿಧಾನಸಭೆಯಲ್ಲಿ 182 ವಿಧಾನಸಭೆ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಎರಡು ಹಂತದಲ್ಲಿ ಮತದಾನ ನಡೆಯಲಿದೆ. ಡಿಸೆಂಬರ್ 1 ರಂದು ಮೊದಲ ಹಂತದ ಮತದಾನ ನಡೆಯಲಿದ್ದು, ಡಿಸೆಂಬರ್ 5 ರಂದು ಎರಡನೇ ಹಂತದಲ್ಲಿ ಮತದಾನ ನಡೆಯಲಿದೆ.
2017ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಒಟ್ಟು 182 ಸ್ಥಾನಗಳ ಪೈಕಿ 99 ಸ್ಥಾನಗಳನ್ನು ಗೆದ್ದಿತ್ತು. ಕಾಂಗ್ರೆಸ್ 79 ಸ್ಥಾನಗಳಲ್ಲಿ ಜಯಭೇರಿ ಬಾರಿಸಿದ್ದು, ಇತರರು 4 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದರು. ಕಾಂಗ್ರೆಸ್ ಚುನಾವಣೆಯಲ್ಲಿ ಸೋತರೂ 30 ವರ್ಷಗಳಲ್ಲಿ ಅತಿ ಹೆಚ್ಚು ಸ್ಥಾನಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿತ್ತು.