ಗಿರ್ ಸೋಮನಾಥ್ (ಗುಜರಾತ್): ಕೇರಳದ ನರಬಲಿ ಪ್ರಕರಣದ ಬೆನ್ನಲ್ಲೇ ಗುಜರಾತ್ನಲ್ಲಿ ಇಂಥದ್ದೇ ಒಂದು ಪ್ರಕರಣ ಬೆಳಕಿಗೆ ಬಂದಿದೆ.
ಗುಜರಾತಿನ ಗಿರ್ ಸೋಮನಾಥ್ ಜಿಲ್ಲೆಯ ಧಾರಾ ಗಿರ್ ಗ್ರಾಮದ ಕುಟುಂಬವೊಂದು ಆರ್ಥಿಕ ಲಾಭಕ್ಕಾಗಿ ತಮ್ಮ 14 ವರ್ಷದ ಮಗಳನ್ನೇ ಬಲಿ ಕೊಟ್ಟಿದ್ದಾರೆ ಎಂಬ ಆರೋಪ ಹೊತ್ತಿದೆ. ಈ ಬಗ್ಗೆ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದು, ಪ್ರಕರಣ ಇದೀಗ ಹೊರಬಿದ್ದಿದೆ.
ನವರಾತ್ರಿಯ ದಿನ (ಅಕ್ಟೋಬರ್ 3) ಈ ಘಟನೆ ನಡೆದಿದ್ದು, ಗ್ರಾಮಸ್ಥರ ಮಾಹಿತಿ ಮೇರೆಗೆ ಪೊಲೀಸರು ಮತ್ತು ವಿಧಿ ವಿಜ್ಞಾನ ಪ್ರಯೋಗಾಲಯದ ತಂಡವು ಪ್ರಕರಣದ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸುತ್ತಿದೆ.
ಕುಟುಂಬಕ್ಕೆ ಐಶ್ವರ್ಯ ಬರಲಿ ಎಂಬ ನಂಬಿಕೆಯಿಂದ ಅಕ್ಟೋಬರ್ 3ರ ರಾತ್ರಿ ಮಗಳನ್ನು ಬಲಿ ಕೊಡಲಾಗಿದ್ದು, ಆಕೆ ಮತ್ತೆ ಮರುಜನ್ಮ ಸಿಗುತ್ತದೆ ಎಂಬ ತಪ್ಪು ಕಲ್ಪನೆ ಕುಟುಂಬದಲ್ಲಿ ಇದ್ದು, ನಾಲ್ಕು ದಿನ ಶವ ಇಟ್ಟುಕೊಂಡಿದ್ದರು. ನಂತರ ಕೆಲವೇ ಕುಟುಂಬ ಸದಸ್ಯರು ಮತ್ತು ಸಂಬಂಧಿಕರ ಸಮ್ಮುಖದಲ್ಲಿ ಬಾಲಕಿಯನ್ನು ಅವರ ಜಮೀನಿನಲ್ಲಿಯೇ ಅಂತ್ಯಸಂಸ್ಕಾರ ಮಾಡಲಾಗಿದೆ ಎಂದು ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿ ಅನುಮಾನ ವ್ಯಕ್ತಪಡಿಸಿದ್ದಾರೆ.
BIGG NEWS: ಕಲಬುರಗಿಯಲ್ಲಿ ಸಾರಿಗೆ ಬಸ್ ಚಾಲಕನ ತಲೆ ಮೇಲೆ ಕಲ್ಲು ಎತ್ತಿಹಾಕಿ ಬರ್ಬರ ಹತ್ಯೆ