ಭುಜ್: ಗುಜರಾತ್ನ ಕಚ್ ಜಿಲ್ಲೆಯಲ್ಲಿ ಶುಕ್ರವಾರ ಖಾಸಗಿ ಬಸ್ ಮತ್ತು ಟ್ರಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಐದು ಜನರು ಸಾವನ್ನಪ್ಪಿದ್ದಾರೆ ಮತ್ತು 23 ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಹೆದ್ದಾರಿಯ ಕೇರಾ ಗ್ರಾಮದ ಬಳಿ ಮಧ್ಯಾಹ್ನ 1 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದ್ದು, ಗಾಯಗೊಂಡವರನ್ನು ಭುಜ್ನ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಮುಂದ್ರಾದಿಂದ ಭುಜ್ಗೆ ಬರುತ್ತಿದ್ದ ಟ್ರಕ್ ಮತ್ತು ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿದೆ. ನಾಲ್ವರು ಸ್ಥಳದಲ್ಲೇ ಮೃತಪಟ್ಟರೆ, ಓರ್ವ ಪ್ರಯಾಣಿಕ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ. ಒಟ್ಟು ಐದು ಜನರು ಸಾವನ್ನಪ್ಪಿದ್ದಾರೆ ಎಂದು ಕಚ್ ಪಶ್ಚಿಮ ಪೊಲೀಸ್ ವರಿಷ್ಠಾಧಿಕಾರಿ ವಿಕಾಸ್ ಸುಂಡಾ ತಿಳಿಸಿದ್ದಾರೆ.
ಅಪಘಾತದಲ್ಲಿ 23 ಜನರು ಗಾಯಗೊಂಡಿದ್ದು, ಭುಜ್ನ ಜೆಕೆ ಜನರಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಗಾಯಗೊಂಡವರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ಜಿಲ್ಲಾಧಿಕಾರಿ ಅಮಿತ್ ಅರೋರಾ ತಿಳಿಸಿದ್ದಾರೆ.
ಶಿವಮೊಗ್ಗ: ನಾಳೆ ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut
ಬೆಂಗಳೂರು ಜನತೆ ಗಮನಕ್ಕೆ: ನಾಳೆ ಈ ಏರಿಯಾಗಳಲ್ಲಿ ಬೆಳಿಗ್ಗೆ 10ರಿಂದ ಕರೆಂಟ್ ಇರಲ್ಲ | Power Cut