ಅಹ್ಮದಾಬಾದ್: ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಸ್ವಯಂ ಘೋಷಿತ ದೇವಮಾನವ ಅಸಾರಾಮ್ ಗೆ ಗುಜರಾತ್ ಹೈಕೋರ್ಟ್ ಶುಕ್ರವಾರ ಮೂರು ತಿಂಗಳ ತಾತ್ಕಾಲಿಕ ಜಾಮೀನು ನೀಡಿದೆ.
ಗುಜರಾತ್ ಪೊಲೀಸರು ದಾಖಲಿಸಿದ್ದ ಅತ್ಯಾಚಾರ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಜನವರಿ 7 ರಂದು ಅಸಾರಾಮ್ ಅವರಿಗೆ ಮಾರ್ಚ್ 31 ರವರೆಗೆ ಮಧ್ಯಂತರ ಜಾಮೀನು ನೀಡಿತ್ತು. ಪ್ರಸ್ತುತ ಅವರು ರಾಜಸ್ಥಾನದ ಜೋಧಪುರದಲ್ಲಿ ಆಯುರ್ವೇದ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮೂರು ತಿಂಗಳ ಅವಧಿ ಸೋಮವಾರ ಕೊನೆಗೊಳ್ಳುತ್ತಿರುವುದರಿಂದ, ಅವರ ವಕೀಲರು ಇನ್ನೂ ಮೂರು ತಿಂಗಳ ಜಾಮೀನು ಕೋರಿ ಗುಜರಾತ್ ಹೈಕೋರ್ಟ್ಗೆ ಮೊರೆ ಹೋಗಿದ್ದರು