ನವದೆಹಲಿ: ಗುಜರಾತ್ ಮತ್ತು ಹಿಮಾಚಲ ಪ್ರದೇಶದ ವಿಧಾನಸಭಾ ಚುನಾವಣೆಯ ದಿನಾಂಕವನ್ನು ಇಂದು ಪ್ರಕಟಿಸಲಾಗುವುದು. ಚುನಾವಣಾ ಆಯೋಗ(Election Commission)ವು ಚುನಾವಣಾ ವೇಳಾಪಟ್ಟಿಯನ್ನು ಮಧ್ಯಾಹ್ನ 3 ಗಂಟೆಗೆ ಪ್ರಕಟಿಸಲಿದೆ ಎಂದು ಚುನಾವಣಾ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.
ಭಾರತ ಚುನಾವಣಾ ಆಯೋಗ ಇಂದು ದೆಹಲಿಯಲ್ಲಿ ಪತ್ರಿಕಾಗೋಷ್ಠಿ ನಡೆಸಲಿದ್ದು, ಗುಜರಾತ್ ಮತ್ತು ಹಿಮಾಚಲ ಪ್ರದೇಶದ ವಿಧಾನಸಭಾ ಚುನಾವಣೆಯ ವೇಳಾಪಟ್ಟಿಯನ್ನು ಮಧ್ಯಾಹ್ನ 3 ಗಂಟೆಗೆ ಪ್ರಕಟಿಸಲಿದೆ ಎಂದು ಚುನಾವಣಾ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.
Election Commission of India to hold a press conference later today, in Delhi. The election schedule of Assembly elections to Gujarat and Himachal Pradesh to be announced. pic.twitter.com/Xd2NGdfnmQ
— ANI (@ANI) October 14, 2022
ಗುಜರಾತ್ ಅಸೆಂಬ್ಲಿಯ ಅವಧಿ ಮುಂದಿನ ವರ್ಷ ಫೆಬ್ರವರಿ 18 ರಂದು ಕೊನೆಗೊಳ್ಳುತ್ತದೆ ಮತ್ತು ಹಿಮಾಚಲ ಪ್ರದೇಶದ ಅವಧಿಯು ಜನವರಿ 8 ರಂದು ಕೊನೆಗೊಳ್ಳುತ್ತದೆ. ಆಯೋಗದ ಅಧಿಕಾರಿಗಳು ಇತ್ತೀಚೆಗೆ ಚುನಾವಣಾ ಸಿದ್ಧತೆಯನ್ನು ಪರಿಶೀಲಿಸಲು ಎರಡೂ ರಾಜ್ಯಗಳಿಗೆ ಭೇಟಿ ನೀಡಿದ್ದರು.
BIGG NEWS: ಸ್ಲಂ ನಿವಾಸಿ ಮಕ್ಕಳ ಶಿಕ್ಷಣಕ್ಕಾಗಿ ಪ್ರತಿ ಕುಟುಂಬಕ್ಕೆ 5 ಸಾವಿರ ರೂ. ಚೆಕ್ ವಿತರಣೆ ; ಕೆಜಿಎಫ್ ಬಾಬು