ಗುಜರಾತ್ : ಇಂದು ಗುಜರಾತ್ ವಿಧಾನಸಭಾ ಚುನಾವಣೆ(Gujarat Assembly polls)ಯ 2ನೇ ಹಂತದ ಮತದಾನ ನಡೆಯಲಿದೆ. ಡಿಸೆಂಬರ್ 8 ರಂದು ಮತ ಎಣಿಕೆ ನಡೆಯಲಿದೆ.
ಗುಜರಾತ್ನ ಅಹಮದಾಬಾದ್, ಗಾಂಧಿನಗರ, ಮೆಹಸಾನಾ, ಪಟಾನ್, ಬನಸ್ಕಾಂತ, ಸಬರ್ಕಾಂತ, ಅರಾವಳಿ, ಮಹಿಸಾಗರ, ಪಂಚಮಹಲ್, ದಾಹೋದ್, ವಡೋದರಾ, ಆನಂದ್, ಖೇಡಾ ಮತ್ತು ಛೋಟಾ ಉದಯ್ಪುರ ಜಿಲ್ಲೆಗಳ 93 ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟು 833 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದಾರೆ.
ಕಚ್, ಸೌರಾಷ್ಟ್ರ ಮತ್ತು ದಕ್ಷಿಣ ಗುಜರಾತ್ನಲ್ಲಿ 89 ಸ್ಥಾನಗಳಿಗೆ ನಡೆದ ಮೊದಲ ಹಂತದ ಮತದಾನ ಡಿಸೆಂಬರ್ 1 ರಂದು ಮುಕ್ತಾಯಗೊಂಡಿದ್ದು, ಒಟ್ಟಾರೆ ಶೇ.63.31ರಷ್ಟು ಮತದಾನವಾಗಿದೆ.
ರಾಜ್ಯವು ಬಹಳ ಹಿಂದಿನಿಂದಲೂ ಬಿಜೆಪಿ ಭದ್ರಕೋಟೆಯಾಗಿದ್ದು, ಏಳನೇ ಅವಧಿಗೆ ಮತ್ತೆ ಅಧಿಕಾರಕ್ಕೆ ಬರಲು ಪಕ್ಷವು ದೃಷ್ಟಿ ನೆಟ್ಟಿದೆ. ತಮ್ಮ ತಾಯ್ನಾಡಿಗೆ ಭೇಟಿ ನೀಡಿರುವ ಪ್ರಧಾನಿ ಮೋದಿ ಅವರು ಇಂದು ಅಹಮದಾಬಾದ್ನ ರಾನಿಪ್ನ ನಿಶಾನ್ ಶಾಲೆಯಲ್ಲಿ ತಮ್ಮ ಹಕ್ಕು ಚಲಾಯಿಸಲಿದ್ದಾರೆ.
26,409 ಮತಗಟ್ಟೆಗಳಲ್ಲಿ ಮತದಾನ ನಡೆಯಲಿದ್ದು, 29,000 ಕ್ಕೂ ಹೆಚ್ಚು ಪ್ರಿಸೈಡಿಂಗ್ ಅಧಿಕಾರಿಗಳು ಮತ್ತು 84,000 ಮತಗಟ್ಟೆ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಮತದಾರರು ಬೆಳಗ್ಗೆ 8ರಿಂದ ಸಂಜೆ 5ರವರೆಗೆ ಮತದಾನ ಮಾಡಬಹುದಾಗಿದೆ. ಮತದಾನಕ್ಕೆ ಸುಮಾರು 36,000 ವಿದ್ಯುನ್ಮಾನ ಮತಯಂತ್ರಗಳನ್ನು (ಇವಿಎಂ) ಬಳಸಲಾಗುವುದು.
ಶಿಷ್ಯ ವೇತನದ ಕುರಿತು ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ
Rain in karnataka : ಚಳಿಯಿಂದ ತತ್ತರಿಸಿರುವ ಜನತೆಗೆ ಶಾಕ್ : ಇಂದಿನಿಂದ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ
ಶಿಷ್ಯ ವೇತನದ ಕುರಿತು ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ