ಮೊರ್ಬಿ (ಗುಜರಾತ್) : ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್ನ ಮೊರ್ಬಿಗೆ ಭೇಟಿ ನೀಡಲಿದ್ದಾರೆ ಎಂದು ರಾಜ್ಯ ಮುಖ್ಯಮಂತ್ರಿ ಕಚೇರಿಗೆ ಮಾಹಿತಿ ನೀಡಿದೆ.
ಭಾನುವಾರ ಗುಜರಾತ್ನ ಮೊರ್ಬಿಯಲ್ಲಿ ನಡೆದ ಕೇಬಲ್ ತೂಗು ಸೇತುವೆ ದುರಂತವು 140ಕ್ಕೂ ಹೆಚ್ಚು ಮಂದಿಯನ್ನು ಬಲಿ ತೆಗೆದುಕೊಂಡಿದೆ. 100 ಕ್ಕೂ ಹೆಚ್ಚು ಜನರು ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ.
“ಗುಜರಾತ್ ಸರ್ಕಾರ ಭಾನುವಾರ ಸಂಜೆಯಿಂದ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಳನ್ನು ನಡೆಸುತ್ತಿದೆ. ಕೇಂದ್ರವೂ ಸಹ ರಾಜ್ಯ ಸರ್ಕಾರಕ್ಕೆ ಎಲ್ಲಾ ಸಹಾಯವನ್ನು ನೀಡುತ್ತಿದೆ” ಎಂದು ಪ್ರಧಾನಿ ಮೋದಿ ಹೇಳಿದರು.
“ರಾಜ್ಯ ಸರ್ಕಾರವು ಈ ಘಟನೆಯ ತನಿಖೆಗಾಗಿ ಸಮಿತಿಯನ್ನು ರಚಿಸಿದೆ. ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳಲ್ಲಿ ಯಾವುದೇ ಸಡಿಲಿಕೆ ಇರುವುದಿಲ್ಲ ಎಂದು ನಾನು ದೇಶದ ಜನರಿಗೆ ಭರವಸೆ ನೀಡುತ್ತೇನೆ” ಎಂದು ಕೆವಾಡಿಯಾದ ಏಕತಾ ನಗರದಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 147 ನೇ ಜನ್ಮದಿನದ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಪ್ರಧಾನಮಂತ್ರಿಯವರು ಈ ವಿಷಯ ತಿಳಿಸಿದರು.
BIG NEWS : ರಾಜ್ಯದಲ್ಲಿ ಮತ್ತೆ `ಡೆಂಗ್ಯೂ’ ಆತಂಕ : ಒಂದೇ ವಾರದಲ್ಲಿ 195 ಮಂದಿಗೆ ಸೋಂಕು| Dengue Fever
SHOCKING NEWS: 6 ವರ್ಷದ ಬಾಲಕಿಯ ಮೇಲೆ ʻಡಿಜಿಟಲ್ ರೇಪ್ʼ: ಕಾಮುಕ ಅರೆಸ್ಟ್