ವಿಜಯಪುರ : ಜ್ಞಾನಯೋಗಾಶ್ರಮದ ಪರಮಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳು ಲಿಂಗೈಕ್ಯರಾಗಿದ್ದು, ಶ್ರೀಗಳ ನಿಧನಕ್ಕೆ ಇಡೀ ಕರುನಾಡು ಕಂಬನಿ ಮಿಡಿದಿದೆ.
ಇದೀಗ ಸಿದ್ದೇಶ್ವರ ಶ್ರೀಗಳಿಗೆ ಭಾರತ ರತ್ನ ಪ್ರಶಸ್ತಿ ನೀಡಬೇಕೆಂಬ ಕೂಗು ಕೇಳಿ ಬಂದಿದೆ. ಬಾಗಲಕೋಟೆ ಜಿಲ್ಲೆ ಇಳಕಲ್ ವಿಜಯಮಹಾಂತೇಶ್ ಮಠದ ಗುರುಮಹಾಂತ ಶ್ರೀಗಳು, ಸಿದ್ದೇಶ್ವರ ಶ್ರೀಗಳಿಗೆ ಭಾರತ ರತ್ನ ಪ್ರಶಸ್ತಿ ನೀಡಬೇಕೆಂದು ಆಗ್ರಹಿಸಿದ್ದಾರೆ.
ವಿಜಯಪುರದಲ್ಲಿ ಸುದ್ದಿಗಾರರ ಮಾತನಾಡಿದ ಅವರು ಸಿದ್ದೇಶ್ವರ ಶ್ರೀಗಳು ನಾಡಿನ ಮಹಾನ್ ಸಂತರು. ನಡೆದಾಡುವ ದೇವರು. ಅವರಿಗೆ ಜಾತಿಭೇದ ಪಂತವಿಲ್ಲ. ಹಾಗಾಗಿ ಅವರಿಗೆ ಭಾರತ ಸರಕಾರ ಭಾರತರತ್ನ ನೀಡಬೇಕು. ಇದರಿಂದ ಪ್ರಶಸ್ತಿ ಪ್ರಶಸ್ತಿ ಗೌರವ ಹೆಚ್ಚಾಗುತ್ತದೆ. ಆದ್ದರಿಂದ ಸಿದ್ದೇಶ್ವರ ಸ್ವಾಮೀಜಿಗಳಿಗೆ ಭಾರತ ರತ್ನ ನೀಡಬೇಕೆಂದು ಆಗ್ರಹಿಸಿದರು.
ಈಗಾಗಲೇ ಅಗಲಿದ ಸಿದ್ದೇಶ್ವರ ಶ್ರೀಗಳಿಗೆ ರಾಜ್ಯ ಸರ್ಕಾರದಿಂದ ಗೌರವ ನಮನ ಸಲ್ಲಿಕೆಯಾಗಿದ್ದು, ಜ್ಞಾನಯೋಗಾಶ್ರಮಕ್ಕೆ ಸಿದ್ದೇಶ್ವರ ಸ್ವಾಮೀಜಿ ಅಂತಿಮ ಯಾತ್ರೆಯ ಮೆರವಣಿಗೆ ಹೊರಟಿದೆ.ಹೂವಿನಿಂದ ಅಲಂಕೃತಗೊಂಡ ತೆರೆದ ವಾಹನದಲ್ಲಿ ಶ್ರೀಗಳ ಅಂತಿಮ ಯಾತ್ರೆ ಸಾಗುತ್ತಿದ್ದು, ಯಾತ್ರೆಗೆ ಲಕ್ಷಾಂತರ ಮಂದಿ ಭಕ್ತ ಗಣ ಸಾಕ್ಷಿಯಾಗಿದೆ. ಸುಮಾರು 7-8 ಕಿಮೀ ದೂರವಿರುವ ಜ್ಞಾನಯೋಗಾಶ್ರಮಕ್ಕೆ ಯಾತ್ರೆ ಸಾಗುತ್ತಿದೆ. ನಂತರ ಜ್ಞಾನಯೋಗಾಶ್ರಮದಲ್ಲಿ ಸಿದ್ದೇಶ್ವರ ಶ್ರೀಗಳ ಸಂಸ್ಕಾರ ನಡೆಯಲಿದೆ. ಶ್ರೀಗಳ ಇಚ್ಚೆಯಂತೆ ಅವರ ದೇಹಕ್ಕೆ ಅಗ್ನಿಸ್ಪರ್ಶ ಮಾಡಲಾಗುತ್ತದೆ.
ವಿಜಯಪುರದಲ್ಲಿ ಸೈನಿಕ ಶಾಲೆ ಆವರಣದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಅಗಲಿದ ಶ್ರೀಗಳಿಗೆ ಸರ್ಕಾರಿ ಗೌರವ ನಮನ ಸಲ್ಲಿಸಲಾಯಿತು. ಸಿಎಂ ಬಸವರಾಜ ಬೊಮ್ಮಾಯಿ ಅಂತಿನ ನಮನ ಸಲ್ಲಿಸಿದರು. ಪೊಲೀಸ್ ಬ್ಯಾಂಡ್ ನಿಂದ ರಾಷ್ಟ್ರಗೀತೆ ಮೂಲಕ ಸ್ವಾಮೀಜಿಗೆ ನಮನ ಸಲ್ಲಿಸಲಾಯಿತು. ನಂತರ ಸಿಎಂ ಬೊಮ್ಮಾಯಿ ಶ್ರೀಗಳ ಪಾರ್ಥಿವ ಶರೀರಕ್ಕೆ ಪುಷ್ಪ ನಮನ ಸಲ್ಲಿಸಿದರು.
KPTCL Recruitment: ಕೆಪಿಟಿಸಿಎಲ್ ನೇಮಕಾತಿ: ತಾತ್ಕಾಲಿಕ ಅಂಕಪಟ್ಟಿ ಪ್ರಕಟ