ಬೆಂಗಳೂರು: ಕಾಂಗ್ರೆಸ್ ಕಾರ್ಯಕರ್ತೆಯ ಮೇಲೆ ಹಲ್ಲೆ ಮಾಡಿದಂತ ಆರೋಪದಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿಯ ರಾಜ್ಯಾಧ್ಯಕ್ಷ ಹೆಚ್.ಎಂ ರೇವಣ್ಣಗೆ ಕಾನೂನು ಸಂಕಷ್ಟ ಎದುರಾಗಿದೆ. ಈ ಸಂಬಂಧ ಕಾಂಗ್ರೆಸ್ ಕಾರ್ಯಕರ್ತೆ ಮಹಿಳಾ ಆಯೋಗಕ್ಕೆ ದೂರು ನೀಡಿದ್ದಾರೆ.
ನಿನ್ನೆ ಕುಮಾರಕೃಪಾ ಗೆಸ್ಟ್ ಹೌಸ್ ನಲ್ಲಿ ನಡೆದಂತ ಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತೆ ನಂದಿನಿ ನಾಗರಾಜ್ ಎಂಬುವರು ಭಾಗಿಯಾಗಿದ್ದರು. ಈ ಸಭೆಯನ್ನು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಹೆಚ್.ಎಂ ರೇವಣ್ಣ ನಡೆಸುತ್ತಿದ್ದರು. ಈ ವೇಳೆಯಲ್ಲಿ ಸಮಸ್ಯೆ ಹೇಳೋದಕ್ಕೆ ಮುಂದಾದಂತ ನಂದಿನಿ ನಾಗರಾಜ್ ಅವರ ಮಾತನ್ನು ಆಲಿಸಲಿಲ್ಲ.
ಸಾರ್ ನೋಡಿ ಸಾರ್ ಒಮ್ಮೆ ಅಂತ ಪದೇ ಪದೇ ಕೇಳಿದ್ದಕ್ಕೆ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಹೆಚ್.ಎಂ ರೇವಣ್ಣ ಅವರು ಸಿಟ್ಟಾಗಿ, ಮಹಿಳೆ ಎನ್ನದೇ ನಂದಿನಿ ನಾಗರಾಜ ಮೇಲೆ ಹಲ್ಲೆ ಮಾಡಿರೋ ವೀಡಿಯೋ ವೈರಲ್ ಆಗಿದೆ.
ಈ ವೀಡಿಯೋ ಆಧರಿಸಿ ಕಾಂಗ್ರೆಸ್ ಕಾರ್ಯಕರ್ತೆ ನಂದಿನಿ ನಾಗರಾಜ್ ಅವರು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿಯನ್ನು ಭೇಟಿಯಾಗಿ ಹೆಚ್ ಎಂ ರೇವಣ್ಣ ವಿರುದ್ಧ ದೂರು ನೀಡಿದ್ದಾರೆ. ಹೀಗಾಗಿ ಹೆಚ್.ಎಂ ರೇವಣ್ಣ ಅವರಿಗೆ ಕಾನೂನು ಸಂಕಷ್ಟ ಎದುರಾದಂತೆ ಆಗಿದೆ.
BREAKING : ಮಾ.22 ರಂದು ‘ಅಖಂಡ ಕರ್ನಾಟಕ ಬಂದ್’ : ವಾಟಾಳ್ ನಾಗರಾಜ್ ಅಧಿಕೃತ ಘೋಷಣೆ