ಬೆಂಗಳೂರು : ಏಪ್ರಿಲ್ 9 ರಂದು ಬಾಗಲಕೋಟೆ ಹಾಗೂ ದಾವಣಗೆರೆಯ ದಕ್ಷಿಣ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿದೆ ಆದರೆ ಬಾಗಲಕೋಟೆಯಲ್ಲಿ ದಿವಂಗತ ಎಚ್.ವೈ ಮೇಟಿ ಅವರ ಮಕ್ಕಳಲ್ಲಿ ಟಿಕೆಟ್ ಗಾಗಿ ಭಿನ್ನಮತ ಸ್ಫೋಟಗೊಂಡಿದೆ. ಈ ಹಿನ್ನೆಲೆ ಇಂದು ಸಿಎಂ ಸಿದ್ದರಾಮಯ್ಯ ಅವರನ್ನು ಬೆಂಗಳೂರಿಗೆ ಕರೆದು ಸಂಧಾನ ಮಾಡಿದ್ದು, ಇದೀಗ ಅದು ಯಶಸ್ವಿಯಾಗಿದೆ.
ಹೌದು ಬೆಂಗಳೂರಿಗೆ ಕರೆಯಿಸಿಕೊಂಡು ಮಹತ್ವದ ಸಭೆ ಮಾಡಿದ್ದು, ತಮ್ಮ ಕುಟುಂಬಕ್ಕೆ ನೀಡುತ್ತೇವೆ. ಆದ್ರೆ, ನಾಲ್ವರಲ್ಲಿ ಒಬ್ಬರಿಗೆ ನೀಡಿದರೆ ಉಳಿದವರು ಪಕ್ಷಕ್ಕೆ ಕೆಲಸ ಮಾಡಬೇಕೆಂದು ಸಿದ್ದರಾಮಯ್ಯ ಸಭೆಯಲ್ಲಿ ಖಡಕ್ ಆಗಿ ಹೇಳಿದ್ದಾರೆ. ಇದಕ್ಕೆ ಮೇಟಿ ಮಕ್ಕಳು ಸಹ ಒಪ್ಪಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಈ ಮೂಲಕ ಬಾಗಲಕೋಟೆ ಬೈ ಎಲೆಕ್ಷನ್ ಕಾಂಗ್ರೆಸ್ ಟಿಕೆಟ್ ಮೇಟಿ ಕುಟುಂಬಕ್ಕೆ ಎನ್ನುವುದು ಕನ್ಫರ್ಮ್ ಆದಂತಾಗಿದೆ.
ಶಾಸಕ ಮೇಟಿಯವರ ಹಿರಿಯ ಪುತ್ರ ಮಲ್ಲಿಕಾರ್ಜುನ, ಕಿರಿಯ ಪುತ್ರ ಉಮೇಶ, ಪುತ್ರಿಯರಾದ ಬಾಯಕ್ಕ ಹಾಗೂ ಮಹಾದೇವಿ ಟಿಕೆಟ್ ಆಕಾಂಕ್ಷಿಗಳಾಗಿದ್ದರು. ಮುಖ್ಯವಾಗಿ ಟಿಕೆಟ್ ಸಿಗದಿದ್ದರೆ ಬಂಡಾಯವಾಗಿ ಸ್ಪರ್ಧೆ ಮಾಡುವುದಾಗಿ ಮಹಾದೇವಿ ಬಹಿರಂಗ ಎಚ್ಚರಿಕೆ ನೀಡಿದ್ದರು. ಅಲ್ಲದೇ ಸಾಮಾಜಿಕ ತಾಣದಲ್ಲಿ ಪೋಸ್ಟ್ ಮಾಡಿ ರುವ ಮಹಾದೇವಿ ಅವರ ಅಭಿಮಾನಿಗಳು ‘ಮಾರ್ಚ್ 20 ರಂದು ಮಹಾದೇವಿ ಮೇಟಿ ಅವರು ಅಪಾರ ಬೆಂಬಲಿಗರೊಂದಿಗೆ ನಾಮಪತ್ರ ಸಲ್ಲಿಸಲಿದ್ದಾರೆ ಎನ್ನುವ ಪೋಸ್ಟ್ ಸಂಚಲನ ಸೃಷ್ಟಿಸಿತ್ತು.
ಬಾಗಲಕೋಟೆ ವಿಧಾನಸಭೆ ಕ್ಷೇತ್ರದ ಉಪಚುನಾವಣೆ ಸಂಬಂಧ ಇಂದು ದಿವಂಗತ ಎಚ್.ವೈ. ಮೇಟಿ ಅವರ ಪುತ್ರರಾದ ಮಲ್ಲಿಕಾರ್ಜುನ, ಉಮೇಶ್, ಪುತ್ರಿಯರಾದ ಬಾಯಕ್ಕ ಮತ್ತು ಮಹಾದೇವಿ ಅವರೊಂದಿಗೆ ಸಮಾಲೋಚನೆ ನಡೆಸಿ, ಅವರ ಅಭಿಪ್ರಾಯಗಳನ್ನು ಆಲಿಸಿದೆ. pic.twitter.com/nowOfxD3j1
— Siddaramaiah (@siddaramaiah) March 18, 2026








