ಚಿತ್ರದುರ್ಗ: ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಇದ್ದಿದ್ದರೇ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟ ಆಗುತ್ತಿರಲಿಲ್ಲ ಎಂಬುದಾಗಿ ಕಾಂಗ್ರೆಸ್ ಪಕ್ಷದ ವಿರುದ್ಧವಾಗಿ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ವಾಗ್ಧಾಳಿ ನಡೆಸಿದ್ದಾರೆ.
ಚಿತ್ರದುರ್ಗದಲ್ಲಿ ಇಂದು ಬಿಜೆಪಿ ಬೂತ್ ಪ್ರಮುಖರ ಸಭೆಯಲ್ಲಿ ಭಾಗಿಯಾಗಿ ಮಾತನಾಡಿದಂತ ಅವರು, ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯೇ ಹದಗೆಟ್ಟಿದೆ. ಪೊಲೀಸರಿಗೆ ಫ್ರೀ ಹ್ಯಾಂಡ್ ಇಲ್ಲದ ಕಾರಣ ಬಾಂಬರ್ ಬಂಧನ ವಿಳಂಬವಾಗುತ್ತಿದೆ. ಬಾಂಬರ್ ಬಂಧನ ವಿಚಾರದಲ್ಲಿ ರಾಜಕೀಯ ಹಸ್ತಕ್ಷೇಪ ಆಗುತ್ತಿದೆ ಎಂಬುದಾಗಿ ಗಂಭೀರ ಆರೋಪ ಮಾಡಿದರು.
ರಾಜ್ಯ ಕಾಂಗ್ರೆಸ್ ಸರ್ಕಾರದ ಜನರನ್ನು ವಿಭಜನೆ ಮಾಡುತ್ತಿದ್ದಾರೆ. ಇದೊಂದು ಕರಪ್ಟ್ ಸರ್ಕಾರವಾಗಿದೆ. ಇದಕ್ಕೆ ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟವೂ ಕಾರಣವಾಗಿದೆ. ಕರಪ್ಟ್ ಕಾಂಗ್ರೆಸ್ ಪಕ್ಷವನ್ನು ಮನಗೆ ಕಳುಹಿಸಿ, ಡಬಲ್ ಇಂಜಿನ್ ಸರ್ಕಾರವನ್ನು ಜಾರಿಗೆ ತರುವಂತೆ ಜನರಲ್ಲಿ ಕರೆ ನೀಡಿದರು.
ರಾಜ್ಯದಲ್ಲಿ ಡಬಲ್ ಇಂಜನ್ ಸರ್ಕಾರ ಇದ್ದಾಗ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ನಡೆದಿವೆ. ಈ ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ಅಭಿವೃದ್ಧಿಯೇ ಆಗುತ್ತಿಲ್ಲ. ಅದಕ್ಕೆ ಬ್ರೇಕ್ ಕೂಡ ಬಿದ್ದಿದೆ. ದೇಶದ ಅಭಿವೃದ್ಧಿಗಾಗಿ ಮತ್ತೊಮ್ಮೆ ಮೋದಿ ಸರ್ಕಾರ ಆಡಳಿತಕ್ಕೆ ಬರಲಿದೆ. ಕರ್ನಾಟಕದ 28 ಕ್ಷೇತ್ರಗಳಲ್ಲಿ 28 ಕ್ಷೇತ್ರಗಳನ್ನು ಬಿಜೆಪಿ ಗೆಲುವು ಸಾಧಿಸಲಿದೆ ಎಂಬುದಾಗಿ ಭವಿಷ್ಯ ನುಡಿದರು.
BREAKING: ‘ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ’ದ ಅಧ್ಯಕ್ಷರನ್ನಾಗಿ ‘ಸೋಮಣ್ಣ ಬೇವಿನಮರ’ದ ನೇಮಕ
‘ಶಸ್ತ್ರಾಸ್ತ್ರ ಹಿಡಿದು ನೀವೇನು ಯುದ್ಧಕ್ಕೆ ಹೊರಟಿದ್ದೀರಾ.?’: ರೈತ ಪ್ರತಿಭಟನಾಕಾರ ತರಾಟೆಗೆ ತೆಗೆದುಕೊಂಡ ಹೈಕೋರ್ಟ್