ಬೆಂಗಳೂರು : ದೇಶ, ರಾಜ್ಯದಲ್ಲಿ ಉತ್ತಮ ಮಳೆ, ಬೆಳೆಯಾಗಲಿ ಎಂದು ಹಜ್ ಯಾತ್ರಿಗಳು ದೇವರಲ್ಲಿ ಪ್ರಾರ್ಥಿಸಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಜ್ ಗೆ ಪ್ರಯಾಣ ಬೆಳೆಸಿದ ಯಾತ್ರಾರ್ಥಿಗಳಿಗೆ ತಿಳಿಸಿದರು.
ಬೆಂಗಳೂರಿನ ಹೆಗಡೆನಗರದ ಹಜ್ ಭವನದಲ್ಲಿ ಹಜ್ ಯಾತ್ರಾರ್ಥಿಗಳಿಗೆ ಶುಭ ಕೋರಿ ಬಾವುಟ ತೋರಿಸುವ ಮೂಲಕ ಬೀಳ್ಕೊಟ್ಟರು. ಈ ಕಾರ್ಯಕ್ರಮದಲ್ಲಿ ಸಚಿವ ಜಮೀರ್ ಅಹ್ಮದ್ ಖಾನ್, ರಹೀಮ್ ಖಾನ್, ಸಿಎಂ ರಾಜಕೀಯ ಕಾರ್ಯದರ್ಶಿ ನಝೀರ್ ಅಹ್ಮದ್ ಭಾಗಿಯಾಗಿದ್ದರು.
ಯಾತ್ರಿಗಳ ಪ್ರಯಾಣ ಸುಖಕರವಾಗಿರಲಿ ಎಂದು ಹಾರೈಸುತ್ತೇನೆ. ಈ ವರ್ಷ 10,608 ಜನರು ಜಾತ್ರೆ ಕೈಗೊಳ್ಳುತ್ತಿದ್ದಾರೆ. ಅವರೆಲ್ಲರೂ ಆರೋಗ್ಯವಾಗಿ ಬರಲಿ ಎಂದು ಪ್ರಾರ್ಥಿಸುತ್ತೇನೆ. ಸಮಾಜದಲ್ಲಿ ಸಾಮರಸ್ಯ ಸೌಹಾರ್ದತೆ ನೆಲೆಸಲೆಂದು ಹಜ್ ಯಾತ್ರಿಗಳು ದೇವರಲ್ಲಿ ಈ ರೀತಿ ಪ್ರಾರ್ಥನೆ ಮಾಡಬೇಕು.
ದೇಶ ಮತ್ತು ರಾಜ್ಯದಲ್ಲಿ ಮಳೆ ಆಗಿ ಉತ್ತಮ ಬೆಳೆ ಬಂದು ಸಮೃದ್ಧಿ ನೆಲೆಸಲಿ ಎಂದು ಯಾತ್ರಿಗಳು ದೇವರಲ್ಲಿ ಕೇಳಲಿ ಎಂದು ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ರೀತಿ ಹೇಳಿಕೆ ನೀಡಿದರು. ನಂತರ ಬಾವುಟ ತೋರಿಸುವುದರ ಮೂಲಕ ಹಜ್ ಯಾತ್ರಾರ್ಥಿಗಳಿಗೆ ಬಿಳ್ಕೊಟ್ಟರು.
ಬಿತ್ತನೆ ಬೀಜ ಗೊಬ್ಬರಕ್ಕೆ ಕೊರತೆಯಾಗದಂತೆ ನೋಡಿಕೊಳ್ಳಿ
ಮುಂಗಾರು ಕೃಷಿ ಚಟುವಟಿಕೆ ಆರಂಭವಾದ ಹಿನ್ನೆಲೆ ಕೃಷಿ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.ಬಿತ್ತನೆ ಬೀಜ ಗೊಬ್ಬರಕ್ಕೆ ಕೊರತೆಯಾಗದಂತೆ ನೋಡಿಕೊಳ್ಳಿ ಕೃಷಿ ಇಲಾಖೆ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಹಾವೇರಿಯಲ್ಲಿ ಬಿತ್ತನೆ ಬೀಜ ಗೊಬ್ಬರಕ್ಕಾಗಿ ರೈತರ ಸರತಿ ಸಾಲು ಕಂಡುಬಂದಿತು. ರೈತರು ಸಾಲುಗಟ್ಟಿ ನಿಂತಿರುವ ವಿಷಯ ತಿಳಿಯುತ್ತಿದ್ದಂತೆ ಕೃಷಿ ಸಚಿವ ಇಲಾಖೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖಡಕ್ ಸೂಚನೆ ನೀಡಿದ್ದಾರೆ. ತಕ್ಷಣ ಕೃಷಿ ಇಲಾಖೆ ಅಧಿಕಾರಿಗಳ ಮೀಟಿಂಗ್ ಮಾಡಿ ಬೀಜ ಗೊಬ್ಬರದ ದಾಸನ ಬಗ್ಗೆ ಮಾಹಿತಿ ಪಡೆದುಕೊಳ್ಳಿ ಎಂದು ಸೂಚನೆ ನೀಡಿದ್ದಾರೆ.