ಬೆಂಗಳೂರು : ರಾಜ್ಯದಲ್ಲಿ ಇನ್ನುಮುಂದೆ ಹಾಫ್ ಹೆಲ್ಮೆಟ್ ಧರಿಸಿ ಓಡಾಡಿದರೆ ಪೊಲೀಸರು ದಂಡ ವಿಧಿಸಲಿದ್ದಾರೆ.

ಹೌದು, ರಾಜ್ಯದಲ್ಲಿ ಎಲ್ಲಾ ಕಡೆಯಲ್ಲಿ ಹಿಂಬದಿ ಸವಾರರಿಗೆ ಹೆಲ್ಮೆಟ್ ಕಡ್ಡಾಯ ಮಾಡಿದ್ದ ಸರ್ಕಾರ ಇದೀಗ ಹಾಫ್ ಹೆಲ್ಮೆಟ್ ನಿಷೇಧ ಮಾಡಿದೆ. ಇನ್ನುಮುಂದೆ ಬೈಕ್ ಸವಾರರು ಹಾಫ್ ಹೆಲ್ಮೆಟ್ ಧರಿಸುವಂತಿಲ್ಲ. ಹಾಫ್ ಹೆಲ್ಮೆಟ್ ಧರಿಸಿದರೆ ಹೆಲ್ಮೆಟ್ ರಹಿತ ವಾಹನ ಚಾಲನೆ ಎಂದು ಪರಿಗಣಿಸಿ ಸಂಚಾರಿ ಪೊಲೀಸರು ದಂಡ ವಿಧಿಸಲಿದ್ದಾರೆ. ಇನ್ನುಮುಂದೆ ಹಾಫ್ ಹೆಲ್ಮೆಟ್ ಧರಿಸುವವರನ್ನು ಪೊಲೀಸರು ಅಡ್ಡಗಟ್ಟುವುದಿಲ್ಲ, ಬದಲಾಗಿ ಡಿಜಿಟಲ್ ಕ್ಯಾಮೆರಾ ಸಹಾಯದಿಂದ ಸವಾರರನ್ನು ಗುರುತಿಸಿ ಪ್ರಕರಣ ದಾಖಲಿಸಲಿದ್ದಾರೆ.

ಜಾಗೃತಿ ಸಂಚಾರ
ಬೈಕ್ ಸವಾರರು ಹಾಫ್ ಹೆಲ್ಮೆಟ್ ಧರಿಸಬೇಡಿ ಎಂದು ಸಂಚಾರಿ ಪೊಲೀಸರು ಜಾಗೃತಿ ಮೂಡಿಸುತ್ತಿದ್ದಾರೆ. ಹಾಫ್ ಹೆಲ್ಮೆಟ್ ಧರಿಸಿದರೆ ದಂಡ ಹಾಕುತ್ತೇವೆ ಎಂದು ಸಂಚಾರಿ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.ಮುಂದಿನ ದಿನಗಳಲ್ಲಿ ಸಂಚಾರಿ ಪೊಲೀಸರು ಹಾಫ್ ಹೆಲ್ಮಟ್ ಧರಿಸುವ ವಾಹನ ಸವಾರರ ಮೇಲೆಯೂ ದಂಡ ಪ್ರಯೋಗ ಮಾಡಲಿದ್ದಾರೆ. ಆದ್ದರಿಂದ ವಾಹನ ಸವಾರರು ಎಚ್ಚರಿಕೆ ವಹಿಸುವುದು ಉತ್ತಮ.. ಪೂರ್ತಿ ಮುಖ ಮುಚ್ಚದ, ಐಎಸ್ಐ ಮಾರ್ಕ್ ಇಲ್ಲದ, ಹಾಫ್ ಹೆಲ್ಮೆಟ್ ಧರಿಸಬೇಡಿ ಎಂದು ಸಂಚಾರಿ ಪೊಲೀಸರು ಅರಿವು ಮೂಡಿಸುವ ಕಾರ್ಯ ಮಾಡುತ್ತಿದ್ದಾರೆ. ನಗರದಲ್ಲಿ ಸಂಪೂರ್ಣವಾಗಿ ಹಾಫ್ ಹೆಲ್ಮೆಟ್ ನಿಷೇಧಿಸಿದ್ದಾರೆ.

ಹಾಫ್ ಹೆಲ್ಮೆಟ್ಗಳಿಂದ ಅಪಾಯ ಹೆಚ್ಚು ಎಂದು ತಜ್ಞರು ಸಹ ವರದಿ ನೀಡಿದ್ದಾರೆ. ಐಎಸ್ಐ ಮಾರ್ಕ್ ಇಲ್ಲದ ಹೆಲ್ಮೆಟ್ಗಳು ಗಟ್ಟಿ ಇರುವುದಿಲ್ಲ, ಹಾಫ್ ಹೆಲ್ಮೆಟ್ ಪೂರ್ತಿ ಮುಖ ಮುಚ್ಚುವುದಿಲ್ಲ. ಇದರಿಂದಾಗಿ ಅಪಘಾತಗಳು ಆದಾಗ ಮೆದುಳಿಗೆ ಹೆಚ್ಚಿನ ಗಾಯ ಉಂಟಾಗುತ್ತದೆ ಎಂದು ತಜ್ಞರು ಸಹ ವರದಿ ನೀಡಿದ್ದಾರೆ.

ಶಿಗ್ಗಾಂವ್ ಗೆ ಪ್ರಗತಿಪರ ಕೃಷಿಯನ್ನು ಪರಿಚಯಿಸಿದವರು ದಿ.ಹನುಮಂತಗೌಡ್ರು – ಸಿಎಂ ಬೊಮ್ಮಾಯಿ

BREAKING NEWS : ಕರ್ನಾಟಕದ ಒಂದಿಂಚೂ ಜಾಗ ಮಹಾರಾಷ್ಟ್ರಕ್ಕೆ ಬಿಟ್ಟು ಕೊಡಲ್ಲ : ನಾರಾಯಣ ಗೌಡ ಗುಡುಗು

Share.
Exit mobile version