ಹಾವೇರಿ : ಹಾನಗಲ್ ಮಹಿಳೆಯ ಮೇಲೆ ಸಮೂಹಿಕ ಆತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಹಿಳಾ ಆಯೋಗವು ಸ್ವಯಂ ದೂರು ದಾಖಲಿಸಿಕೊಂಡು ಪ್ರಕರಣ ಕುರಿತಂತೆ ಸಮಗ್ರ ವರದಿ ಸಲ್ಲಿಸುವಂತೆ ಕರ್ನಾಟಕ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಸೂಚನೆ ನೀಡಿತ್ತು.
ಅದರಂತೆ ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ವರದಿ ಸಲ್ಲಿಕೆಯಾಗಿದೆ.ಜನವರಿ 12ರಂದು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದ ರಾಷ್ಟ್ರೀಯ ಮಹಿಳಾ ಆಯೋಗವು ಮೂರು ದಿನದೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಕರ್ನಾಟಕ ಪೊಲೀಸ್ ಮಹಾನಿರ್ದೇಶಕರಿಗೆ ಆಯೋಗ ಸೂಚಿಸಿತ್ತು ಆಯೋಗ ಸೂಚಿಸಿತ್ತು.
ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನಲ್ಲಿ ಕಳೆದ ಕೆಲವು ದಿನಗಳ ಹಿಂದೆ ಅಲ್ಪಸಂಖ್ಯಾತ ಮಹಿಳೆಯ ಮೇಲೆ ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ನಡೆಸಿದರು. ಈ ಘಟನೆ ಇಡೀ ರಾಜ್ಯವೇ ಬೆಚ್ಚಿ ಬೀಳಿಸುವಂತಿತ್ತು.ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆ ಮಹಿಳೆ ಹಾನಗಲ್ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಳು. ಘಟನೆಗೆ ಸಂಬಂಧಿಸಿದಂತೆ ಇದೀಗ ಪೊಲೀಸರು 8 ಆರೋಪಿಗಳನ್ನು ಬಂಧಿಸಿದ್ದಾರೆ.