ಕೆ ಎನ್ ಎನ್ ಡಿಜಿಟಲ್ ಡೆಸ್ಕ್ : ಬಹುಭಾಷಾ ನಟಿ ಹನ್ಸಿಕಾ ಮೋಟ್ವಾನಿ ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದ್ದು, ಅವರು (Hansika Motwani) ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ.
ಇತ್ತೀಚಿನ ವರದಿಗಳ ಪ್ರಕಾರ ಹನ್ಸಿಕಾ ಈ ಡಿಸೆಂಬರ್ ನಲ್ಲಿ ಮದುವೆಯಾಗಲಿದ್ದಾರೆ ಎಂದು ಹೇಳಲಾಗಿದೆ. ಮುಂಬೈ ಮೂಲದ ಉದ್ಯಮಿಯೊಂದಿಗೆ ಅರೇಂಜ್ ಮ್ಯಾರೇಜ್ ಮಾಡುವ ತನ್ನ ಕುಟುಂಬದ ನಿರ್ಧಾರಕ್ಕೆ ನಟಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ.
ಇಲ್ಲಿಯವರೆಗೆ ತನ್ನ ಹದಿನಾರು ವರ್ಷಗಳ ಚಲನಚಿತ್ರ ವೃತ್ತಿಜೀವನದಲ್ಲಿ, ಹನ್ಸಿಕಾ ಐವತ್ತು ಚಲನಚಿತ್ರಗಳನ್ನು ಮಾಡಿದ್ದಾರೆ. ಪುನೀತ್ ರಾಜ್ಕುಮಾರ್ ನಟನೆಯ ʻಬಿಂದಾಸ್ʼ ಚಿತ್ರದಲ್ಲಿ ನಾಯಕಿಯಾಗಿ ನಟಿಸಿ ಸೈ ಎನಿಸಿಕೊಂಡಿದ್ದರು. ಈ ಮೂಲಕ ಸ್ಯಾಂಡಲ್ವುಡ್ನಲ್ಲೂ ಗಮನ ಸೆಳೆದಿದ್ದರು, 450 ವರ್ಷದ ಹಳೆಯ ಜೈಪುರದ ಪ್ಯಾಲೇಸ್ನಲ್ಲಿ(Jaipur Palace) ಡೆಸ್ಟಿನೇಷನ್ ವೆಡ್ಡಿಂಗ್ಗೆ ಪ್ಲ್ಯಾನ್ ಮಾಡಲಾಗಿತ್ತು. ಇದಕ್ಕಾಗಿ ತಯಾರಿ ಭರ್ಜರಿಯಾಗಿ ನಡೆಯುತ್ತಿದೆ.
ಚಿತ್ರದುರ್ಗ: ನಾಳೆ ಹಿರಿಯೂರು ತಾಲೂಕಿನಲ್ಲಿ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut
BIGG NEWS : ನ.10 ರಂದು ಬೆಂಗಳೂರಿಗೆ ಪ್ರಧಾನಿ ಮೋದಿ ಭೇಟಿ : 108 ಅಡಿ ಎತ್ತರದ ಕೆಂಪೇಗೌಡರ ಪ್ರತಿಮೆ ಅನಾವರಣ