ಬೆಂಗಳೂರು: ದೇಶಕ್ಕೆ ಸ್ವಾತಂತ್ರ್ಯ ಬಂದು 75ನೇ ವರ್ಷ ಆಗುತ್ತಿರುವ ಹಿನ್ನೆಲೆಯಲ್ಲಿ ಇಂದಿನಿಂದ ಮೂರು ದಿನಗಳ ಕಾಲ ದೇಶದೆಲ್ಲೆಡೆ ಹರ್ ಘರ್ ತಿರಂಗಾ ಅಭಿಯಾನ ನಡೆಯಲಿದೆ. ಕೇಂದ್ರ ಸರ್ಕಾರದ ಹರ್ ಘರ್ ತಿರಂಗಾ ಅಭಿಯಾನವನ್ನು ಯಶಸ್ವಿಗೊಳಿಸಲು ರಾಜ್ಯದಲ್ಲೂ ಸಕಲ ಕ್ರಮ ಕೈಗೊಳ್ಳಲಾಗಿದೆ.
ರಾಜ್ಯದಲ್ಲಿ 1 ಕೋಟಿ ಮನೆಗಳಲ್ಲಿ, ಸರ್ಕಾರಿ, ಖಾಸಗಿ ಕಟ್ಟಡಗಳಲ್ಲಿ ತ್ರಿವರ್ಣ ಧ್ವಜ ಹಾರಿಸುವ ಗುರಿ ಇಟ್ಟುಕೊಳ್ಳಲಾಗಿದೆ.
ಬೆಂಗಳೂರಿನಲ್ಲೂ ಇಂದಿನಿಂದ ಮೂರು ದಿನಗಳ ಕಾಲ ಹರ್ ಘರ್ ತಿರಂಗಾ ಅಭಿಯಾನ ಶುರುವಾಗಿದೆ. ನಗರದ ಬೀದಿ ಬೀದಿಗಳಲ್ಲಿ ರಾಷ್ಟ್ರಧ್ವಜ ಹಾರಾಡುತ್ತಿದೆ. ಬೆಂಗಳೂರಿನ ಪೀಣ್ಯದಲ್ಲಿ ಹರ್ ಘರ್ ತಿರಾಂಗ ಅಭಿಯಾನ ಆರಂಭವಾಗಿದೆ. ಸರ್ಕಾರಿ ಶಾಲೆ ಮಕ್ಕಳಿಂದ 75 ಅಡಿ ಉದ್ದದ ರಾಷ್ಟ್ರಧ್ವಜ ಹಿಡಿದು ಪ್ರಮುಖ ಬೀದಿಗಳಲ್ಲಿ ಜಾಥಾ ಆರಂಭವಾಗಿದೆ. ಸಚಿವರಾದ ಮುನಿರತ್ನಾ ಅವರು ಹರ್ ಘರ್ ತಿರಂಗಾ ಅಭಿಯಾನಕ್ಕೆ ಚಾಲನೆ ನೀಡಿದ್ರು.