ಬೆಂಗಳೂರು ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಆಗಸ್ಟ್ 15, 2024 ರಂದು “ಹರ್ ಘರ್ ತಿರಂಗಾ” ಕಾರ್ಯಕ್ರಮವನ್ನು ಅನುಷ್ಠಾನಗೊಳಿಸುವ ಕುರಿತು ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ.
ಅಸಖ್ಯಾ ಜನರ ಹೋರಾಟ, ತ್ಯಾಗ, ಬಲಿದಾನದಿಂದ ಪಡೆದುಕೊಂಡ ಸ್ವಾತಂತ್ರ್ಯಕ್ಕೆ ಈಗ ಅಮೃತ ಮಹೋತ್ಸವದ ಸಂಭ್ರಮ. ಈ ಸಂಭ್ರಮದ ಸಂದರ್ಭದಲ್ಲಿ ಅದಕ್ಕೆ ಕಾರಣವಾದ ಎಲ್ಲರನ್ನು ಸದಾ ಸ್ಮರಿಸುವುದು ಹಾಗೂ ಗೌರವಿಸುವುದು ನಮ್ಮ ಆದ್ಯ ಕರ್ತವ್ಯವಾಗಿದೆ. ಇಂದಿನ ನಮ್ಮ ಸಂಭ್ರಮಕ್ಕೆ ತಳಪಾಯವಾಗಿ, ಮೆಟ್ಟಿಲುಗಳಾಗಿ ತಮ್ಮ ಜೀವ- ಜೀವನಕ್ಕಾಗಿ ತ್ಯಾಗ ಮಾಡಿದ ಎಲ್ಲರನ್ನು ಮರೆಯದೆ ಸದಾ ಸ್ಮರಿಸುತ್ತಾ ಭವ್ಯ ಭಾರತವನ್ನು ಕಟ್ಟುವಲ್ಲಿ ನಮ್ಮ ಜವಾಬ್ದಾರಿಯುತ ಪಾತ್ರವನ್ನು ನಿರ್ವಹಿಸಬೇಕಿದೆ.
ದೇಶಾದ್ಯಂತ ಭಾರತ ಸ್ವಾತಂತ್ರ್ಯದ 78ರ ಸಂಭ್ರಮವನ್ನು ವೈವಿಧ್ಯಮಯವಾಗಿ ಆಚರಿಸಲಾಗುತ್ತಿದೆ. ಈ ಸಂಭ್ರಮದ ಒಂದು ಭಾಗವಾಗಿ ಕೇಂದ್ರ ಸರ್ಕಾರವು “ಹರ್ ಘರ್ ತಿರಂಗಾ”ಎಂಬ ಘೋಷ ವಾಕ್ಯದೊಂದಿಗೆ 2024ರ ಆಗಸ್ಟ್ 13 ರಿಂದ 15 ರವರೆಗೆ ದೇಶದ ಪ್ರತಿ ಮನೆ- ಮನೆಯಲ್ಲೂ ರಾಷ್ಟ್ರಧ್ವಜವನ್ನು ಹಾರಿಸಿ ದೇಶಭಕ್ತಿಯನ್ನು ಬಿಂಬಿಸುವ ಮೂಲಕ ನಮ್ಮ ರಾಷ್ಟ್ರಪ್ರೇಮವನ್ನು ಅಭಿವ್ಯಕ್ತಗೊಳಿಸಿ ದಾಖಲಿಸುವಂತೆ ಕರೆ ನೀಡಿ ಅಭಿಯಾನ ಹಮ್ಮಿಕೊಂಡಿದೆ.
ಈ ಹಿನ್ನೆಲೆಯಲ್ಲಿ ರಾಜ್ಯದ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲಾ ಕಾಲೇಜುಗಳ ಶಿಕ್ಷಕರು. ಮಕ್ಕಳು, ಶಿಕ್ಷಣ ಇಲಾಖೆಯ ಎಲ್ಲಾ ಸ್ತರದ ಸಿಬ್ಬಂದಿಗಳು ಹಾಗೂ ಅವರ ಕುಟುಂಬ ವರ್ಗದವರು ಸೇರಿ ಸ್ವತ: ತಾವೇ ಕ್ರಿಯಾಶೀಲರಾಗಿ ಭಾಗವಹಿಸುವಂತೆ ಪ್ರೇರೇಪಿಸುವುದು.
ಶಾಲಾ/ಕಾಲೇಜುಗಳ ಹಂತದಲ್ಲಿ ಶಿಕ್ಷಕರು ಹಾಗೂ ಉಪನ್ಯಾಸಕರು ಕೆಳಕಂಡಂತೆ ಕ್ರಮವಹಿಸುವುದು.
- ಶಾಲೆಯಲ್ಲಿ ದಿನಾಂಕ:15.08.2024 ರಂದು ಕಡ್ಡಾಯವಾಗಿ ರಾಷ್ಟ್ರ ಧ್ವಜವನ್ನು ಹಾರಿಸುವುದು.
- ದಿನಾಂಕ:15.08.2024ರಂದು ಎಲ್ಲಾ ಶಾಲೆಗಳಲ್ಲಿ ವಿದ್ಯಾರ್ಥಿಗಳನ್ನು ಒಂದುಗೂಡಿಸಿ ರಾಷ್ಟ್ರಧ್ವಜದ ವಿಶೇಷತೆಯ ಬಗ್ಗೆ ಮಾಹಿತಿಯನ್ನು ಒದಗಿಸುವುದು.
- “ಹರ್ ಘರ್ ತಿರಂಗಾ” ಅಭಿಯಾನದಡಿ ವಿದ್ಯಾರ್ಥಿಗಳಿಗೆ ರಾಷ್ಟ್ರಧ್ವಜದ ಕುರಿತು ಚಿತ್ರಕಲಾ ಸ್ಪರ್ಧೆಯನ್ನು ಏರ್ಪಡಿಸಿ ರಾಷ್ಟ್ರಧ್ವಜವನ್ನು ಸಂಗ್ರಹಿಸುವುದು.
- ಶಾಲೆಗಳಲ್ಲಿ ಎಲ್ಲಾ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಬೋಧಕೇತರ ಸಿಬ್ಬಂದಿಗಳು, ಪೋಷಕರು ತಮ್ಮ ಮನೆಯಲ್ಲಿ ಕುಟುಂಬದ ಸದಸ್ಯರೊಂದಿಗೆ ರಾಷ್ಟ್ರ ಧ್ವಜಾರೋಹಣ ಮಾಡುವಂತೆ ಪ್ರೋತ್ಸಾಹಿಸುವುದು.
- “ಹರ್ ಘರ್ ತಿರಂಗಾ” ಅಭಿಯಾನ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು, ಸಿಬ್ಬಂದಿ ವರ್ಗದವರು ಹಾಗೂ ಪಾಲಕರು ಭಾಗವಹಿಸಿದ ಬಗ್ಗೆ ರಾಷ್ಟ್ರಧ್ವಜದೊಂದಿಗೆ ಭಾವಚಿತ್ರಗಳನ್ನು ತೆಗೆದು (selfies with Tiranga) www.harghartiranga.com ಪ್ರೋತ್ಸಾಹಿಸುವುದು. ಅಪ್ ಲೋಡ್ ಮಾಡಲು ಪ್ರೋತ್ಸಾಹಿಸುವುದು.