ಮುಂಬೈ : ಇಂಡಿಯನ್ ಪ್ರೀಮಿಯರ್ ಲೀಗ್ 2024 ರಲ್ಲಿ, ಮುಂಬೈ ಇಂಡಿಯನ್ಸ್ ತಂಡವು ತನ್ನ ಮೊದಲ ಮೂರು ಪಂದ್ಯಗಳನ್ನು ಸೋತಿದೆ. ಈ ನಡುವೆ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಅವರು ಗುಜರಾತ್ನ ಪ್ರಭಾಸ್ ಪಟಾನ್ನಲ್ಲಿರುವ ಪ್ರಸಿದ್ಧ ಸೋಮನಾಥ ದೇವಾಲಯಕ್ಕೆ ಹಾರ್ದಿಕ್ ಪಾಂಡ್ಯ ಭೇಟಿ ನೀಡಿದ್ದಾರೆ.
ಗುಜರಾತ್ನ ಪ್ರಭಾಸ್ ಪಟಾನ್ನಲ್ಲಿರುವ ಪ್ರಸಿದ್ಧ ಸೋಮನಾಥ ದೇವಾಲಯಕ್ಕೆ ಹಾರ್ದಿಕ್ ಪಾಂಡ್ಯ ಭೇಟಿ ನೀಡಿದ್ದ ಹಾರ್ದಿಕ್ ಪಾಂಡ್ಯ ಅವರು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ದೇವಾಲಯ ಹಿಂದೂ ಧರ್ಮದಲ್ಲಿ ಹೆಚ್ಚಿನ ಪ್ರಾಮುಖ್ಯತೆಯನ್ನು ಹೊಂದಿದೆ.
#WATCH | Gujarat: Indian Cricket Team all-rounder Hardik Pandya offers prayers at Somnath Temple.
Source: Somnath Temple Trust pic.twitter.com/F8n05Q1LSA
— ANI (@ANI) April 5, 2024
ಸದ್ಯ ಹಾರ್ದಿಕ್ ಪಾಂಡ್ಯ ಪೂಜೆಯ ವಿಡಿಯೋ ವೈರಲ್ ಆಗಿದ್ದು, ವೀಡಿಯೊ ತುಣುಕಿನಲ್ಲಿ ಪಾಂಡ್ಯ ಸಾಂಪ್ರದಾಯಿಕ ಉಡುಪನ್ನು ಧರಿಸಿ, ಪ್ರಾರ್ಥಿಸುವುದನ್ನು ತೋರಿಸುತ್ತದೆ. ಸೋಮನಾಥ ದೇವಾಲಯವು ಶಿವನ ಹನ್ನೆರಡು ಜ್ಯೋತಿರ್ಲಿಂಗಗಳಲ್ಲಿ ಒಂದಾಗಿ ಐತಿಹಾಸಿಕ ಮಹತ್ವವನ್ನು ಹೊಂದಿದೆ, ಇದು ವರ್ಷಪೂರ್ತಿ ಪ್ರಪಂಚದಾದ್ಯಂತದ ಭಕ್ತರನ್ನು ಆಕರ್ಷಿಸುತ್ತದೆ.