ದಾವಣಗೆರೆ : ಶಾಲೆಗೆ ಪರವಾನಿಗೆ ನೀಡಲು ಹಣಕ್ಕೆ ಬೇಡಿಕೆಯಿಟ್ಟ ಹರಿಹರ ಕ್ಷೇತ್ರ ಶಿಕ್ಷಣಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ದಾವಣಗೆರೆ ಜಿಲ್ಲೆ ಹರಿಹರದ ಕ್ಷೇತ್ರ ಶಿಕ್ಷಣಾಧಿಕಾರಿ ಸಿದ್ದಪ್ಪ ಶಾಲೆಯ ಪರವಾನಿಗೆ ಕೊಡಲು ರಘುನಾಥ್ ಎಂಬುವವರಿಂದ 15,000 ಲಂಚ ಪಡೆಯುತ್ತಿದ್ದ ವೇಳೆ ಸಿಕ್ಕಿಹಾಕಿಕೊಂಡಿದ್ದಾರೆ.
ಸಿಬಿಎಸ್ಇ ಶಾಲೆಯ ಪರವಾನಿಗೆ ನೀಡಲು 50 ಸಾವಿರ ಹಣಕ್ಕೆ ಲಂಚಕ್ಕೆ ಬೇಡಿಕೆಯಿಟ್ಟಿದ್ದ ಸಿದ್ದಪ್ಪ 15,000 ರೂ ಹಣ ಪಡೆಯುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸದ್ಯ, ಸಿದ್ದಪ್ಪನನ್ನು ಬಂಧಿಸಿರುವ ಲೋಕಾಯುಕ್ತ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.