Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಾಗರದ ಇಂದಿರಾಗಾಂಧಿ ಸರ್ಕಾರಿ ಮಹಿಳಾ ಕಾಲೇಜು ವಿದ್ಯಾರ್ಥಿನಿಯರು ಕುವೆಂಪು ವಿವಿ ಪದವಿ ಪರೀಕ್ಷೆಯಲ್ಲಿ ಅದ್ಭುತ ಸಾಧನೆ; ಆರು ಜನರಿಗೆ ರ‍್ಯಾಂಕ್!

2 ಸಾವಿರ ಕೋಟಿ ರೂ. ನಕಲಿ ‘ITC’ ಜಾಲ ಪತ್ತೆ ಕೇಸ್ : ಸಚಿವ ಜಮೀರ್ ಅಹ್ಮದ್ ಗೆ ಸೇರಿದ ನ್ಯಾಷನಲ್ ಟ್ರಾವೆಲ್ಸ್ ಗೆ ನೋಟಿಸ್ ಜಾರಿ

ಹೊಸನಗರದಲ್ಲಿ ಅರಣ್ಯ ಇಲಾಖೆಯ ಭರ್ಜರಿ ಕಾರ್ಯಾಚರಣೆ: ಅಕ್ರಮ ಮರ ಕಡಿತಲೆ, ಒತ್ತುವರಿ ಮಾಡಿ ಆರೋಪಿ ಅರೆಸ್ಟ್

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಹರಿಯಾಣದಲ್ಲಿ ಹ್ಯಾಟ್ರಿಕ್ ಸಾಧನೆ: ಬೆಂಗಳೂರಿನ ಬಿಜೆಪಿ ಕಚೇರಿ ಬಳಿ ವಿಜಯೋತ್ಸವ ಆಚರಣೆ
KARNATAKA

ಹರಿಯಾಣದಲ್ಲಿ ಹ್ಯಾಟ್ರಿಕ್ ಸಾಧನೆ: ಬೆಂಗಳೂರಿನ ಬಿಜೆಪಿ ಕಚೇರಿ ಬಳಿ ವಿಜಯೋತ್ಸವ ಆಚರಣೆ

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ಹರಿಯಾಣ ರಾಜ್ಯದಲ್ಲಿ ಬಿಜೆಪಿ ಸರಕಾರ ಸತತವಾಗಿ 3ನೇ ಬಾರಿಗೆ ಅಧಿಕಾರ ಪಡೆಯುತ್ತಿದೆ. ಅಲ್ಲಿ ಬಿಜೆಪಿ ಹ್ಯಾಟ್ರಿಕ್ ಸಾಧನೆ ಮಾಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಸಂತಸ ವ್ಯಕ್ತಪಡಿಸಿದರು.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಧ್ಯಾಹ್ನ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಹರಿಯಾಣದಲ್ಲಿ ಕಾಂಗ್ರೆಸ್ ಪಕ್ಷ ಬಹಳಷ್ಟು ಪಿತೂರಿ ನಡೆಸಿತು. ಕಾಂಗ್ರೆಸ್ ಪಕ್ಷ ಏನೇ ತಿಪ್ಪರಲಾಗ ಹಾಕಿದರೂ ಸಹ ಕಾಂಗ್ರೆಸ್ ಗ್ಯಾರಂಟಿಗಿಂತ ನರೇಂದ್ರ ಮೋದಿಜೀ ಅವರ ಅಭಿವೃದ್ಧಿಯ ಗ್ಯಾರಂಟಿ ಬಗ್ಗೆ ಹರಿಯಾಣದ ಜನರು ಮತ್ತೊಮ್ಮೆ ವ್ಯಕ್ತಪಡಿಸಿದ್ದಾರೆ ಎಂದು ಮೆಚ್ಚುಗೆ ಸೂಚಿಸಿದರು.

ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿರುವುದು ನಮ್ಮೆಲ್ಲರಿಗೆ ಸಂತೋಷವನ್ನು ತಂದು ಕೊಟ್ಟಿದೆ. ಪ್ರಜ್ಞಾವಂತ ಜನರು ಮೋದಿಜೀ ಅವರ ನಾಯಕತ್ವಕ್ಕೆ ಇನ್ನಷ್ಟು ಹೆಚ್ಚು ಪುಷ್ಟಿ ಕೊಟ್ಟಿದ್ದಾರೆ. ಜಮ್ಮು ಕಾಶ್ಮೀರದಲ್ಲೂ ಬಿಜೆಪಿ ದೊಡ್ಡ ಸಾಧನೆ ಮಾಡಿದೆ. ಹರಿಯಾಣದ ಫಲಿತಾಂಶವು ಮುಂಬರುವ ಮಹಾರಾಷ್ಟ್ರ ರಾಜ್ಯದ ಚುನಾವಣೆಯಲ್ಲಿ ಸಕಾರಾತ್ಮಕ ಪರಿಣಾಮ ಬೀರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಅಲ್ಲಿ ಕೂಡ ಬಿಜೆಪಿ ಮೈತ್ರಿಕೂಟವು ಜಯಭೇರಿ ಬಾರಿಸಲಿದೆ ಎಂದರು.

ಕರ್ನಾಟಕದಲ್ಲಿ ಸಿದ್ದರಾಮಯ್ಯ ಸರಕಾರ ಅಧಿಕಾರಕ್ಕೆ ಬರಲು ಗ್ಯಾರಂಟಿಗಳನ್ನು ಬಳಸಿ, ಇದೀಗ ಗ್ಯಾರಂಟಿಗಳನ್ನು ಕಸದ ಬುಟ್ಟಿಗೆ ಹಾಕಿದ್ದು ಸೇರಿದಂತೆ ಅನೇಕ ವಿಚಾರಗಳು ಹರಿಯಾಣ ಚುನಾವಣೆಯಲ್ಲಿ ಪ್ರಸ್ತಾಪಕ್ಕೆ ಬಂದಿವೆ. ಅಹಿಂದ ಹೆಸರು ಹೇಳಿಕೊಂಡು ರಾಜ್ಯದ ಅಧಿಕಾರದ ಚುಕ್ಕಾಣಿ ಹಿಡಿದ ಕಾಂಗ್ರೆಸ್ ಸರಕಾರವು ಇವತ್ತು ವಾಲ್ಮೀಕಿ ನಿಗಮದ ಹಗರಣ, ಮುಡಾ ಹಗರಣದ ಮೂಲಕ ಆ ಸಮುದಾಯಗಳಿಗೆ ಅನ್ಯಾಯ ಮಾಡಿದೆ. ಈ ವಿಚಾರವನ್ನೂ ಬಿಜೆಪಿ ಅಲ್ಲಿ ಪ್ರಚಾರ ಮಾಡಿತ್ತು. ಕಾಂಗ್ರೆಸ್ಸಿನ ಡೋಂಗಿ ರಾಜಕಾರಣ, ಕಾಂಗ್ರೆಸ್ಸಿನವರು ಹೇಳುವುದೊಂದು, ಮಾಡುವುದೊಂದು- ಇವೆಲ್ಲವೂ ಅಲ್ಲಿನ ಚುನಾವಣೆ ವೇಳೆ ಚರ್ಚೆ ಆಗಿದೆ ಎಂದು ಪ್ರಶ್ನೆಗೆ ಉತ್ತರ ಕೊಟ್ಟರು.

ಬೊಮ್ಮಾಯಿಯವರ ಶಿಫಾರಸನ್ನು ಯಥಾವತ್ ಜಾರಿಗೊಳಿಸಲು ಒತ್ತಾಯ

ಇವತ್ತು ರಾಜ್ಯದ ಎಲ್ಲ ಪ್ರಮುಖರ ಜೊತೆ ಸಮಾಲೋಚನಾ ಸಭೆ ಕರೆದಿದ್ದೆವು. ಹಿಂದೆ ಬಿ.ಎಸ್.ಯಡಿಯೂರಪ್ಪ, ಬಸವರಾಜ ಬೊಮ್ಮಾಯಿಯವರು ಮುಖ್ಯಮಂತ್ರಿಗಳಾಗಿದ್ದಾಗ ಮೀಸಲಾತಿ ಬಗ್ಗೆ ನಿರ್ಣಯ ಕೈಗೊಂಡಿದ್ದರು. ವರ್ಗೀಕರಣ ಮಾಡುವ ನಿಟ್ಟಿನಲ್ಲಿ ನಿರ್ಧಾರ ಕೈಗೊಂಡಿದ್ದರು. ಇವುಗಳ ಕುರಿತು ಚರ್ಚಿಸಿ ಒಳ ಮೀಸಲಾತಿ ವಿಚಾರವಾಗಿ ಸರ್ವರೊಂದಿಗೆ ಚರ್ಚೆ ಮಾಡಿದ್ದು, ಹಿಂದಿನ ಬೊಮ್ಮಾಯಿ ಸರಕಾರ ಕೇಂದ್ರಕ್ಕೆ ಮಾಡಿದ ಶಿಫಾರಸನ್ನು ರಾಜ್ಯದ ಕಾಂಗ್ರೆಸ್ ಸರಕಾರ ಯಥಾವತ್ತಾಗಿ ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು. ಸದ್ಯವೇ ಬಿಜೆಪಿ ನಿಯೋಗವು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಬೊಮ್ಮಾಯಿ ಸರಕಾರದ ಶಿಫಾರಸನ್ನು ಯಥಾವತ್ತಾಗಿ ಜಾರಿಗೊಳಿಸಲು ಒತ್ತಾಯಿಸಲಿದೆ ಎಂದು ತಿಳಿಸಿದರು.

ಮೈಸೂರು ದಸರಾಗೆ ತೆರಳುವ ರೈಲ್ವೆ ಪ್ರಯಾಣಿಕರಿಗೆ ಗುಡ್ ನ್ಯೂಸ್: ಈ ವಿಶೇಷ ರೈಲುಗಳ ಸಂಚಾರದ ವ್ಯವಸ್ಥೆ

BREAKING : ಹರಿಯಾಣ ವಿಧಾನಸಭೆ ಚುನಾವಣೆ : ಕಾಂಗ್ರೆಸ್ ಅಭ್ಯರ್ಥಿ `ವಿನೇಶ್ ಪೋಗಟ್’ ಗೆ ಭರ್ಜರಿ ಗೆಲುವು | Vinesh Phogat

“ಇನ್ನೊಮ್ಮೆ ಇಂತಹ ಅನಕ್ಷರಸ್ಥರನ್ನ ಆಹ್ವಾನಿಸಬೇಡಿ” : ‘ಝಾಕಿರ್ ನಾಯ್ಕ್’ ಗೌರವಿಸಿದ ಸರ್ಕಾರಕ್ಕೆ ‘ಪಾಕಿಸ್ತಾನಿ’ಯರ ತರಾಟೆ

Share. Facebook Twitter LinkedIn WhatsApp Email

Related Posts

ಸಾಗರದ ಇಂದಿರಾಗಾಂಧಿ ಸರ್ಕಾರಿ ಮಹಿಳಾ ಕಾಲೇಜು ವಿದ್ಯಾರ್ಥಿನಿಯರು ಕುವೆಂಪು ವಿವಿ ಪದವಿ ಪರೀಕ್ಷೆಯಲ್ಲಿ ಅದ್ಭುತ ಸಾಧನೆ; ಆರು ಜನರಿಗೆ ರ‍್ಯಾಂಕ್!

1 Min Read

2 ಸಾವಿರ ಕೋಟಿ ರೂ. ನಕಲಿ ‘ITC’ ಜಾಲ ಪತ್ತೆ ಕೇಸ್ : ಸಚಿವ ಜಮೀರ್ ಅಹ್ಮದ್ ಗೆ ಸೇರಿದ ನ್ಯಾಷನಲ್ ಟ್ರಾವೆಲ್ಸ್ ಗೆ ನೋಟಿಸ್ ಜಾರಿ

1 Min Read

ಹೊಸನಗರದಲ್ಲಿ ಅರಣ್ಯ ಇಲಾಖೆಯ ಭರ್ಜರಿ ಕಾರ್ಯಾಚರಣೆ: ಅಕ್ರಮ ಮರ ಕಡಿತಲೆ, ಒತ್ತುವರಿ ಮಾಡಿ ಆರೋಪಿ ಅರೆಸ್ಟ್

2 Mins Read
Recent News

ಸಾಗರದ ಇಂದಿರಾಗಾಂಧಿ ಸರ್ಕಾರಿ ಮಹಿಳಾ ಕಾಲೇಜು ವಿದ್ಯಾರ್ಥಿನಿಯರು ಕುವೆಂಪು ವಿವಿ ಪದವಿ ಪರೀಕ್ಷೆಯಲ್ಲಿ ಅದ್ಭುತ ಸಾಧನೆ; ಆರು ಜನರಿಗೆ ರ‍್ಯಾಂಕ್!

2 ಸಾವಿರ ಕೋಟಿ ರೂ. ನಕಲಿ ‘ITC’ ಜಾಲ ಪತ್ತೆ ಕೇಸ್ : ಸಚಿವ ಜಮೀರ್ ಅಹ್ಮದ್ ಗೆ ಸೇರಿದ ನ್ಯಾಷನಲ್ ಟ್ರಾವೆಲ್ಸ್ ಗೆ ನೋಟಿಸ್ ಜಾರಿ

ಹೊಸನಗರದಲ್ಲಿ ಅರಣ್ಯ ಇಲಾಖೆಯ ಭರ್ಜರಿ ಕಾರ್ಯಾಚರಣೆ: ಅಕ್ರಮ ಮರ ಕಡಿತಲೆ, ಒತ್ತುವರಿ ಮಾಡಿ ಆರೋಪಿ ಅರೆಸ್ಟ್

BREAKING : 2028 ರವರೆಗೂ ಸಿದ್ದರಾಮಯ್ಯರೆ ಸಿಎಂ ಆಗಿ ಮುಂದುವರಿತಾರೆ : ಶಾಸಕ ಬಸವರಾಜ್ ರಾಯರೆಡ್ಡಿ

State News
KARNATAKA

ಸಾಗರದ ಇಂದಿರಾಗಾಂಧಿ ಸರ್ಕಾರಿ ಮಹಿಳಾ ಕಾಲೇಜು ವಿದ್ಯಾರ್ಥಿನಿಯರು ಕುವೆಂಪು ವಿವಿ ಪದವಿ ಪರೀಕ್ಷೆಯಲ್ಲಿ ಅದ್ಭುತ ಸಾಧನೆ; ಆರು ಜನರಿಗೆ ರ‍್ಯಾಂಕ್!

By ವಸಂತ ಬಿ ಈಶ್ವರಗೆರೆ KARNATAKA 1 Min Read

ಶಿವಮೊಗ್ಗ: ಜುಲೈ 2024ರಲ್ಲಿ ನಡೆದ ಕುವೆಂಪು ವಿಶ್ವವಿದ್ಯಾಲಯದ ಪದವಿ ಪರೀಕ್ಷೆಗಳಲ್ಲಿ ಸಾಗರದ ಶ್ರೀಮತಿ ಇಂದಿರಾಗಾಂಧಿ ಸರ್ಕಾರಿ ಪ್ರಥಮ ದರ್ಜೆ ಮಹಿಳಾ…

2 ಸಾವಿರ ಕೋಟಿ ರೂ. ನಕಲಿ ‘ITC’ ಜಾಲ ಪತ್ತೆ ಕೇಸ್ : ಸಚಿವ ಜಮೀರ್ ಅಹ್ಮದ್ ಗೆ ಸೇರಿದ ನ್ಯಾಷನಲ್ ಟ್ರಾವೆಲ್ಸ್ ಗೆ ನೋಟಿಸ್ ಜಾರಿ

ಹೊಸನಗರದಲ್ಲಿ ಅರಣ್ಯ ಇಲಾಖೆಯ ಭರ್ಜರಿ ಕಾರ್ಯಾಚರಣೆ: ಅಕ್ರಮ ಮರ ಕಡಿತಲೆ, ಒತ್ತುವರಿ ಮಾಡಿ ಆರೋಪಿ ಅರೆಸ್ಟ್

BREAKING : 2028 ರವರೆಗೂ ಸಿದ್ದರಾಮಯ್ಯರೆ ಸಿಎಂ ಆಗಿ ಮುಂದುವರಿತಾರೆ : ಶಾಸಕ ಬಸವರಾಜ್ ರಾಯರೆಡ್ಡಿ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.