ಹಾಸನ: ಡಿಟಿಡಿಸಿ ಕೊರಿಯರ್ ಶಾಪ್ ನಲ್ಲಿ ಮಿಕ್ಸಿ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನಾ ಸ್ಥಳಕ್ಕೆ ಹಿರಿಯ ಅಧಿಕಾರಿಗಳು, ತಜ್ಞರ ತಂಡ ಭೇಟಿ ನೀಡಿದ್ದಾರೆ.
ಇದೀಗ ಘಟನೆ ಕುರಿತು ಹಾಸನ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಹರಿರಾಂ ಶಂಕರ್ ಮಾಹಿತಿ ನೀಡಿದ್ದು, ಘಟನೆಗೂ ಉಗ್ರರ ಕೃತ್ಯಕ್ಕೂ ಯಾವುದೇ ಸಂಬಂಧ ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ಮಿಕ್ಸಿ ಬ್ಲಾಸ್ಟ್ ಆಗಿ ಶಶಿಕುಮಾರ್ ಎಂಬುವವರಿಗೆ ಗಾಯಗಳಾಗಿದೆ. ಸದ್ಯ ಪ್ರಾಣಾಪಾಯದಿಂದ ಅವರು ಪಾರಾಗಿದ್ದಾರೆ. ಘಟನೆ ನಡೆದಾಗ ಗೊಂದಲ ಸೃಷ್ಟಿಯಾಗಿದೆ ಅಷ್ಟೇ, ಇದು ಯಾವುದೇ ಉಗ್ರಗಾಮಿಗಳಿಗೆ ಸಂಬಂಧಿಸಿದ್ದಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ಸ್ಪೋಟದ ಹಿಂದೆ ಯಾವುದೇ ಉಗ್ರರ ಕೃತ್ಯ ಇಲ್ಲ, ಉಗ್ರ ಕೃತ್ಯಕ್ಕೆ ನಡೆಸುವ ರೀತಿ ಯಾವುದೇ ತಂತ್ರಜ್ಞಾನವನ್ನು ಬಳಸಿಲ್ಲ, ಇದು ವೈಯಕ್ತಿಕ ದ್ವೇಷದಿಂದ ಈ ಘಟನೆ ನಡೆದಿದೆ. ಪ್ರಕರಣ ಸಂಬಂಧ ಇಬ್ಬರನ್ನು ಬಂಧಿಸಲಾಗಿದೆ. ತನಿಖೆ ನಡೆಯುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.
ಮಿಕ್ಸಿ ಬ್ಲಾಸ್ಟ್ ಆದ ಸುತ್ತಮುತ್ತಲಿನ ಪೊಲೀಸರು ಅಂಗಡಿ ಬಂದ್ ಮಾಡಿಸಿದ್ದಾರೆ.ಅಲ್ಲಿಗೆ ಯಾರು ಪ್ರವೇಶಿಸದಂತೆ ಬ್ಯಾರಿಕೇಡ್ ಪೊಲೀಸರು ಅಳವಡಿಸಿದ್ದಾರೆ.ಕೊರಿಯರ್ ಶಾಪ್ವೊಂದರಲ್ಲಿ ಮಿಕ್ಸಿ ಬ್ಲಾಸ್ಟ್ ಆಗಿ ಮಾಲೀಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಾಸನದಲ್ಲಿ ನಡೆದಿದೆ. ಇಂದು ಸಂಜೆ 7:30ರ ಸಂದರ್ಭದಲ್ಲಿ ಘಟನೆ ನಡೆದಿದೆ. ಕೊರಿಯರ್ನಲ್ಲಿ ಬಂದಿದ್ದ ಮಿಕ್ಸಿಯನ್ನು ತರೆಯುವ ಸಂದರ್ಭದಲ್ಲಿ ಘಟನೆ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಇದು ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ.
ನಗರದ ಕೆ ಆರ್ ಪುರಂ ಬಡಾವಣೆಯಲ್ಲಿರುವ ಡಿಟಿಡಿಸಿ ಕೊರಿಯರ್ ಕಚೇರಿಯಲ್ಲಿ ಮಿಕ್ಸಿ ಬ್ಲಾಸ್ಸ್ ಆಗಿದೆ. ಕಚೇರಿ ಮಾಲೀಕ ಶಶಿ ಎಂಬುವರ ಬಲಗೈ ಐದು ಬೆರಳುಗಳು ಸಂಪೂರ್ಣ ತುಂಡಾಗಿದ್ದು, ಗಂಭೀರವಾಗಿ ಗಾಯಗೊಂಡಿದ್ದಾರೆ. ಇವರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳೇ ಗಮನಿಸಿ : ಶಿಷ್ಯ ವೇತನಕ್ಕೆ ಅರ್ಜಿ ಸಲ್ಲಿಸಲು ಡಿ.31 ಕೊನೆಯ ದಿನಾಂಕ
ಕರ್ನಾಟಕ ವಿಧಾನಸಭೆ ಅತಂತ್ರ..!? ‘ಕರ್ನಾಟಕ ಟಿವಿ; ಡಿಸೆಂಬರ್ ಸರ್ವೇ ಟ್ರೆಂಡ್