ಹಾಸನ : ಇಂದಿನಿಂದ ಹಾಸನಾಂಬೆ ದೇವಾಲಯ ಓಪನ್ ಆಗಿದೆ. ವರ್ಷಕ್ಕೊಮ್ಮೆ ಮಾತ್ರ ಭಕ್ತರಿಗೆ ಹಾಸನಾಂಬೆಯ ದರ್ಶನ ನೀಡಲಾಗಿದೆ.
ಆಶ್ವೀಜ ಮಾಸದ ಮೊದಲ ಗುರುವಾರ ಮಧ್ಯಾಹ್ನ 12.12 ಕ್ಕೆ ಅರಸು ವಂಶಸ್ಥ ನಂಜರಾಜೆ ಅರಸ್ ಸಂಪ್ರದಾಯದಂತೆ ಗೊನೆಯುಳ್ಳ ಬಾಳೆ ಕಂಬ ಕಡಿದ ನಂತರ ಹಲವು ಗಣ್ಯರ ಸಮ್ಮುಖದಲ್ಲಿ ಶಾಸ್ತ್ರೋಕ್ತವಾಗಿ ದೇವಿಯ ಗರ್ಭಗುಡಿ ಬಾಗಿಲು ತೆರೆಯಿತು.
ಮೊದಲ ದಿನ ಸಾರ್ವಜನಿಕ ದರ್ಶನಕ್ಕೆ ಅವಕಾಶ ಇಲ್ಲ ಎಂದು ಹೇಳಿದ್ದರೂ, ಬೆಳಗ್ಗೆಯಿಂದಲೇ ಸಾವಿರಾರು ಮಂದಿ ದೇವಾಲಯದ ಒಳ-ಹೊರಗೆ ಜಮಾಯಿಸಿದ್ದರು. ಕೆಲವರು ಸರತಿ ಸಾಲಿನಲ್ಲಿ ನಿಂತಿದ್ದರು. ಕಡೆಗೆ ಆಗಮಿಸಿದ್ದ ಎಲ್ಲರಿಗೂ ದರ್ಶನಕ್ಕೆ ಅವಕಾಶ ಕಲ್ಪಿಸಲಾಯಿತು.
ಅ.25,27 ರಂದು ಸಾರ್ವಜನಿಕರಿಗೆ ದರ್ಶನ ಇಲ್ಲ
ಅಕ್ಟೋಬರ್ 15 ರಿಂದ 24 ರವರೆಗೆ ಬೆಳಿಗ್ಗೆ 6 ರಿಂದ ರಾತ್ರಿ 10 ರವರೆಗೆ ಭಕ್ತರಿಗೆ ದೇವಾಲಯವನ್ನು ಪ್ರವೇಶಿಸಲು ಅವಕಾಶ ನೀಡಲಾಗುವುದು ಅ.25 ರಂದು ಗ್ರಹಣ ಹಿನ್ನೆಲೆಯಲ್ಲಿ ಸಾರ್ವಜನಿಕ ದರ್ಶನ ಇರುವುದಿಲ್ಲ. ಅ.26 ಬಲಿಪಾಡ್ಯಮಿ ದಿನದಂದು ಬೆಳಗ್ಗೆ 6 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ದರ್ಶನವಿದ್ದು, 4 ಗಂಟೆಯಿಂದ ರಾತ್ರಿ 11 ಗಂಟೆಯವರೆಗೆ ಸಾರ್ವಜನಿಕರಿಗೆ ದರ್ಶನವಿರುತ್ತದೆ. ಅ.27 ರಂದು ಸಾರ್ವಜನಿಕರಿಗೆ ದರ್ಶನ ಇರುವುದಿಲ್ಲ ಮಧ್ಯಾಹ್ನದ ನಂತರ ಶಾಸ್ತ್ರೋಕ್ತವಾಗಿ ಗರ್ಭಗುಡಿ ಬಾಗಿಲು ಹಾಕಲಾಗುತ್ತದೆ.
ಗೋಪಾಲಯ್ಯ ಹಾಗೂ ಅಧಿಕಾರಿಗಳ ಸುಮ್ಮುಖದಲ್ಲಿ ದೇವಾಲಯದ ಬಾಗಿಲು ತೆರದಿದೆ. ಇಂದಿನಿಂದ ಅಕ್ಟೋಬರ್ 27ರವರೆಗೆ ಭಕ್ತರಿಗೆ ದರ್ಶನಕ್ಕೆ ಅವಕಾಶ ನೀಡಲಾಗಿದೆಇನ್ನು ಹಾಸನಾಂಬ ದೇವಿಯ ದರ್ಶನ ಪಡೆಯಲು ಸಾರ್ವಜನಿಕರಿಗೆ ಅವಕಾಶ ನೀಡುವ ಮೊದಲು ದೇವಾಲಯವನ್ನು ಸ್ವಚ್ಛಗೊಳಿಸಿ, ಹೊಸ ಬಣ್ಣ ಲೇಪವನ್ನು ನೀಡಲಾಗುವುದು. ಇಡೀ ರಾತ್ರಿ ವಿಶೇಷ ಪೂಜೆ ಮತ್ತು ಹೋಮಗಳು ನಡೆದಿದೆ. ಅಕ್ಟೋಬರ್ 14 ರಂದು ಬೆಳಿಗ್ಗೆ 6 ಗಂಟೆಗೆ ದೇವಾಲಯವು ಭಕ್ತರಿಗೆ ತನ್ನ ಬಾಗಿಲುಗಳನ್ನು ತೆರೆಯುತ್ತದೆ. ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಹಾಸನಾಂಬೆ ಹಲವು ಪವಾಡ ಸದೃಶ ಸಂಗತಿಗಳನ್ನು ಮೈಗೂಡಿಸಿಕೊಂಡಿದ್ದಾಳೆ.
‘ವಿದ್ಯುತ್ ಚಾಲಿತ ವಾಹನ ಸವಾರ’ರಿಗೊಂದು ಮಹತ್ವದ ಮಾಹಿತಿ: ‘BESCOM’ನಿಂದ ನಿಮಗೆ ಈ ಸೌಲಭ್ಯವಿದೆ | Electric vehicle
ರಾಜ್ಯದ ‘ಸರ್ಕಾರಿ ಶಾಲಾ ಶಿಕ್ಷಕ’ರಿಗೆ ಗುಡ್ ನ್ಯೂಸ್: ಈಗ ‘ಕಲ್ಯಾಣ ನಿಧಿ ಸೇವೆ’ಗಳು ‘ಆನ್ಲೈನ್’ನಲ್ಲಿ ಲಭ್ಯ