ಹಾಸನ : ನಿನ್ನೆಯಿಂದ ಹಾಸನಾಂಬೆ ದೇವಾಲಯ ಓಪನ್ ಆಗಿದ್ದು, ವರ್ಷಕ್ಕೊಮ್ಮೆ ಮಾತ್ರ ಭಕ್ತರಿಗೆ ಹಾಸನಾಂಬೆಯ ದರ್ಶನ ಸಿಗುತ್ತಿದೆ.
ವರ್ಷಕೊಮ್ಮೆ ತೆರಯುವ ಹಾಸನಾಂಬೆ ದೇಗುಲದ ಗರ್ಭಗುಡಿ ಬಾಗಿಲನ್ನು ತೆರೆಯುವ ಮೂಲಕ ಭಕ್ತರಿಗೆ ಹಾಸನಾಂಬೆಯ ದರ್ಶನಕ್ಕೆ ಅನುವು ಮಾಡಿಕೊಡಲಾಗುತ್ತಿದೆ. ಇಂದಿನಿಂದ ಅ.27ರವರೆಗೂ ದೇಗುಲದ ಬಾಗಿಲು ತೆರೆದಿರಲಿದೆ. ಮೊದಲ ದಿನವೇ ಭಾರಿ ಸಂಖ್ಯೆಯಲ್ಲಿ ಭಕ್ತರು ದೇವಸ್ಥಾನಕ್ಕೆ ಆಗಮಿಸುತ್ತಿದ್ದಾರೆ. ಮುಂಜಾನೆಯೇ ದೊಡ್ಡ ಸಂಖ್ಯೆಯಲ್ಲಿ ಆಗಮಿಸಿ ಭಕ್ತರು ಹಸನಾಂಬೆಯ ದರ್ಶನ ಪಡೆಯಲು ಸರದಿಯ ಸಾಲಿನಲ್ಲಿ ನಿಂತಿದ್ದಾರೆ.ಕಿಲೋಮೀಟರ್ ವರೆಗೂ ಭಕ್ತರ ಸರದಿ ಸಾಲು ಹರಿದಿದೆ.
ಆಶ್ವೀಜ ಮಾಸದ ಮೊದಲ ಗುರುವಾರ ಮಧ್ಯಾಹ್ನ 12.12 ಕ್ಕೆ ಅರಸು ವಂಶಸ್ಥ ನಂಜರಾಜೆ ಅರಸ್ ಸಂಪ್ರದಾಯದಂತೆ ಗೊನೆಯುಳ್ಳ ಬಾಳೆ ಕಂಬ ಕಡಿದ ನಂತರ ಹಲವು ಗಣ್ಯರ ಸಮ್ಮುಖದಲ್ಲಿ ಶಾಸ್ತ್ರೋಕ್ತವಾಗಿ ದೇವಿಯ ಗರ್ಭಗುಡಿ ಬಾಗಿಲು ತೆರೆಯಿತು.
ನಿನ್ನೆ ಮೊದಲ ದಿನ ಸಾರ್ವಜನಿಕ ದರ್ಶನಕ್ಕೆ ಅವಕಾಶ ಇಲ್ಲ ಎಂದು ಹೇಳಿದ್ದರೂ, ಬೆಳಗ್ಗೆಯಿಂದಲೇ ಸಾವಿರಾರು ಮಂದಿ ದೇವಾಲಯದ ಒಳ-ಹೊರಗೆ ಜಮಾಯಿಸಿದ್ದರು. ಕೆಲವರು ಸರತಿ ಸಾಲಿನಲ್ಲಿ ನಿಂತಿದ್ದರು. ಕಡೆಗೆ ಆಗಮಿಸಿದ್ದ ಎಲ್ಲರಿಗೂ ದರ್ಶನಕ್ಕೆ ಅವಕಾಶ ಕಲ್ಪಿಸಲಾಯಿತು.
ಶಿಕ್ಷಕರು, ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ರಾಜ್ಯದ ಶಾಲೆಗಳಿಗೆ ಅ. 31 ರವರೆಗೂ ದಸರಾ ರಜೆ ವಿಸ್ತರಣೆ…?