ಹಾಸನ : ಆಕಸ್ಮಿಕ ಬೆಂಕಿ ತಗುಲಿ ಕೊಟ್ಟಿಗೆಯಲ್ಲಿದ್ದ 5 ಹಸುಗಳು ಹಾಗೂ 1 ಕರು ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಹೆಂಜಗುಂಡನಹಳ್ಳಿ ಎಂಬ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ.ಈ ಹಸುಗಳು ಹಾಗು ಕರು ರೈತ ಶಿವಣ್ಣ ಎಂಬುವವರಿಗೆ ಸೇರಿದ್ದವು ಎಂದು ತಿಳಿದುಬಂದಿದೆ.
ತೋಟದ ಮನೆಗೆ ಬೆಂಕಿ ತಗುಲಿ 5 ಹಸುಗಳು 1 ಕರು ಸಾವನ್ನಪ್ಪಿದೆ. ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಹೆಂಜಗುಂಡನಹಳ್ಳಿ ಗ್ರಾಮದಲ್ಲಿ ತೋಟದ ಮನೆಯಲ್ಲಿ ಸಂಗ್ರಹಟ್ಟಿದ್ದ ತೆಂಗಿನಕಾಯಿಗಳು ಬೆಂಕಿಗೆ ಆಹುತಿ ಆಗಿವೆ.ರಾತ್ರಿ ಹಸುಗಳನ್ನು ರೈತ ಶಿವಣ್ಣ ಕೊಟ್ಟಿಗೆಯಲ್ಲಿ ಕಟ್ಟಿ ಮನೆಗೆ ಬಂದಿದ್ದ.
ಆದರೆ ಬೆಳಿಗ್ಗೆ ಶಿವಣ್ಣ ಹಾಲು ಕರೆಯಲು ಹೋದಾಗ ಈ ಘಟನೆ ಬೆಳಕಿಗೆ ಬಂದಿದೆ. ಘಟನಾ ಸ್ಥಳಕ್ಕೆ ಶಾಸಕ ಕೆಎಂ ಶಿವಲಿಂಗೇಗೌಡ ಹಾಗೂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಘಟನೆ ಕುರಿತಂತೆ ಅರಸೀಕೆರೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.