ಹಾಸನ : ಕಳೆದ ಜನವರಿಯಿಂದ ಚಿಕ್ಕಮಂಗಳೂರು ಹಾಸನ ಮಡಿಕೇರಿ ಕೊಡಗು ಈ ಭಾಗದಲ್ಲಿ ಕಾಡಾನೆ ದಾಳಿಯಿಂದ ಹಲವಾರು ಜನರು ಮೃತಪಟ್ಟಿದ್ದಾರೆ ಇದೀಗ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಕೆಸಗುಲಿ ಎಂಬಲ್ಲಿ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೃದ್ಧೆಯ ಮೇಲೆ ಕಾಡಾನೆ ದಾಳಿ ನಡೆಸಿದೆ.
ಹೌದು ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೃದ್ಧೆಯ ಮೇಲೆ ಕಾಡಾನೆ ದಾಳಿ ನಡೆಸಿದ. ಕೆಸಗುಲಿ ಬಳಿ ಕಾಫಿ ತೋಟದಲ್ಲಿ ದಾಕ್ಷಾಯಿಣಿ ಎನ್ನುವ ವೃದ್ಧೆಯ ಮೇಲೆ ಏಕಾಏಕಿ ಆನೆ ದಾಳಿ ನಡೆಸಿದೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಕೆಸಗುಲಿ ಗ್ರಾಮದಲ್ಲಿ ಆನೆ ದಾಳಿ ಮಾಡಿದೆ.
ಕಾಡಾನೆ ದಾಳಿಯಿಂದ ಲಕ್ಕುಂದದ ದಾಕ್ಷಾಯಿಣಿ ಗಂಭೀರವಾಗಿ ಗಾಯಗೊಂಡಿದ್ದು, ಸದ್ಯ ಸ್ಥಿತಿ ಗಂಭೀರವಾಗಿದೆ. ಈ ವೇಳೆ ಅರಣ್ಯ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿ ದಾಕ್ಷಾಯಿಣಿ ಆರೋಗ್ಯ ವಿಚಾರಿಸಿದ್ದಾರೆ. ಘಟನೆ ಕುರಿತಂತೆ ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.